Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೊಚ್ಚಲ ಶತಕದೊಂದಿಗೆ ಆಸ್ಟ್ರೇಲಿಯಾದಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆದ ನಿತೀಶ್ ಕುಮಾರ್ ರೆಡ್ಡಿ

India vs Australia: ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ನಿತೀಶ್ ಕುಮಾರ್ ರೆಡ್ಡಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಅದು ಕೂಡ ತಮ್ಮ 21ನೇ ವಯಸ್ಸಿನಲ್ಲಿ. ಅಂದರೆ ಹದಿ ಹರೆಯದಲ್ಲೇ ಆಸೀಸ್ ಬೌಲರ್​ಗಳ ವಿರುದ್ಧ ಅಬ್ಬರಿಸುವ ಮೂಲಕ ನಿತೀಶ್ ರೆಡ್ಡಿ ಆಸ್ಟ್ರೇಲಿಯಾ ಪಿಚ್​ನಲ್ಲಿ ಹಲವು ರೆಕಾರ್ಡ್​​ಗಳನ್ನು ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 28, 2024 | 1:58 PM

ಮೆಲ್ಬೋರ್ನ್​ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿ ಟೀಮ್ ಇಂಡಿಯಾ ಬ್ಯಾಟರ್ ನಿತೀಶ್ ಕುಮಾರ್ ರೆಡ್ಡಿ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿತೀಶ್ 171 ಎಸೆತಗಳನ್ನು ಎದುರಿಸಿ ಚೊಚ್ಚಲ ಸೆಂಚುರಿ ಪೂರೈಸಿದರು.

1 / 5
ಈ ಶತಕದೊಂದಿಗೆ ಆಸ್ಟ್ರೇಲಿಯಾದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್​ನ ಮ್ಯಾಟ್ ಪ್ರಿಯರ್ (28 ವರ್ಷ) ಹೆಸರಿನಲ್ಲಿತ್ತು. 21ನೇ ವಯಸ್ಸಿನಲ್ಲಿ ಆಸೀಸ್ ಪಿಚ್​ನಲ್ಲಿ ಸೆಂಚುರಿ ಸಿಡಿಸಿ ನಿತೀಶ್ ಕುಮಾರ್ ರೆಡ್ಡಿ ಹೊಸ ಇತಿಹಾಸ ರಚಿಸಿದ್ದಾರೆ.

2 / 5
ಈ ಸೆಂಚುರಿಯೊಂದಿಗೆ ಟೀಮ್ ಇಂಡಿಯಾ ಪರ ಟೆಸ್ಟ್​ನಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಶತಕ ಸಿಡಿಸಿದ 2ನೇ ಕಿರಿಯ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಈ ಪಟ್ಟಿಯಲ್ಲಿ 2002 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 20ನೇ ವಯಸ್ಸಿನಲ್ಲಿ ಶತಕ ಬಾರಿಸಿದ ಅಜಯ್ ರಾತ್ರ ಮೊದಲ ಸ್ಥಾನದಲ್ಲಿದ್ದಾರೆ.

3 / 5
ಹಾಗೆಯೇ ವಿದೇಶಿ ಪಿಚ್​ನಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಭಾರತದ ಪರ ಶತಕ ಸಿಡಿಸಿದ 5ನೇ ಬ್ಯಾಟರ್ ಎಂಬ ದಾಖಲೆ ಕೂಡ ನಿತೀಶ್ ಕುಮಾರ್ ರೆಡ್ಡಿ ಪಾಲಾಗಿದೆ. ಇದಕ್ಕೂ ಮುನ್ನ ಅನಿಲ್ ಕುಂಬ್ಳೆ, ಕಪಿಲ್ ದೇವ್, ಅಜಿತ್ ಅಗರ್ಕರ್ ಹಾಗೂ ಹಾರ್ದಿಕ್ ಪಾಂಡ್ಯ ಈ ಸಾಧನೆ ಮಾಡಿದ್ದರು. ಇದೀಗ ಈ ಪಟ್ಟಿಗೆ ನಿತೀಶ್ ಕುಮಾರ್ ರೆಡ್ಡಿ ಕೂಡ ಸೇರ್ಪಡೆಯಾಗಿದ್ದಾರೆ.

4 / 5
ಇನ್ನು ಈ ಪಂದ್ಯದಲ್ಲಿ ಒಂದು ಸಿಕ್ಸ್ ಸಿಡಿಸುವುದರೊಂದಿಗೆ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್​ನ ಮೈಕಲ್ ವಾನ್ ಹಾಗೂ ವೆಸ್ಟ್ ಇಂಡೀಸ್​ನ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ಈ ಇಬ್ಬರು ತಲಾ 8 ಸಿಕ್ಸ್ ಸಿಡಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ 8 ಸಿಕ್ಸರ್​ಗಳೊಂದಿಗೆ ನಿತೀಶ್ ಕುಮಾರ್ ರೆಡ್ಡಿ ಈ ದಾಖಲೆಯನ್ನು ಸರಿಗಟ್ಟಿದ್ದಾರೆ.

5 / 5
Follow us
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ

ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ

ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು

ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್

ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು

ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ

ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು

ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್

ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್

ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ