13 ಸಿಕ್ಸ್​, 5 ಫೋರ್​: ದಾಖಲೆಯ ಸೆಂಚುರಿ ಸಿಡಿಸಿದ ನಿಕೋಲಸ್ ಪೂರನ್

Updated on: Jul 16, 2026 | 11:03 AM

Nicholas Pooran Record: ಮೇಜರ್ ಲೀಗ್ ಕ್ರಿಕೆಟ್ ಟಿ20 ಟೂರ್ನಿಯಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಈ ಇತಿಹಾಸ ನಿರ್ಮಿಸಿದ್ದು ಮತ್ಯಾರೂ ಅಲ್ಲ, ವೆಸ್ಟ್ ಇಂಡೀಸ್​ನ ಸ್ಫೋಟಕ ದಾಂಡಿಗ ನಿಕೋಲಸ್ ಪೂರನ್. ಅದು ಕೂಡ ವಿಸ್ಫೋಟಕ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ.

1 / 5
ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಟಿ20 ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ನಿಕೋಲಸ್ ಪೂರನ್ ವಿಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ಎಂಎಲ್​ಸಿ ಲೀಗ್​ನಲ್ಲಿ ಅತೀ ವೇಗದ ಶತಕ ಬಾರಿಸಿದ ದಾಂಡಿಗ ಎನಿಸಿಕೊಂಡಿದ್ದಾರೆ. (PC: MLC)

2 / 5
ಓಕ್ಲಾಂಡ್​ನಲ್ಲಿ ನಡೆದ ಈ ಪಂದ್ಯದಲ್ಲಿ ಎಂಐ ನ್ಯೂಯಾರ್ಕ್​ ಹಾಗೂ ವಾಷಿಂಗ್ಟನ್ ಫ್ರೀಡಂ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ವಾಷಿಂಗ್ಟನ್ ಫ್ರೀಡಂ ತಂಡದ ನಾಯಕ ಸ್ಟೀವ್ ಸ್ಮಿತ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಎಂಐ ನ್ಯೂಯಾರ್ಕ್ ತಂಡವು ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದರು. (PC: MLC)

3 / 5
ಅದರಲ್ಲೂ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿಕೋಲಸ್ ಪೂರನ್ ಸಿಡಿಲಬ್ಬರದ ಬ್ಯಾಟಿಂಗ್​ ಪ್ರದರ್ಶಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಪೂರನ್ ಮೈದಾನದ ಮೂಲೆ ಮೂಲೆಗೆ ಸಿಕ್ಸ್​ಗಳ ಸುರಿಮಳೆಗೈದರು. ಪರಿಣಾಮ ಕೇವಲ 31 ಎಸೆತಗಳಲ್ಲಿ ಶತಕ ಮೂಡಿಬಂತು. ಈ ಶತಕದೊಂದಿಗೆ ಮೇಜರ್ ಲೀಗ್​ ಕ್ರಿಕೆಟ್ ಟೂರ್ನಿಯಲ್ಲಿ ಅತೀ ವೇಗದ ಸೆಂಚುರಿ ಸಿಡಿಸಿದ ದಾಖಲೆಯನ್ನು ಪೂರನ್ ತಮ್ಮದಾಗಿಸಿಕೊಂಡಿದ್ದಾರೆ. (PC: MLC)

4 / 5
ಇದಕ್ಕೂ ಮುನ್ನ ಈ ದಾಖಲೆ ಫಿನ್ ಅಲೆನ್ ಹೆಸರಿನಲ್ಲಿತ್ತು. 2025 ರಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ಪರ ಕಣಕ್ಕಿಳಿದಿದ್ದ ಫಿನ್ ಅಲೆನ್, ವಾಷಿಂಗ್ಟನ್ ಫ್ರೀಡಂ ವಿರುದ್ಧ ಕೇವಲ 34 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಈ ಮೂಲಕ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಸ್ಫೋಟಕ ಸೆಂಚುರಿ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದರು. (PC: MLC)

5 / 5
ಇದೀಗ 13 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ನಿಕೋಲಸ್ ಪೂರನ್ ಕೇವಲ 33 ಎಸೆತಗಳಲ್ಲಿ 106 ರನ್ ಸಿಡಿಸಿದ್ದಾರೆ. ಈ ಮೂಲಕ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಅತೀ ವೇಗದ ಶತಕ ಸಿಡಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಪೂರನ್ ಬಾರಿಸಿದ ಈ ಸ್ಫೊಟಕ ಸೆಂಚುರಿ ನೆರವಿನೊಂದಿಗೆ ಎಂಐ ನ್ಯೂಯಾರ್ಕ್ ತಂಡವು 20 ಓವರ್​ಗಳಲ್ಲಿ ಬರೋಬ್ಬರಿ 266 ರನ್ ಗಳಿಸಿದೆ. (PC: MLC)

Follow Us