IND vs ENG: ಟೀಮ್ ಇಂಡಿಯಾದಿಂದ ಸ್ಟಾರ್ ಆಟಗಾರ ಔಟ್!

Updated on: Jul 07, 2026 | 9:50 AM

India vs England ODI Series: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಏಕದಿನ ಸರಣಿ ಆಡಲಿದೆ. ಮೂರು ಮ್ಯಾಚ್​ಗಳ ಈ ಏಕದಿನ ಸರಣಿಯಿಂದ ಭಾರತ ತಂಡದ ಯುವ ಆಲ್​ರೌಂಡರ್ ಹೊರಬಿದ್ದಿದ್ದಾರೆ. ಅವರ ಬದಲಿಗೆ ಅನುಭವಿ ಆಟಗಾರನಿಗೆ ಮಣೆ ಹಾಕಲಾಗಿದೆ.

1 / 5
ಇಂಗ್ಲೆಂಡ್ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಟೀಮ್ ಇಂಡಿಯಾ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಹೊರಬಿದ್ದಿದ್ದಾರೆ. ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ನಿತೀಶ್ ಕುಮಾರ್ ರೆಡ್ಡಿ ಚೇತರಿಸಿಕೊಳ್ಳಲು ಮತ್ತಷ್ಟು ಸಮಯ ತೆಗೆದುಕೊಳ್ಳಲಿದ್ದು, ಹೀಗಾಗಿ ಅವರನ್ನು ಈ ಸರಣಿಯಿಂದ ಕೈ ಬಿಡಲಾಗಿದೆ. (PC: Getty Images)

ಇಂಗ್ಲೆಂಡ್ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಟೀಮ್ ಇಂಡಿಯಾ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಹೊರಬಿದ್ದಿದ್ದಾರೆ. ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ನಿತೀಶ್ ಕುಮಾರ್ ರೆಡ್ಡಿ ಚೇತರಿಸಿಕೊಳ್ಳಲು ಮತ್ತಷ್ಟು ಸಮಯ ತೆಗೆದುಕೊಳ್ಳಲಿದ್ದು, ಹೀಗಾಗಿ ಅವರನ್ನು ಈ ಸರಣಿಯಿಂದ ಕೈ ಬಿಡಲಾಗಿದೆ. (PC: Getty Images)

2 / 5

ಅಫ್ಘಾನಿಸ್ತಾನ್ ವಿರುದ್ಧದ ಅಂತಿಮ ಏಕದಿನ ಪಂದ್ಯದ ವೇಳೆ ನಿತೀಶ್ ಕುಮಾರ್ ರೆಡ್ಡಿ ಎಡಗಾಲಿನ ಸ್ನಾಯು ಸೆಳೆತದ ಸಮಸ್ಯೆಗೆ ಒಳಗಾಗಿದ್ದರು. ಈ ಗಾಯದ ಕಾರಣದಿಂದಾಗಿ ಅವರು ಇಂಗ್ಲೆಂಡ್ ಸರಣಿಯಿಂದ ಹೊರಬೀಳಬೇಕಾಗಿ ಬಂದಿದೆ. ಸದ್ಯ ಅವರು ಬೆಂಗಳೂರಿನ ಬಿಸಿಸಿಐ ‘ಸೆಂಟರ್ ಆಫ್ ಎಕ್ಸಲೆನ್ಸ್’ (CoE) ನಲ್ಲಿ ಚಿಕಿತ್ಸೆ ಮತ್ತು ಚೇತರಿಕೆ ಪಡೆಯುತ್ತಿದ್ದಾರೆ. (PC: Getty Images)

3 / 5

ಅತ್ತ ನಿತೀಶ್ ಕುಮಾರ್ ರೆಡ್ಡಿ ಹೊರಗುಳಿಯುವುದು ಖಚಿತವಾಗುತ್ತಿದ್ದಂತೆ, ಇಂಗ್ಲೆಂಡ್‌ನಲ್ಲಿ ಟಿ20 ಸರಣಿ ಆಡುತ್ತಿರುವ ಶಿವಂ ದುಬೆ ಅವರನ್ನು ಏಕದಿನ ತಂಡದಲ್ಲೂ ಮುಂದುವರಿಸಲು ಆಯ್ಕೆ ಸಮಿತಿ ನಿರ್ಧರಿಸಿದೆ.  ಭಾರತ ಏಕದಿನ ತಂಡದಲ್ಲಿ 2024 ರಲ್ಲಿ ಕೊನೆಯ ಬಾರಿ ಕಾಣಿಸಿಕೊಂಡಿದ್ದ ಶಿವಂ ದುಬೆಗೆ ಇದೀಗ 2 ವರ್ಷಗಳ ಬಳಿಕ ಮತ್ತೆ ಅದೃಷ್ಟ ಖುಲಾಯಿಸಿದೆ. (PC: Getty Images)

4 / 5

ಭಾರತ ಮತ್ತು ಇಂಗ್ಲೆಂಡ್ ನಡುವಣ ಏಕದಿನ ಸರಣಿಯು ಜುಲೈ 14 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್​ ಸ್ಟೇಡಿಯಂನಲ್ಲಿ ನಡೆದರೆ, ದ್ವಿತೀಯ ಪಂದ್ಯವು ಜುಲೈ 16 ರಂದು ಕಾರ್ಡಿಫ್​ನ ಸೋಫಿಯಾ ಗಾರ್ಡನ್ಸ್ ಮೈದಾನದಲ್ಲಿ ಜರುಗಲಿದೆ. ಇನ್ನು ಮೂರನೇ ಪಂದ್ಯವು ಜುಲೈ 19 ರಂದು ಜರುಗಲಿದ್ದು, ಈ ಪಂದ್ಯಕ್ಕೆ ಲಂಡನ್​ನ ಲಾರ್ಡ್ಸ್ ಮೈದಾನ ಆತಿಥ್ಯವಹಿಸಲಿದೆ.

5 / 5

ಭಾರತ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್.

Published On - 9:46 am, Tue, 7 July 26

Loading...
Unable to load recommendations.
Follow Us