ಟಿ20 ವಿಶ್ವಕಪ್​ಗೆ ಮೂವರಿಲ್ಲ… ಆಸ್ಟ್ರೇಲಿಯಾಗೆ ಆಘಾತದ ಮೇಲೆ ಆಘಾತ

Updated on: Feb 07, 2026 | 10:54 AM

T20 World Cup 2026: ಟಿ20 ವಿಶ್ವಕಪ್ 2026ರ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿgಳು ಫಿಟ್​ನೆಸ್ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹೊರಗುಳಿದಿದ್ದಾರೆ. ಅನುಭವಿ ವೇಗಿಗಳ ಅನುಪಸ್ಥಿತಿಯಿಂದಾಗಿ ಟೂರ್ನಿ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾ ತಂಡ ಹಿನ್ನಡೆ ಅನುಭವಿಸಿದೆ.

1 / 6
T20 World Cup 2026: ಟಿ20 ವಿಶ್ವಕಪ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ (ಫೆ.7) ಪ್ರಾರಂಭವಾಗಲಿರುವ ಚುಟುಕು ಕ್ರಿಕೆಟ್ ಕದನದಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ಇಪ್ಪತ್ತು ತಂಡಗಳಲ್ಲಿ ಬಲಿಷ್ಠ ಪಡೆ ಎಂದೇ ಗುರುತಿಸಿಕೊಂಡಿದ್ದ ಆಸ್ಟ್ರೇಲಿಯಾ ತಂಡಕ್ಕೆ ಆಘಾತದ ಮೇಲೆ ಆಘಾತ ಎದುರಾಗಿದೆ.

T20 World Cup 2026: ಟಿ20 ವಿಶ್ವಕಪ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ (ಫೆ.7) ಪ್ರಾರಂಭವಾಗಲಿರುವ ಚುಟುಕು ಕ್ರಿಕೆಟ್ ಕದನದಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ಇಪ್ಪತ್ತು ತಂಡಗಳಲ್ಲಿ ಬಲಿಷ್ಠ ಪಡೆ ಎಂದೇ ಗುರುತಿಸಿಕೊಂಡಿದ್ದ ಆಸ್ಟ್ರೇಲಿಯಾ ತಂಡಕ್ಕೆ ಆಘಾತದ ಮೇಲೆ ಆಘಾತ ಎದುರಾಗಿದೆ.

2 / 6

ಹೌದು, ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಆಸ್ಟ್ರೇಲಿಯಾ ತಂಡದ ಇಬ್ಬರು ಸ್ಟಾರ್ ಆಟಗಾರರು ಟೂರ್ನಿಯಿಂದ ಹೊರಗುಳಿದಿದ್ದಾರೆ. ಟಿ20 ವಿಶ್ವಕಪ್​ ತಂಡದಲ್ಲಿ ಪ್ರಮುಖ ವೇಗಿಗಳಾಗಿ ಆಯ್ಕೆಯಾಗಿದ್ದ ಪ್ಯಾಟ್ ಕಮಿನ್ಸ್ ಹಾಗೂ ಜೋಶ್ ಹೇಝಲ್​ವುಡ್ ಇದೀಗ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

3 / 6

ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಲಾದ ತಂಡದಲ್ಲಿ ಪ್ರಮುಖ ವೇಗದ ಬೌಲರ್ ಆಗಿ ಪ್ಯಾಟ್ ಕಮಿನ್ಸ್ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಬೆನ್ನಿನ ಕೆಳಭಾಗದ ನೋವಿನ ಸಮಸ್ಯೆಯಿಂದ ಬಳುತ್ತಿರುವ ಕಮಿನ್ಸ್ ಇನ್ನೂ ಕೂಡ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರು ಟಿ20 ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ.

4 / 6

ಇನ್ನು ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಾಸ್ತ್ರವಾಗಿರುವ ಜೋಶ್ ಹೇಝಲ್​ವುಡ್ ಕೂಡ ವಿಶ್ವಕಪ್​ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಕಳೆದ ಕೆಲ ತಿಂಗಳಿಂದ ಮಂಡಿರಜ್ಜು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಹೇಝಲ್​ವುಡ್ ಕೂಡ ಇನ್ನೂ ಸಹ ಸಂಪೂರ್ಣ ಫಿಟ್ ಅಗಿಲ್ಲ. ಹೀಗಾಗಿ ಅವರು ಸಹ ಆಸ್ಟ್ರೇಲಿಯಾ ತಂಡದಿಂದ ಹೊರಗುಳಿದಿದ್ದಾರೆ.

5 / 6

ಮತ್ತೊಂದೆಡೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಕೂಡ ಕಾಣಿಸಿಕೊಳ್ಳುತ್ತಿಲ್ಲ. ಏಕೆಂದರೆ ಸ್ಟಾರ್ಕ್​ ಈಗಾಗಲೇ ​ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ.  ಹೀಗಾಗಿ ಅವರು ಸಹ ಆಸ್ಟ್ರೇಲಿಯಾ ತಂಡದಲ್ಲಿಲ್ಲ. ಅಂದರೆ ಮೂವರು ವೇಗಾಸ್ತ್ರವಿಲ್ಲದೆ ಆಸ್ಟ್ರೇಲಿಯಾ ತಂಡವು ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿದೆ.

6 / 6

ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ಕ್ಯಾಮರೋನ್ ಗ್ರೀನ್, ನಾಥನ್ ಎಲ್ಲಿಸ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಟ್ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ರೆನ್‌ಶಾ, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ.

Loading...
Unable to load recommendations.
Follow Us