ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಗಯಾನಾ ಅಮೆಝಾನ್ ವಾರಿಯರ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟಿಕೆಆರ್ ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಶಕ್ಕೆರೆ ಪ್ಯಾರಿಸ್ (0) ಮೊದಲ ಓವರ್ನಲ್ಲೇ ಶೂನ್ಯಕ್ಕೆ ಔಟಾಗಿದ್ದರು.