ಟೀಮ್ ಇಂಡಿಯಾ ಪರ ಯಾರಿಂದಲೂ ಸಾಧ್ಯವಾಗದ ದಾಖಲೆ ಬರೆದ ನಿತೀಶ್ ರೆಡ್ಡಿ

|

Updated on: Oct 10, 2024 | 8:32 AM

Nitish Kumar Reddy Record: ಟೀಮ್ ಇಂಡಿಯಾದ ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಭರ್ಜರಿ ಪ್ರದರ್ಶನದೊಂದಿಗೆ ಗಮನ ಸೆಳೆದಿದ್ದಾರೆ. ಮೊದಲ ಮ್ಯಾಚ್​ನಲ್ಲಿ ಅಜೇಯ 16 ರನ್ ಬಾರಿಸಿದ್ದ ನಿತೀಶ್ ದ್ವಿತೀಯ ಟಿ20 ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಅಬ್ಬರಿಸಿದ್ದಾರೆ. ಅಲ್ಲದೆ ಬೌಲಿಂಗ್​ನಲ್ಲೂ ಮಿಂಚಿ ಹೊಸ ದಾಖಲೆ ಬರೆದಿದ್ದಾರೆ.

1 / 5
ಬಾಂಗ್ಲಾದೇಶ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತೀಯ ಬ್ಯಾಟರ್​ಗಳು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅದರಲ್ಲೂ ಯುವ ದಾಂಡಿಗ ನಿತೀಶ್ ಕುಮಾರ್ ರೆಡ್ಡಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ್ದರು. ಈ ಬೆಂಡೆತ್ತುವಿಕೆಯೊಂದಿಗೆ ನಿತೀಶ್ ರೆಡ್ಡಿ ಹೊಸ ದಾಖಲೆಯನ್ನು ಸಹ ಬರೆದಿದ್ದಾರೆ.

2 / 5
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿತೀಶ್ ರೆಡ್ಡಿ 34 ಎಸೆತಗಳಲ್ಲಿ 74 ರನ್ ಚಚ್ಚಿದ್ದರು. ಈ ವೇಳೆ ಅವರ ಬ್ಯಾಟ್​ನಿಂದ 7 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳು ಮೂಡಿಬಂದಿದ್ದವು. ಈ ಮೂಲಕ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 221 ರನ್​ಗಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

3 / 5
ಇನ್ನು 222 ರನ್​ಗಳ ಗುರಿ ಬೆನ್ನತ್ತಿದ ಬಾಂಗ್ಲಾದೇಶ್ ತಂಡಕ್ಕೆ ಬೌಲಿಂಗ್ ಮೂಲಕ ಕೂಡ ಶಾಕ್ ನೀಡಿದರು. ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದ ನಿತೀಶ್ ಕುಮಾರ್ ರೆಡ್ಡಿ ಕೇವಲ 23 ರನ್ ನೀಡಿ 2 ವಿಕೆಟ್ ಕಬಳಿಸಿದರು. ಈ ಆಲ್​ರೌಂಡರ್ ಪ್ರದರ್ಶನದೊಂದಿಗೆ ಯುವ ಆಟಗಾರ ಹೊಸ ದಾಖಲೆಯನ್ನು ತಮ್ಮದಾಗಿಸಿಕೊಂಡರು.

4 / 5
ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಟೀಮ್ ಇಂಡಿಯಾದ ಯಾವುದೇ ಆಟಗಾರ 70+ ರನ್​ ಬಾರಿಸಿ, 2 ವಿಕೆಟ್ ಕಬಳಿಸಿಲ್ಲ. ಇದೀಗ ಆಡಿದ 2ನೇ ಪಂದ್ಯದ ಮೂಲಕವೇ ನಿತೀಶ್ ಕುಮಾರ್ ರೆಡ್ಡಿ ಯಾರಿಂದಲೂ ಸಾಧ್ಯವಾಗದಿದ್ದ ದಾಖಲೆಯನ್ನು ನಿರ್ಮಿಸಿ ತೋರಿಸಿದ್ದಾರೆ. ಅಲ್ಲದೆ ಆಲ್​ರೌಂಡರ್ ಆಟದೊಂದಿಗೆ ಭಾರತ ತಂಡಕ್ಕೆ ಹೊಸ ಭರವಸೆಯನ್ನು ಮೂಡಿಸಿದ್ದಾರೆ.

5 / 5
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ ಬೃಹತ್ ಮೊತ್ತವನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್​ ಕಳೆದುಕೊಂಡು 135 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 86 ರನ್​ಗಳ ಅಮೋಘ ಗೆಲುವು ದಾಖಲಿಸಿತು. ಹಾಗೆಯೇ ಈ ಪಂದ್ಯದಲ್ಲಿ ಆಲ್​ರೌಂಡರ್ ಆಟದೊಂದಿಗೆ ಮಿಂಚಿದ ನಿತೀಶ್ ಕುಮಾರ್ ರೆಡ್ಡಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.