
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ನಡೆಯುತ್ತಿರುವ ಎಲ್ಲ ಪಂದ್ಯಗಳು ಸಾಕಷ್ಟು ರೋಚಕತೆ ಸೃಷ್ಟಿಸುತ್ತಿದೆ. ಸೋಮವಾರ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಪಂದ್ಯ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿತ್ತು.

ಕೊನೆಯ 6 ಎಸೆತಗಳಲ್ಲಿ ಕೆಕೆಆರ್ಗೆ ಗೆಲ್ಲಲು 6 ರನ್ಗಳ ಅವಶ್ಯಕತೆಯಿತ್ತು. ಕೊನೆಯ ಎಸೆತದಲ್ಲಿ 2 ರನ್ಗಳು ಬೇಕಾಗಿದ್ದವು. ಈ ಸಂದರ್ಭ ರಿಂಕು ಸಿಂಗ್ ಚೆಂಡನ್ನು ಬೌಂಡರಿಗೆ ಅಟ್ಟಿ ರೋಚಕ ಜಯ ತಂದಿಟ್ಟರು.

ಇದೀಗ ಗೆದ್ದ ಕೋಲ್ಕತ್ತಾಕ್ಕೆ ಆಘಾತ ಉಂಟಾಗಿದೆ. ತಂಡದ ನಾಯಕ ನಿತೀಶ್ ರಾಣ ಅವರಿಗೆ ದಂಡ ವಿಧಿಸಲಾಗಿದೆ. ಸ್ಲೋ ಓವರ್ ರೇಟ್‌ಗಾಗಿ ಪಂದ್ಯದ ಶುಲ್ಕದಿಂದ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ಐಪಿಎಲ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಸೋಮವಾರ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ನಿಧಾನಗತಿಯ ಓವರಿಗಾಗಿ ದಂಡ ವಿಧಿಸಲಾಗಿದೆ. ನಾಯಕ ನಿತೀಶ್ ರಾಣ ಐಪಿಎಲ್ ನೀತಿ ಸಂಹಿತೆಯ ಪ್ರಕಾರ ರೂ. 12 ಲಕ್ಷ ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ತಿಳಿಸಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 179 ರನ್ ಕಲೆಹಾಕಿತು. ನಾಯಕ ಶಿಖರ್ ಧವನ್ 47 ಎಸೆತಗಳಲ್ಲಿ 57 ರನ್ ಗಳಿಸಿದರೆ, ಶಾರುಖ್ ಖಾನ್ ಅಂತಿಮ ಹಂತದಲ್ಲಿ 8 ಎಸೆತಗಳಲ್ಲಿ ಅಜೇಯ 21 ರನ್ ಸಿಡಿಸಿದರು. ಕೆಕೆಆರ್ ಪರ ವರುಣ್ ಚಕ್ರವರ್ತಿ 3 ವಿಕೆಟ್ ಪಡೆದರು.

ಟಾರ್ಗೆಟ್ ಬೆನ್ನಟ್ಟಿದ ಕೆಕೆಆರ್ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಬಾರಿಸಿ ರೋಚಕ ಗೆಲುವು ಸಾಧಿಸಿತು. ತಂಡದ ಪರ ನಾಯಕ ನಿತೀಶ್ ರಾಣ 38 ಎಸೆತಗಳಲ್ಲಿ 51 ರನ್ ಬಾರಿಸಿದರೆ, ಆಂಡ್ರೆ ರಸೆಲ್ 23 ಎಸೆತಗಳಲ್ಲಿ 42, ಜೇಸನ್ ರಾಯ್ 38 ರನ್ಗಳ ಕೊಡುಗೆ ನೀಡಿದರು. ಪಂಜಾಬ್ ಪರ ರಾಹುಲ್ ಚಹರ್ 2 ವಿಕೆಟ್ ಪಡೆದರು.

ಈ ಗೆಲುವಿನ ಮೂಲಕ ಪಾಯಿಂಟ್ ಟೇಬಲ್ನಲ್ಲಿ ಎಂಟನೇ ಸ್ಥಾನದಲ್ಲಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಐದನೇ ಸ್ಥಾನಕ್ಕೆ ಜಿಗಿದಿದೆ. ಆಡಿದ 11 ಪಂದ್ಯಗಳಲ್ಲಿ ಐದು ಗೆಲುವು, ಆರರಲ್ಲಿ ಸೋಲುಂಡು -0.079 ರನ್ರೇಟ್ನೊಂದಿಗೆ 10 ಅಂಕ ಸಂಪಾದಿಸಿದೆ.