ಏಕದಿನ ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಂತ ಕೆಟ್ಟ ದಾಖಲೆ ಬರೆದ ಆಸ್ಟ್ರೇಲಿಯಾ

Australia vs Pakistan 2024: ಪಾಕಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾದ ಯಾವುದೇ ಬ್ಯಾಟರ್ ಅರ್ಧಶತಕ ಬಾರಿಸಿಲ್ಲ. ಈ ಸರಣಿಯ ಮೊದಲ ಪಂದ್ಯದಲ್ಲಿ ಜೋಶ್ ಇಂಗ್ಲಿಸ್ 49 ರನ್ ಬಾರಿಸಿದ್ದು ಗರಿಷ್ಠ ಸ್ಕೋರ್. ಇದರೊಂದಿಗೆ ಕೆಟ್ಟ ದಾಖಲೆಯೊಂದು ಆಸ್ಟ್ರೇಲಿಯಾ ತಂಡದ ಪಾಲಾಗಿದೆ.

ಝಾಹಿರ್ ಯೂಸುಫ್
|

Updated on: Nov 12, 2024 | 2:54 PM

ಆಸ್ಟ್ರೇಲಿಯಾ ತಂಡವು ಏಕದಿನ ಸರಣಿ ಆಡಲು ಶುರುವಾಗಿ 54 ವರ್ಷಗಳೇ ಕಳೆದಿವೆ. ಆದರೆ ಹಿಂದೆಂದೂ ಕಂಡರಿಯದ, ಕೇಳರಿಯದ ರೀತಿಯಲ್ಲಿ ಇದೇ ಮೊದಲ ಬಾರಿಗೆ ಕೆಟ್ಟ ದಾಖಲೆಯೊಂದನ್ನು ಬರೆದಿದೆ. ಅದು ಕೂಡ ಪಾಕಿಸ್ತಾನ್ ಬೌಲರ್​ಗಳ ಮುಂದೆ ಮಂಡಿಯೂರು ಮೂಲಕ ಎಂಬುದೇ ಅಚ್ಚರಿ.

1 / 5
1970 ರಿಂದ ಏಕದಿನ ಸರಣಿ ಆಡುತ್ತಿರುವ ಆಸ್ಟ್ರೇಲಿಯಾ ಇದೇ ಮೊದಲ ಬಾರಿಗೆ ಒಂದೇ ಒಂದು ಅರ್ಧಶತಕ ಬಾರಿಸದೇ ಸರಣಿಯೊಂದನ್ನು ಕೊನೆಗೊಳಿಸಿದೆ. ಅಂದರೆ ಪಾಕಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾದ ಯಾವುದೇ ಬ್ಯಾಟರ್ ಅರ್ಧಶತಕ ಬಾರಿಸಿಲ್ಲ.

2 / 5
ಆಸ್ಟ್ರೇಲಿಯಾ ತಂಡವು ಈವರೆಗೆ 200 ಕ್ಕೂ ಅಧಿಕ ಏಕದಿನ ಸರಣಿಗಳನ್ನಾಡಿದೆ. ಈ ಪ್ರತಿ ಸರಣಿಗಳಲ್ಲೂ ಆಸ್ಟ್ರೇಲಿಯಾದ ಯಾವುದಾದರೂ ಒಬ್ಬ ಬ್ಯಾಟರ್ ಅರ್ಧಶತಕ ಬಾರಿಸಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ಸರಣಿಯೊಂದರಲ್ಲಿ ಹಾಫ್ ಸೆಂಚುರಿ ಸಿಡಿಸುವಲ್ಲಿ ಆಸ್ಟ್ರೇಲಿಯಾ ಬ್ಯಾಟರ್​ಗಳು ವಿಫಲರಾಗಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದಿದೆ.

3 / 5
ಇಂತಹದೊಂದು ಕೆಟ್ಟ ದಾಖಲೆ ಬರೆಸಿರುವುದು ಪಾಕ್ ವೇಗಿಗಳು. ಏಕೆಂದರೆ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳಲ್ಲಿ ಪಾಕಿಸ್ತಾನ್ ತಂಡದ ವೇಗಿಗಳಾದ ಹ್ಯಾರಿಸ್ ರೌಫ್, ಶಾಹೀನ್ ಶಾ ಅಫ್ರಿದಿ, ನಸೀಮ್ ಶಾ ಹಾಗೂ ಮೊಹಮ್ಮದ್ ಹಸ್ನೈನ್ ಜೊತೆಗೂಡಿ ಒಟ್ಟು 26 ವಿಕೆಟ್ ಕಬಳಿಸಿದ್ದಾರೆ. ಅಲ್ಲದೆ ಎರಡು ಬಾರಿ ಆಸೀಸ್ ಪಡೆಯನ್ನು 165 ರನ್​ಗಳ ಒಳಗೆ ಆಲೌಟ್ ಮಾಡಿದೆ.

4 / 5
ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಆಸ್ಟ್ರೇಲಿಯಾ ತಂಡವು 2 ವಿಕೆಟ್​ಗಳ ರೋಚಕ ಜಯ ಸಾಧಿಸಿದರೆ, ಎರಡನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು 9 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತ್ತು. ಇನ್ನು ಮೂರನೇ ಪಂದ್ಯದಲ್ಲಿ 8 ವಿಕೆಟ್​ಗಳ ಜಯ ಸಾಧಿಸಿತು. ಈ ಮೂಲಕ 22 ವರ್ಷಗಳ ಬಳಿಕ ಪಾಕಿಸ್ತಾನ್ ತಂಡವು ಆಸ್ಟ್ರೇಲಿಯಾದಲ್ಲಿ ಏಕದಿನ ಸರಣಿ ಗೆದ್ದುಕೊಂಡಿದೆ.

5 / 5
Follow us
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್

ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ

ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ