Nicholas Pooran: ಸಿಕ್ಸರ್ ಸರದಾರರ ಪಟ್ಟಿಗೆ ಪೂರನ್ ಎಂಟ್ರಿ..!
T20 Records: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಇನ್ನು ಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡಿದ್ದಾರೆ. ಇದೀಗ ಸೌತ್ ಆಫ್ರಿಕಾ ವಿರುದ್ಧ 7 ಸಿಕ್ಸ್ ಸಿಡಿಸುವ ಮೂಲಕ ಪೂರನ್ ಈ ಪಟ್ಟಿಯಲ್ಲಿ 3ನೇ ಸ್ಥಾನ ಪಡೆದಿದ್ದಾರೆ.
Updated on: Aug 25, 2024 | 11:53 AM

ಟ್ರಿನಿಡಾಡ್ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ನಿಕೋಲಸ್ ಪೂರನ್ 26 ಎಸೆತಗಳಲ್ಲಿ 65 ರನ್ ಬಾರಿಸಿದ್ದರು. ಈ ವೇಳೆ ಪೂರನ್ ಬ್ಯಾಟ್ನಿಂದ ಬರೋಬ್ಬರಿ 7 ಸಿಕ್ಸ್ಗಳು ಮೂಡಿಬಂದಿದ್ದವು. ಈ ಸಿಕ್ಸರ್ಗಳೊಂದಿಗೆ ನಿಕೋಲಸನ್ ಪೂರನ್ ಟಿ20 ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ.

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆ ಟೀಮ್ ಇಂಡಿಯಾ ಆಟಗಾರ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಟಿ20 ಕ್ರಿಕೆಟ್ನಲ್ಲಿ 151 ಇನಿಂಗ್ಸ್ ಆಡಿರುವ ಹಿಟ್ಮ್ಯಾನ್ ಒಟ್ಟು 205 ಸಿಕ್ಸ್ಗಳನ್ನು ಸಿಡಿಸುವ ಮೂಲಕ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ನ್ಯೂಝಿಲೆಂಡ್ನ ಮಾರ್ಟಿನ್ ಗಪ್ಟಿಲ್. ಕಿವೀಸ್ ಪರ 118 ಟಿ20 ಇನಿಂಗ್ಸ್ ಆಡಿರುವ ಗಪ್ಟಿಲ್ ಒಟ್ಟು 173 ಸಿಕ್ಸ್ಗಳನ್ನು ಬಾರಿಸಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದೀಗ ಈ ಪಟ್ಟಿಗೆ ನಿಕೋಲಸ್ ಪೂರನ್ ಕೂಡ ಎಂಟ್ರಿ ಕೊಟ್ಟಿದ್ದಾರೆ. ವೆಸ್ಟ್ ಇಂಡೀಸ್ ದಾಂಡಿಗ ಕೇವಲ 88 ಟಿ20 ಇನಿಂಗ್ಸ್ಗಳ ಮೂಲಕ 139 ಸಿಕ್ಸ್ಗಳನ್ನು ಬಾರಿಸಿದ್ದಾರೆ. ಈ ಮೂಲಕ ಟಿ20 ಇಂಟರ್ನ್ಯಾಷನಲ್ ಪಂದ್ಯಗಳಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಮೂರನೇ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ನಾಲ್ಕನೇ ಸ್ಥಾನದಲ್ಲಿ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಕಾಣಿಸಿಕೊಂಡಿದ್ದಾರೆ. ಇಂಗ್ಲೆಂಡ್ ಪರ 114 ಟಿ20 ಇನಿಂಗ್ಸ್ ಆಡಿರುವ ಬಟ್ಲರ್ ಒಟ್ಟು 137 ಸಿಕ್ಸ್ಗಳನ್ನು ಸಿಡಿಸಿದ್ದಾರೆ.

ಟೀಮ್ ಇಂಡಿಯಾದ ಮಿಸ್ಟರ್ 360 ಡಿಗ್ರಿ ಖ್ಯಾತಿಯ ಸೂರ್ಯಕುಮಾರ್ ಯಾದವ್ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ. ಭಾರತದ ಪರ 68 ಟಿ20 ಇನಿಂಗ್ಸ್ ಆಡಿರುವ ಸೂರ್ಯ ಒಟ್ಟು 136 ಸಿಕ್ಸ್ಗಳನ್ನು ಬಾರಿಸಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಟಾಪ್-5 ಬ್ಯಾಟರ್ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




