Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್ ಆಡ್ತಾರಾ ರೋಹಿತ್ ಶರ್ಮಾ? ಅಭಿಮಾನಿಗಳ ಹೃದಯ ಒಡೆದ ಜಯ್​ ಶಾ ಹೇಳಿಕೆ..!

Rohit Sharma: ರೋಹಿತ್ ಶರ್ಮಾ ಟಿ20 ವಿಶ್ವಕಪ್​ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ ಎಂಬ ಸುದ್ದಿಗಳು ಸಹ ಹರಿದಾಡುತ್ತಿದ್ದವು. ಇದೀಗ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ,ರೋಹಿತ್ ಶರ್ಮಾ ಟಿ20 ವಿಶ್ವಕಪ್ ಆಡುವ ಬಗ್ಗೆ ದೊಡ್ಡ ಮಾಹಿತಿ ನೀಡಿದ್ದಾರೆ.

ಪೃಥ್ವಿಶಂಕರ
|

Updated on: Dec 10, 2023 | 8:51 AM

2023ರ ಏಕದಿನ ವಿಶ್ವಕಪ್‌ನ ಫೈನಲ್‌ ಬಳಿಕ ತಂಡವನ್ನು ತೊರೆದಿರುವ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯಂತಹ ಹಿರಿಯ ಆಟಗಾರರು ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಟೆಸ್ಟ್ ಸರಣಿಯೊಂದಿಗೆ ಮತ್ತೊಮ್ಮೆ ತಂಡವನ್ನು ಸೇರಿಕೊಳ್ಳಲಿದ್ದಾರೆ.

1 / 8
ಏತನ್ಮಧ್ಯೆ, ಈ ಇಬ್ಬರು ಆಟಗಾರರು ವೈಟ್ ಬಾಲ್ ಕ್ರಿಕೆಟ್‌ನಲ್ಲಿ ಮತ್ತೊಮ್ಮೆ ಯಾವಾಗ ಕಾಣಿಸಿಕೊಳ್ಳುತ್ತಾರೆ ಎಂಬ ಪ್ರಶ್ನೆ ಅಭಿಮಾನಿಗಳ ಹೃದಯದಲ್ಲಿ ಉದ್ಭವಿಸಿದೆ. ಈ ನಡುವೆ ವಿರಾಟ್ ಕೊಹ್ಲಿ ಅವರನ್ನು ಟಿ20 ವಿಶ್ವಕಪ್​ನಿಂದ ಹೊರಗಿಡುವ ಬಗ್ಗೆ ಬಿಸಿಸಿಐ ಚಿಂತಿಸುತ್ತಿದೆ ಎಂಬ ಸುದ್ದಿ ಹೊರಬಿದ್ದಿತ್ತು.

2 / 8
ಆದರೆ ರೋಹಿತ್ ಶರ್ಮಾ ಆಡುವ ಬಗ್ಗೆ ಸಸ್ಪೆನ್ಸ್ ಹಾಗೆ ಉಳಿದಿತ್ತು. ರೋಹಿತ್ ಶರ್ಮಾ ಟಿ20 ವಿಶ್ವಕಪ್​ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ ಎಂಬ ಸುದ್ದಿಗಳು ಸಹ ಹರಿದಾಡುತ್ತಿದ್ದವು. ಇದೀಗ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ,ರೋಹಿತ್ ಶರ್ಮಾ ಆಡುವ ಬಗ್ಗೆ ದೊಡ್ಡ ಮಾಹಿತಿ ನೀಡಿದ್ದಾರೆ.

3 / 8
ವರದಿಗಳ ಪ್ರಕಾರ, ಮುಂದಿನ ವರ್ಷ ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎಯಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಟೀಮ್ ಇಂಡಿಯಾದ ಭಾಗವಾಗುತ್ತಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ‘ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಅವರ ಸ್ಥಾನದ ಬಗ್ಗೆ ಯಾವುದೇ ಭರವಸೆ ನೀಡಲಾಗುವುದಿಲ್ಲ’ ಎಂದು ಜಯ್ ಶಾ ಖಚಿತಪಡಿಸಿದ್ದಾರೆ ಎಂದು ವರದಿ ಮಾಡಲಾಗಿದೆ.

4 / 8
ಐಪಿಎಲ್ ಮತ್ತು ವಿಶ್ವಕಪ್‌ಗೂ ಮುನ್ನ ನಡೆಯಲಿರುವ ಟಿ20 ಸರಣಿಯ ಆಧಾರದ ಮೇಲೆ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಜಯ್ ಶಾ ಹೇಳಿದ್ದಾರೆ. ಅಲ್ಲದೆ ಆ ಬಗ್ಗೆ ಈಗ ಸ್ಪಷ್ಟೀಕರಣ ನೀಡುವ ಅಗತ್ಯವೇನು ಎಂದು ಜಯ್ ಶಾ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

5 / 8
ಟಿ20 ವಿಶ್ವಕಪ್ ಮುಂದಿನ ವರ್ಷ ಅಂದರೆ 2024ರ ಜೂನ್‌ನಲ್ಲಿ ಪ್ರಾರಂಭವಾಗುತ್ತದೆ. ಅದಕ್ಕೂ ಮೊದಲು ನಾವು ಐಪಿಎಲ್ ಮತ್ತು ಅಫ್ಘಾನಿಸ್ತಾನ ವಿರುದ್ಧ ಸರಣಿಯನ್ನು ಹೊಂದಿದ್ದೇವೆ. ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ಆಟಗಾರರು ಐಪಿಎಲ್‌ನಂತಹ ದೊಡ್ಡ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡಬೇಕು ಎಂಬುದು ಶಾ ಅವರ ಹೇಳಿಕೆಯಿಂದ ಸ್ಪಷ್ಟವಾಗಿದೆ.

6 / 8
ಇತ್ತೀಚಿಗೆ ಆಡಿದ ಏಕದಿನ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಅದ್ಭುತ ಪ್ರದರ್ಶನ ನೀಡಿದ್ದರು. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಫೈನಲ್‌ಗೆ ತಲುಪಿತ್ತು. ಆದರೆ ಟಿ20 ಸ್ವರೂಪಕ್ಕೆ ಬಂದಾಗ, ರೋಹಿತ್ ಶರ್ಮಾ ಅವರ ಹೆಸರಿಗೆ ತಕ್ಕಂತೆ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ.

7 / 8
ರೋಹಿತ್ ಶರ್ಮಾ ಮುಂದಿನ ವರ್ಷ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನವನ್ನು ಖಚಿತಪಡಿಸಲು ಬಯಸಿದರೆ, ಅವರು ಐಪಿಎಲ್ ಮತ್ತು ಅಂತರರಾಷ್ಟ್ರೀಯ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಬೇಕಾಗುತ್ತದೆ. ಏಕೆಂದರೆ ಕಳೆದೆರಡು ಐಪಿಎಲ್ ಆವೃತ್ತಿಗಳಲ್ಲಿ ರೋಹಿತ್ ಶರ್ಮಾ ಅವರ ಫಾರ್ಮ್​ ಅಷ್ಟು ಉತ್ತಮವಾಗಿಲ್ಲ.

8 / 8
Follow us
ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್

ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್

ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ

ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ

ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ

ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ

ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ

ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ