AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sarfaraz Khan: ಸರ್ಫರಾಝ್​ಗೆ ಆಡುವ ಬಳಗದಲ್ಲಿ ಚಾನ್ಸ್ ಸಿಗೋದು ಡೌಟ್..!

India vs England 2nd Test: ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯ ಶುಕ್ರವಾರದಿಂದ ಶುರುವಾಗಲಿದೆ. ಆದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಯುವ ಆಟಗಾರ ಸರ್ಫರಾಝ್​ ಖಾನ್​ಗೆ ಅವಕಾಶ ಸಿಗುವುದು ಅನುಮಾನ.

TV9 Web
| Edited By: |

Updated on: Jan 30, 2024 | 11:58 AM

Share
ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿನ 11 ವರ್ಷಗಳ ಕಠಿಣ ಪರಿಶ್ರಮದ ಬಳಿಕ ಸರ್ಫರಾಝ್ ಖಾನ್​ಗೆ (Sarfaraz Khan) ಕೊನೆಗೂ ಭಾರತ ತಂಡದಲ್ಲಿ ಅವಕಾಶ ಸಿಕ್ಕಿದೆ. ಮೊದಲ ಟೆಸ್ಟ್ ಪಂದ್ಯದ ವೇಳೆ ತೊಡೆಸಂಧು ಗಾಯಕ್ಕೆ ತುತ್ತಾಗಿದ್ದ ಕೆಎಲ್ ರಾಹುಲ್ ಬದಲಿಗೆ ಇದೀಗ ಸರ್ಫರಾಝ್ ಟೀಮ್ ಇಂಡಿಯಾವನ್ನು ಕೂಡಿಕೊಂಡಿದ್ದಾರೆ.

1 / 7
ಆದರೆ ಸರ್ಫರಾಝ್​ ಖಾನ್​ಗೆ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಚಾನ್ಸ್ ಸಿಗುವುದು ಅನುಮಾನ. ಏಕೆಂದರೆ ಈಗಾಗಲೇ ತಂಡದಲ್ಲಿ ಚೊಚ್ಚಲ ಅವಕಾಶಕ್ಕಾಗಿ ರಜತ್ ಪಾಟಿದಾರ್ ಎದುರು ನೋಡುತ್ತಿದ್ದಾರೆ. ಅಂದರೆ ಸರ್ಫರಾಝ್​ಗೂ ಮುನ್ನವೇ ಪಾಟಿದಾರ್ ಟೀಮ್ ಇಂಡಿಯಾಗೆ ಆಯ್ಕೆಯಾಗಿದ್ದಾರೆ.

2 / 7
ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿರುವ ವಿರಾಟ್ ಕೊಹ್ಲಿ ಬದಲಿಗೆ ಮಧ್ಯಮ ಕ್ರಮಾಂಕಕ್ಕೆ ರಜತ್ ಪಾಟಿದಾರ್ ಆಯ್ಕೆಯಾಗಿದ್ದರು. ಇದೀಗ ಕೆಎಲ್ ರಾಹುಲ್ ತಂಡದಿಂದ ಹೊರಗುಳಿದಿರುವ ಕಾರಣ ಪಾಟಿದಾರ್​ಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಸಿಗುವ ಸಾಧ್ಯತೆಯಿದೆ.

3 / 7
ಅತ್ತ ಭರ್ಜರಿ ಫಾರ್ಮ್​ನಲ್ಲಿದ್ದರೂ ಸರ್ಫರಾಝ್​ಗೆ ಆಡುವ ಬಳಗದಲ್ಲಿ ಅವಕಾಶ ಸಿಗಬೇಕಿದ್ದರೆ ಶುಭ್​ಮನ್ ಗಿಲ್ ಅಥವಾ ಶ್ರೇಯಸ್ ಅಯ್ಯರ್ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡಬೇಕಾಗುತ್ತದೆ. ಆದರೆ ಕೇವಲ ಒಂದು ಪಂದ್ಯದ ಬಳಿಕ ಕೋಚ್ ರಾಹುಲ್ ದ್ರಾವಿಡ್ ಇಂತಹದೊಂದು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ.

4 / 7
ಹೀಗಾಗಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯಲು ಸರ್ಫರಾಝ್ ಖಾನ್ 3ನೇ ಟೆಸ್ಟ್ ಪಂದ್ಯದವರೆಗೂ ಕಾಯಬೇಕಾಗಿ ಬರಬಹುದು. ಅದರಂತೆ ರಾಜ್​ಕೋಟ್​ನಲ್ಲಿ ನಡೆಯಲಿರುವ ಮೂರನೇ ಪಂದ್ಯದ ಮೂಲಕ ಸರ್ಫರಾಝ್ ಖಾನ್ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡುವ ಅವಕಾಶ ಸಿಗಬಹುದು.

5 / 7
ಅಂದಹಾಗೆ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 66 ಇನಿಂಗ್ಸ್ ಆಡಿರುವ ಸರ್ಫರಾಝ್ ಖಾನ್ 14 ಶತಕಗಳು ಹಾಗೂ 11 ಅರ್ಧಶತಕಗಳೊಂದಿಗೆ ಒಟ್ಟು 3912 ರನ್ ಕಲೆಹಾಕಿದ್ದಾರೆ. ಈ ಭರ್ಜರಿ ಪ್ರದರ್ಶನದೊಂದಿಗೆ ಇದೀಗ ಭಾರತ ತಂಡಕ್ಕೆ ಎಂಟ್ರಿ ಕೊಟ್ಟಿರುವ ಯುವ ದಾಂಡಿಗ ಚೊಚ್ಚಲ ಅವಕಾಶವನ್ನು ಎದುರು ನೋಡುತ್ತಿದ್ದಾರೆ.

6 / 7
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ, ಸರ್ಫರಾಝ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್.

7 / 7
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು

ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್

‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ

ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ

ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!