IPL 2024: ಐಪಿಎಲ್ ಆಡದಂತೆ ಸ್ಟಾರ್ ಆಟಗಾರನಿಗೆ ಸೂಚನೆ..!
IPL 2024 Auction: ಈ ಬಾರಿಯ ಐಪಿಎಲ್ ಹರಾಜಿಗಾಗಿ ಒಟ್ಟು 1166 ಆಟಗಾರರು ಹೆಸರು ನೀಡಿದ್ದಾರೆ. ಈ ಆಟಗಾರರ ಪಟ್ಟಿಯನ್ನು ಶಾರ್ಟ್ ಲೀಸ್ಟ್ ಮಾಡಲಿದ್ದು, ಇದಾದ ಬಳಿಕ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಅದರಂತೆ ಫೈನಲ್ ಪಟ್ಟಿಯಲ್ಲಿ ಸ್ಥಾನ ಪಡೆದ ಆಟಗಾರರು ಮಾತ್ರ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
Updated on: Dec 04, 2023 | 8:28 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿರುವ ಹರಾಜು ಪ್ರಕ್ರಿಯೆಗಾಗಿ ಈಗಾಗಲೇ ಒಟ್ಟು 1166 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಆದರೆ ಈ ಪಟ್ಟಿಯಲ್ಲಿ ಇಂಗ್ಲೆಂಡ್ನ ಪ್ರಮುಖ ವೇಗಿ ಜೋಫ್ರಾ ಆರ್ಚರ್ ಹೆಸರು ಕಾಣಿಸಿಕೊಂಡಿಲ್ಲ.

ಕಳೆದ ಸೀಸನ್ನಲ್ಲಿ ಜೋಫ್ರಾ ಮುಂಬೈ ಇಂಡಿಯನ್ಸ್ ಪರ ಆಡಿದ್ದರು. ಐಪಿಎಲ್ 2022 ರ ಹರಾಜಿನಲ್ಲಿ ಆರ್ಚರ್ ಆರ್ಚರ್ ಅವರನ್ನು ಮುಂಬೈ ಫ್ರಾಂಚೈಸಿ 8 ಕೋಟಿ ರೂ.ಗೆ ಖರೀದಿಸಿತ್ತು. ಇದಾಗ್ಯೂ ಗಾಯದ ಕಾರಣ ಅವರು ಐಪಿಎಲ್ ಸೀಸನ್ 15 ಆಡಿರಲಿಲ್ಲ. ಇನ್ನು ಫಿಟ್ನೆಸ್ ಸಮಸ್ಯೆಯ ಕಾರಣ ಸೀಸನ್ 16 ರಲ್ಲಿ ಕೇವಲ 5 ಪಂದ್ಯಗಳನ್ನು ಮಾತ್ರ ಆಡಿದ್ದರು.

ಇದೇ ಕಾರಣದಿಂದಾಗಿ ಈ ಬಾರಿಯ ಹರಾಜಿಗೂ ಮುನ್ನ ಜೋಫ್ರಾ ಆರ್ಚರ್ ಅವರನ್ನು ಮುಂಬೈ ಇಂಡಿಯನ್ಸ್ ಕೈ ಬಿಟ್ಟಿತು. ಇದಾಗ್ಯೂ ಅವರು ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೀಗ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ನ ಸೂಚನೆ ಮೇರೆಗೆ ಜೋಫ್ರಾ ಆರ್ಚರ್ ಐಪಿಎಲ್ನಿಂದ ಹಿಂದೆ ಸರಿದಿದ್ದಾರೆ.

ಕಳೆದ ಒಂದು ವರ್ಷದಿಂದ ಜೋಫ್ರಾ ಆರ್ಚರ್ ಇಂಗ್ಲೆಂಡ್ ಪರ ಯಾವುದೇ ಅಂತಾರಾಷ್ಟ್ರೀಯ ಪಂದ್ಯವಾಡಿಲ್ಲ. ಇದೀಗ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಆರ್ಚರ್ ಅವರ ಕೆಲಸದ ಹೊರೆಯನ್ನು ನಿರ್ವಹಿಸುವ ಸಲುವಾಗಿ ಇದೀಗ ಇಸಿಬಿ ಐಪಿಎಲ್ನಿಂದ ಹಿಂದೆ ಸರಿಯುವಂತೆ ತಿಳಿಸಿದೆ.

ಅಂದರೆ ಇಲ್ಲಿ ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ ಶುರುವಾಗಲಿದೆ. ಇದಕ್ಕಾಗಿ ಆರ್ಚರ್ ಅವರ ಫಿಟ್ನೆಸ್ ಮೇಲೆ ನಿಗಾವಹಿಸಲು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ. ಹೀಗಾಗಿಯೇ ಜೋಫ್ರಾ ಅವರಿಗೆ ಈ ಬಾರಿ ಐಪಿಎಲ್ ಆಡದಂತೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಜೋಫ್ರಾ ಆರ್ಚರ್ ಹೊರತಾಗಿಯೂ ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರರಾದ ಹ್ಯಾರಿ ಬ್ರೂಕ್, ಆದಿಲ್ ರಶೀದ್ ಮತ್ತು ಕ್ರಿಸ್ ವೋಕ್ಸ್ ಸೇರಿದಂತೆ 34 ಆಟಗಾರರು ಐಪಿಎಲ್ ಹರಾಜಿಗಾಗಿ ಹೆಸರು ನೋಂದಾಯಿಸಿಕೊಂಡಿದ್ದಾರೆ.

TV9 Kannada
Read More



