ಚೊಚ್ಚಲ ಶತಕದೊಂದಿಗೆ ಆಸ್ಟ್ರೇಲಿಯಾದಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆದ ನಿತೀಶ್ ಕುಮಾರ್ ರೆಡ್ಡಿ
India vs Australia: ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ನಿತೀಶ್ ಕುಮಾರ್ ರೆಡ್ಡಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಅದು ಕೂಡ ತಮ್ಮ 21ನೇ ವಯಸ್ಸಿನಲ್ಲಿ. ಅಂದರೆ ಹದಿ ಹರೆಯದಲ್ಲೇ ಆಸೀಸ್ ಬೌಲರ್ಗಳ ವಿರುದ್ಧ ಅಬ್ಬರಿಸುವ ಮೂಲಕ ನಿತೀಶ್ ರೆಡ್ಡಿ ಆಸ್ಟ್ರೇಲಿಯಾ ಪಿಚ್ನಲ್ಲಿ ಹಲವು ರೆಕಾರ್ಡ್ಗಳನ್ನು ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.
1 / 5
ಮೆಲ್ಬೋರ್ನ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿ ಟೀಮ್ ಇಂಡಿಯಾ ಬ್ಯಾಟರ್ ನಿತೀಶ್ ಕುಮಾರ್ ರೆಡ್ಡಿ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿತೀಶ್ 171 ಎಸೆತಗಳನ್ನು ಎದುರಿಸಿ ಚೊಚ್ಚಲ ಸೆಂಚುರಿ ಪೂರೈಸಿದರು.
2 / 5
ಈ ಶತಕದೊಂದಿಗೆ ಆಸ್ಟ್ರೇಲಿಯಾದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್ನ ಮ್ಯಾಟ್ ಪ್ರಿಯರ್ (28 ವರ್ಷ) ಹೆಸರಿನಲ್ಲಿತ್ತು. 21ನೇ ವಯಸ್ಸಿನಲ್ಲಿ ಆಸೀಸ್ ಪಿಚ್ನಲ್ಲಿ ಸೆಂಚುರಿ ಸಿಡಿಸಿ ನಿತೀಶ್ ಕುಮಾರ್ ರೆಡ್ಡಿ ಹೊಸ ಇತಿಹಾಸ ರಚಿಸಿದ್ದಾರೆ.
3 / 5
ಈ ಸೆಂಚುರಿಯೊಂದಿಗೆ ಟೀಮ್ ಇಂಡಿಯಾ ಪರ ಟೆಸ್ಟ್ನಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಶತಕ ಸಿಡಿಸಿದ 2ನೇ ಕಿರಿಯ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಈ ಪಟ್ಟಿಯಲ್ಲಿ 2002 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 20ನೇ ವಯಸ್ಸಿನಲ್ಲಿ ಶತಕ ಬಾರಿಸಿದ ಅಜಯ್ ರಾತ್ರ ಮೊದಲ ಸ್ಥಾನದಲ್ಲಿದ್ದಾರೆ.
4 / 5
ಹಾಗೆಯೇ ವಿದೇಶಿ ಪಿಚ್ನಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಭಾರತದ ಪರ ಶತಕ ಸಿಡಿಸಿದ 5ನೇ ಬ್ಯಾಟರ್ ಎಂಬ ದಾಖಲೆ ಕೂಡ ನಿತೀಶ್ ಕುಮಾರ್ ರೆಡ್ಡಿ ಪಾಲಾಗಿದೆ. ಇದಕ್ಕೂ ಮುನ್ನ ಅನಿಲ್ ಕುಂಬ್ಳೆ, ಕಪಿಲ್ ದೇವ್, ಅಜಿತ್ ಅಗರ್ಕರ್ ಹಾಗೂ ಹಾರ್ದಿಕ್ ಪಾಂಡ್ಯ ಈ ಸಾಧನೆ ಮಾಡಿದ್ದರು. ಇದೀಗ ಈ ಪಟ್ಟಿಗೆ ನಿತೀಶ್ ಕುಮಾರ್ ರೆಡ್ಡಿ ಕೂಡ ಸೇರ್ಪಡೆಯಾಗಿದ್ದಾರೆ.
5 / 5
ಇನ್ನು ಈ ಪಂದ್ಯದಲ್ಲಿ ಒಂದು ಸಿಕ್ಸ್ ಸಿಡಿಸುವುದರೊಂದಿಗೆ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್ನ ಮೈಕಲ್ ವಾನ್ ಹಾಗೂ ವೆಸ್ಟ್ ಇಂಡೀಸ್ನ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ಈ ಇಬ್ಬರು ತಲಾ 8 ಸಿಕ್ಸ್ ಸಿಡಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ 8 ಸಿಕ್ಸರ್ಗಳೊಂದಿಗೆ ನಿತೀಶ್ ಕುಮಾರ್ ರೆಡ್ಡಿ ಈ ದಾಖಲೆಯನ್ನು ಸರಿಗಟ್ಟಿದ್ದಾರೆ.