Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್ ಆಡದಂತೆ ಸ್ಟಾರ್ ಆಟಗಾರನಿಗೆ ಸೂಚನೆ..!

IPL 2024 Auction: ಈ ಬಾರಿಯ ಐಪಿಎಲ್ ಹರಾಜಿಗಾಗಿ ಒಟ್ಟು 1166 ಆಟಗಾರರು ಹೆಸರು ನೀಡಿದ್ದಾರೆ. ಈ ಆಟಗಾರರ ಪಟ್ಟಿಯನ್ನು ಶಾರ್ಟ್ ಲೀಸ್ಟ್ ಮಾಡಲಿದ್ದು, ಇದಾದ ಬಳಿಕ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಅದರಂತೆ ಫೈನಲ್ ಪಟ್ಟಿಯಲ್ಲಿ ಸ್ಥಾನ ಪಡೆದ ಆಟಗಾರರು ಮಾತ್ರ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Dec 04, 2023 | 8:28 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿರುವ ಹರಾಜು ಪ್ರಕ್ರಿಯೆಗಾಗಿ ಈಗಾಗಲೇ ಒಟ್ಟು 1166 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಆದರೆ ಈ ಪಟ್ಟಿಯಲ್ಲಿ ಇಂಗ್ಲೆಂಡ್​ನ ಪ್ರಮುಖ ವೇಗಿ ಜೋಫ್ರಾ ಆರ್ಚರ್ ಹೆಸರು ಕಾಣಿಸಿಕೊಂಡಿಲ್ಲ.

1 / 6
ಕಳೆದ ಸೀಸನ್​ನಲ್ಲಿ ಜೋಫ್ರಾ ಮುಂಬೈ ಇಂಡಿಯನ್ಸ್​ ಪರ ಆಡಿದ್ದರು. ಐಪಿಎಲ್ 2022 ರ ಹರಾಜಿನಲ್ಲಿ ಆರ್ಚರ್​ ಆರ್ಚರ್​ ಅವರನ್ನು ಮುಂಬೈ ಫ್ರಾಂಚೈಸಿ 8 ಕೋಟಿ ರೂ.ಗೆ ಖರೀದಿಸಿತ್ತು. ಇದಾಗ್ಯೂ ಗಾಯದ ಕಾರಣ ಅವರು ಐಪಿಎಲ್ ಸೀಸನ್ 15 ಆಡಿರಲಿಲ್ಲ. ಇನ್ನು ಫಿಟ್​ನೆಸ್ ಸಮಸ್ಯೆಯ ಕಾರಣ ಸೀಸನ್ 16 ರಲ್ಲಿ ಕೇವಲ 5 ಪಂದ್ಯಗಳನ್ನು ಮಾತ್ರ ಆಡಿದ್ದರು.

2 / 6
ಇದೇ ಕಾರಣದಿಂದಾಗಿ ಈ ಬಾರಿಯ ಹರಾಜಿಗೂ ಮುನ್ನ ಜೋಫ್ರಾ ಆರ್ಚರ್ ಅವರನ್ನು ಮುಂಬೈ ಇಂಡಿಯನ್ಸ್ ಕೈ ಬಿಟ್ಟಿತು. ಇದಾಗ್ಯೂ ಅವರು ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೀಗ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ನ ಸೂಚನೆ ಮೇರೆಗೆ ಜೋಫ್ರಾ ಆರ್ಚರ್ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

3 / 6
ಕಳೆದ ಒಂದು ವರ್ಷದಿಂದ ಜೋಫ್ರಾ ಆರ್ಚರ್ ಇಂಗ್ಲೆಂಡ್ ಪರ ಯಾವುದೇ ಅಂತಾರಾಷ್ಟ್ರೀಯ ಪಂದ್ಯವಾಡಿಲ್ಲ. ಇದೀಗ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಆರ್ಚರ್ ಅವರ ಕೆಲಸದ ಹೊರೆಯನ್ನು ನಿರ್ವಹಿಸುವ ಸಲುವಾಗಿ ಇದೀಗ ಇಸಿಬಿ ಐಪಿಎಲ್​ನಿಂದ ಹಿಂದೆ ಸರಿಯುವಂತೆ ತಿಳಿಸಿದೆ.

4 / 6
ಅಂದರೆ ಇಲ್ಲಿ ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ ಶುರುವಾಗಲಿದೆ. ಇದಕ್ಕಾಗಿ ಆರ್ಚರ್ ಅವರ ಫಿಟ್​ನೆಸ್ ಮೇಲೆ ನಿಗಾವಹಿಸಲು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ ನಿರ್ಧರಿಸಿದೆ. ಹೀಗಾಗಿಯೇ ಜೋಫ್ರಾ ಅವರಿಗೆ ಈ ಬಾರಿ ಐಪಿಎಲ್ ಆಡದಂತೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.

5 / 6
ಇನ್ನು ಜೋಫ್ರಾ ಆರ್ಚರ್ ಹೊರತಾಗಿಯೂ ಇಂಗ್ಲೆಂಡ್ ತಂಡದ  ಸ್ಟಾರ್ ಆಟಗಾರರಾದ ಹ್ಯಾರಿ ಬ್ರೂಕ್, ಆದಿಲ್ ರಶೀದ್ ಮತ್ತು ಕ್ರಿಸ್ ವೋಕ್ಸ್​ ಸೇರಿದಂತೆ 34 ಆಟಗಾರರು ಐಪಿಎಲ್​ ಹರಾಜಿಗಾಗಿ ಹೆಸರು ನೋಂದಾಯಿಸಿಕೊಂಡಿದ್ದಾರೆ.

6 / 6
Follow us
Daily Horoscope: ಸೂರ್ಯ ಮೇಷ ರಾಶಿಯಲ್ಲಿ ಚಂದ್ರ ಮಕರ ರಾಶಿಯಲ್ಲಿ ಸಂಚಾರ

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?

ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ

ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ

ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ

ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು

ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ

ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ