- Kannada News Photo gallery Cricket photos Nitish Kumar Reddy Out of IND vs SA 1st Test, Joins India A Squad
IND vs SA: ಮೊದಲ ಟೆಸ್ಟ್ನಿಂದ ಹೊರಬಿದ್ದ ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್
India vs South Africa Test: ಭಾರತ-ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್ ಪಂದ್ಯದಿಂದ ಯುವ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಹೊರಗುಳಿದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಸಹಾಯಕ ಕೋಚ್ ಡೋಸ್ಚೇಟ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಉತ್ತಮ ಆಟದ ಸಮಯ ಹಾಗೂ ಸಂಪೂರ್ಣ ಫಿಟ್‌ನೆಸ್‌ಗಾಗಿ ನಿತೀಶ್‌ರನ್ನು ಭಾರತ ‘ಎ’ ತಂಡಕ್ಕೆ ಸೇರಿಸಲಾಗಿದೆ. ಗಾಯದಿಂದ ಚೇತರಿಸಿಕೊಂಡಿರುವ ಅವರು ರಾಜ್‌ಕೋಟ್‌ನಲ್ಲಿ ದಕ್ಷಿಣ ಆಫ್ರಿಕಾ ‘ಎ’ ವಿರುದ್ಧದ ಸರಣಿಯಲ್ಲಿ ಆಡಲಿದ್ದಾರೆ.
Updated on: Nov 12, 2025 | 9:26 PM

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 14 ರಂದು ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಟೀಂ ಇಂಡಿಯಾ ಕೂಡ ತಯಾರಿ ನಡೆಸುತ್ತಿದೆ. ಏತನ್ಮಧ್ಯೆ ಮೊದಲ ಟೆಸ್ಟ್ ಪಂದ್ಯದಿಂದ ತಂಡದ ಸ್ಟಾರ್ ಆಟಗಾರನೊಬ್ಬ ಹೊರಬಿದಿದ್ದಾನೆ.

ವಾಸ್ತವವಾಗಿ ಟೀಂ ಇಂಡಿಯಾದ ಯುವ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದೆ. ಭಾರತೀಯ ತಂಡದ ಎರಡನೇ ಅಭ್ಯಾಸ ಅವಧಿಯ ಮೊದಲು ಪತ್ರಿಕಾಗೋಷ್ಠಿಯಲ್ಲಿ ಸಹಾಯಕ ಕೋಚ್ ಟೆನ್ ಡೋಸ್ಚೇಟ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಯುವ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದೆ. ಸಹಾಯಕ ಕೋಚ್ ಡೋಸ್ಚೇಟ್ ಕೂಡ ಪತ್ರಿಕಾಗೋಷ್ಠಿಯಲ್ಲಿ ನಿತೀಶ್ ಕುಮಾರ್ ರೆಡ್ಡಿ ಮೊದಲ ಪಂದ್ಯದಿಂದ ಹೊರಗುಳಿಯುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಪರಿಣಾಮವಾಗಿ, ನಿತೀಶ್ ಕುಮಾರ್ ರೆಡ್ಡಿ ಈಗ ರಾಜ್‌ಕೋಟ್‌ನಲ್ಲಿ ದಕ್ಷಿಣ ಆಫ್ರಿಕಾ ಎ ವಿರುದ್ಧ ನಡೆಯುತ್ತಿರುವ ಸರಣಿಗಾಗಿ ಭಾರತ ಎ ತಂಡವನ್ನು ಸೇರಿಕೊಳ್ಳಲಿದ್ದಾರೆ. ನಿತೀಶ್ ಇತ್ತೀಚೆಗಷ್ಟೇ ಗಾಯದಿಂದ ಚೇತರಿಸಿಕೊಂಡಿದ್ದಾರೆ. ಆದ್ದರಿಂದ ಮ್ಯಾನೇಜ್‌ಮೆಂಟ್ ಅವರಿಗೆ ಹೆಚ್ಚಿನ ಆಟದ ಸಮಯ ಮತ್ತು ಪಂದ್ಯದ ಫಿಟ್‌ನೆಸ್ ನೀಡಲು ತೀರ್ಮಾನಿಸಿ ಅವರನ್ನು ತಂಡದಿಂದ ಕೈಬಿಟ್ಟಿದೆ.

ನಿತೀಶ್ ಕುಮಾರ್ ರೆಡ್ಡಿ ಇತ್ತೀಚೆಗೆ ಭಾರತ ತಂಡದ ಆಸ್ಟ್ರೇಲಿಯಾ ಪ್ರವಾಸದ ಭಾಗವಾಗಿದ್ದರು. ಆದಾಗ್ಯೂ, ಏಕದಿನ ಸರಣಿಯ ಎರಡನೇ ಪಂದ್ಯದ ಸಮಯದಲ್ಲಿ ಗಾಯಕ್ಕೆ ತುತ್ತಾದ ನಿತೀಶ್‌ರನ್ನು ಆರಂಭಿಕ ಟಿ20 ಪಂದ್ಯಗಳಿಂದ ಹೊರಗುಳಿದಿದ್ದರು. ಇದೀಗ ಸಂಪೂರ್ಣವಾಗಿ ಫಿಟ್ ಆಗಿರುವ ನಿತೀಶ್ ಅಭ್ಯಾಸದಲ್ಲಿ ಸಾಕಷ್ಟು ಬೆವರು ಸುರಿಸುತ್ತಿದ್ದರು. ಆದಾಗ್ಯೂ, ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನವಿಲ್ಲದ ಕಾರಣ ಅವರನ್ನು ಬಿಡುಗಡೆ ಮಾಡಲಾಗಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ಇತ್ತೀಚೆಗೆ ಎರಡು ಅನಧಿಕೃತ ಟೆಸ್ಟ್ ಪಂದ್ಯಗಳನ್ನು ಆಡಿವೆ. ಈಗ ಮೂರು ಅನಧಿಕೃತ ಏಕದಿನ ಪಂದ್ಯಗಳು ನಡೆಯಲಿವೆ. ಸರಣಿಯು ನವೆಂಬರ್ 13 ರಂದು ಪ್ರಾರಂಭವಾಗುತ್ತದೆ. ಎಲ್ಲಾ ಮೂರು ಪಂದ್ಯಗಳು ರಾಜ್‌ಕೋಟ್‌ನಲ್ಲಿ ನಡೆಯಲಿವೆ. ಈ ಸರಣಿಯಲ್ಲಿ ತಿಲಕ್ ವರ್ಮಾ ಭಾರತ ತಂಡದ ನಾಯಕರಾಗಿರುತ್ತಾರೆ. ರುತುರಾಜ್ ಗಾಯಕ್ವಾಡ್ ಅವರನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ.
