AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋ ಟ್ರೋಫಿ, ನೋ ಟೆನ್ಶನ್: ಟೀಮ್ ಇಂಡಿಯಾ ಆಟಗಾರರ ಫೋಟೋಸ್ ವೈರಲ್

Asia Cup 2025 Final India vs Pakistan: ಭಾರತ ಮತ್ತು ಪಾಕಿಸ್ತಾನ್ ನಡುವಣ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ದುಬೈನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 19.1 ಓವರ್​ಗಳಲ್ಲಿ 146 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು 19.4 ಓವರ್​ಗಳಲ್ಲಿ ಚೇಸ್ ಮಾಡಿ ಟೀಮ್ ಇಂಡಿಯಾ 5 ವಿಕೆಟ್​ಗಳ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಝಾಹಿರ್ ಯೂಸುಫ್
|

Updated on: Sep 29, 2025 | 10:09 AM

Share
ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ಭಾರತ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ಹೊರತಾಗಿಯೂ ಟೀಮ್ ಇಂಡಿಯಾಗೆ ಟ್ರೋಫಿಯನ್ನು ಹಸ್ತಾಂತರಿಸಲಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಭಾರತೀಯ ಆಟಗಾರರು ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಮೊಹ್ಸಿನ್ ನಖ್ವಿಯಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿರುವುದು.

1 / 5
ಟೀಮ್ ಇಂಡಿಯಾ ಆಟಗಾರರು ಟ್ರೋಫಿ ಸ್ವೀಕರಿಸಲು ನಿರಾಕರಿಸುತ್ತಿದ್ದಂತೆ ಮೊಹ್ಸಿನ್ ನಖ್ವಿ ಏಷ್ಯಾಕಪ್ ಟ್ರೋಫಿಯನ್ನು ಹೋಟೆಲ್​ಗೆ ತೆಗೆದುಕೊಂಡು ಹೋದರು. ಹೀಗಾಗಿ ಭಾರತ ತಂಡಕ್ಕೆ ಟ್ರೋಫಿ ನೀಡಲಾಗಿರಲಿಲ್ಲ. ಇದಾಗ್ಯೂ ವಿತ್ ಔಟ್ ಟ್ರೋಫಿಯೊಂದಿಗೆ ಟೀಮ್ ಇಂಡಿಯಾ ಆಟಗಾರರು ಸಖತ್ತಾಗೇ ಸಂಭ್ರಮಿಸಿದರು.

2 / 5
ಈ ಸಂಭ್ರಮದೊಂದಿಗೆ ಭಾರತೀಯ ಆಟಗಾರರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಟ್ರೋಫಿ ಇಲ್ಲದಿದ್ದರೂ, ಟೀಮ್ ಇಂಡಿಯಾ ಆಟಗಾರರು ಫೋಟೋ ಎಡಿಟ್ ಮೂಲಕ ಕಪ್ ಚಿತ್ರ ಹಾಕಿ ಪೋಸ್ ನೀಡಿದ್ದಾರೆ. ಅಲ್ಲದೆ ಈ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

3 / 5
ವಿಶೇಷ ಎಂದರೆ ಪ್ರತಿ ಬಾರಿ ಟ್ರೋಫಿ ಗೆದ್ದು ಟ್ರೇಡ್ ಮಾರ್ಕ್ ಸೆಲೆಬ್ರೇಷನ್ ಮಾಡುವ ಹಾರ್ದಿಕ್ ಪಾಂಡ್ಯ ಈ ಬಾರಿ ಕೂಡ ಅದನ್ನು ಮುಂದುವರೆಸಿದ್ದಾರೆ. ಆದರೆ ಈ ಬಾರಿ ಟ್ರೋಫಿ ಇಲ್ಲದ ಕಾರಣ, ಅಲ್ಲಿ ಕಪ್ ಚಿತ್ರವನ್ನು ಎಡಿಟ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 5
ಇನ್ನು ಅಭಿಷೇಕ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಕೂಡ ನೋ ಟ್ರೋಫಿ, ನೋ ಟೆನ್ಶನ್ ಎಂಬಂತೆ ಎಡಿಟ್ ಫೋಟೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಡಿದ್ದಾರೆ. ಹಾಗೆಯೇ ಸೂರ್ಯಕುಮಾರ್ ಯಾದವ್ ಹಾಗೂ ತಿಲಕ್ ವರ್ಮಾ ಕೂಡ ಟ್ರೋಫಿ ಎಡಿಟ್ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಟೀಮ್ ಇಂಡಿಯಾ ಆಟಗಾರರ ನೋ ಟ್ರೋಫಿ, ನೋ ಟೆನ್ಶನ್ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗಿದೆ.

5 / 5