AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ಎಸೆತಗಳಲ್ಲಿ ದಾಖಲೆ ನಿರ್ಮಿಸಿದ ಪಾಕಿಸ್ತಾನ್ ಸ್ಪಿನ್ನರ್

Noman Ali Hat-Trick: ಟೆಸ್ಟ್ ಕ್ರಿಕೆಟ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ವಿಶೇಷ ಸಾಧಕರ ಪಟ್ಟಿಗೆ ಪಾಕಿಸ್ತಾನ್ ಸ್ಪಿನ್ನರ್ ನೊಮಾನ್ ಅಲಿ ಕೂಡ ಸೇರ್ಪಡೆಯಾಗಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಪಾಕಿಸ್ತಾನದ ಮೊದಲ ಸ್ಪಿನ್ನರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಟೆಸ್ಟ್​ನ ಮೊದಲ ದಿನದಾಟದಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿ ನೊಮಾನ್ ಅಲಿ ಈ ವಿಶೇಷ ದಾಖಲೆ ಬರೆದಿದ್ದಾರೆ.

ಝಾಹಿರ್ ಯೂಸುಫ್
|

Updated on:Jan 25, 2025 | 12:17 PM

Share
ಮುಲ್ತಾನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂಲಕ ಪಾಕಿಸ್ತಾನ್ ಸ್ಪಿನ್ನರ್ ನೊಮಾನ್ ಅಲಿ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಹ್ಯಾಟ್ರಿಕ್ ವಿಕೆಟ್ ಕಬಳಿಸುವ ಮೂಲಕ ಎಂಬುದು ವಿಶೇಷ. ಇದರೊಂದಿಗೆ ಈ ಸಾಧನೆ ಮಾಡಿದ ಪಾಕಿಸ್ತಾನದ ಮೊದಲ ಸ್ಪಿನ್ನರ್ ಎನಿಸಿಕೊಂಡಿದ್ದಾರೆ.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ವೆಸ್ಟ್ ಇಂಡೀಸ್ ತಂಡವು ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶಿಸಲಿಲ್ಲ. ಆರಂಭಿಕರಾದ ಕ್ರೇಗ್ ಬ್ರಾಥ್‌ವೈಟ್ (9), ಮೈಕೈಲ್ ಲೂಯಿಸ್ (4) ಬಂದ ವೇಗದಲ್ಲೇ ಹಿಂತಿರುಗಿದರೆ, ಆ ಬಳಿಕ ಬಂದ ಅಮೀರ್ ಜಾಂಗೂ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು.

2 / 5
ಇದರ ಬಳಿಕ ಬಂದ ಜಸ್ಟಿನ್ ಗ್ರೀವ್ಸ್ (1), ಟೆವಿನ್ ಇಮ್ಲಾಚ್ (0) ಹಾಗೂ ಕೆವಿನ್ ಸಿಂಕ್ಲೇರ್ (0) ಅವರುಗಳ ವಿಕೆಟ್ ಕಬಳಿಸುವ ಮೂಲಕ ನೊಮಾನ್ ಅಲಿ ಚೊಚ್ಚಲ ಹ್ಯಾಟ್ರಿಕ್ ಸಾಧನೆ ಮಾಡಿದರು. ಈ ಮೂಲಕ ಪಾಕಿಸ್ತಾನ್ ಪರ ಟೆಸ್ಟ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಸ್ಪಿನ್ನರ್ ಎನಿಸಿಕೊಂಡರು.

3 / 5
ಅಲ್ಲದೆ ಪಾಕ್ ಪರ ಟೆಸ್ಟ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ 5ನೇ ಬೌಲರ್​ ಎಂಬ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ವಾಸಿಂ ಅಕ್ರಮ್ (1999), ಅಬ್ದುಲ್ ರಝಾಕ್ (2000), ಮೊಹಮ್ಮದ್ ಸಮಿ (2002), ನಸೀಮ್ ಶಾ (2020) ಈ ಸಾಧನೆ ಮಾಡಿದ್ದರು. ಇದೀಗ ಈ ಸಾಧಕರ ಪಟ್ಟಿಗೆ ಸ್ಪಿನ್ನರ್ ಆಗಿ ನೊಮಾನ್ ಅಲಿ ಎಂಟ್ರಿ ಕೊಟ್ಟಿದ್ದಾರೆ.

4 / 5
ಇನ್ನು ನೊಮಾನ್ ಅಲಿ ಅವರ ಈ ಹ್ಯಾಟ್ರಿಕ್ ವಿಕೆಟ್​ನಿಂದಾಗಿ ದಿಢೀರ್ ಕುಸಿತಕ್ಕೊಳಗಾದ ವೆಸ್ಟ್ ಇಂಡೀಸ್ ತಂಡವು 30 ಓವರ್​ಗಳ ಮುಕ್ತಾಯದ ವೇಳೆಗೆ 9 ವಿಕೆಟ್ ಕಳೆದುಕೊಂಡು 100 ರನ್ ಕಲೆಹಾಕಿದೆ. ಇತ್ತ 12 ಓವರ್​ಗಳನ್ನು ಎಸೆದಿರುವ ನೊಮಾನ್ ಅಲಿ 30 ರನ್ ನೀಡಿ 5 ವಿಕೆಟ್ ಕಬಳಿಸಿದ್ದಾರೆ.

5 / 5

Published On - 12:17 pm, Sat, 25 January 25

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ

ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ

ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ

ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ