AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಯುಎಸ್​ಎ ಟಿ20 ವಿಶ್ವಕಪ್ ತಂಡದಲ್ಲಿ ಕನ್ನಡಿಗ..!

T20 World Cup 2024: ಈ ಬಾರಿಯ ಟಿ20 ವಿಶ್ವಕಪ್ ಜೂನ್ 2 ರಿಂದ ಶುರುವಾಗಲಿದೆ. ಯುಎಸ್​ಎ-ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸುತ್ತಿರುವ ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿದೆ. ಈ ಟೂರ್ನಿಗಾಗಿ ಇದೀಗ ಆತಿಥೇಯ ಯುಎಸ್​ಎ ತಂಡವನ್ನು ಪ್ರಕಟಿಸಲಾಗಿದ್ದು, ಈ ತಂಡದಲ್ಲಿ ಕರ್ನಾಟಕ ಮೂಲದ ಆಟಗಾರರೊಬ್ಬರು ಕಾಣಿಸಿಕೊಂಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on:May 04, 2024 | 11:09 AM

Share
T20 World Cup 2024: ಟಿ20 ವಿಶ್ವಕಪ್​ಗಾಗಿ ಯುಎಸ್​ಎ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗದಲ್ಲಿ ಕರುನಾಡ ಕುವರ ಕಾಣಿಸಿಕೊಂಡಿರುವುದು ವಿಶೇಷ. ಅಂದರೆ ಟಿ20 ವಿಶ್ವಕಪ್​ನಲ್ಲಿ ಯುಎಸ್​ಎ ಪರ ಕನ್ನಡಿಗನೋರ್ವ ಕೂಡ ಕಣಕ್ಕಿಳಿಯಲಿದ್ದಾರೆ.

1 / 6
ಹೌದು, ಯುಎಸ್​ಎ ಟಿ20 ವಿಶ್ವಕಪ್​ ತಂಡದಲ್ಲಿ ಚಿಕ್ಕಮಗಳೂರಿನ ನೋಸ್ತುಶ್ ಕೆಂಜಿಗೆ ಆಯ್ಕೆಯಾಗಿದ್ದಾರೆ. 2019 ರಲ್ಲಿ ಯುಎಸ್​ಎ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ನೋಸ್ತುಶ್ ಇದೀಗ ಟಿ20 ವಿಶ್ವಕಪ್​ ತಂಡದಲ್ಲೂ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

2 / 6
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಂಜಿಗೆ ಗ್ರಾಮದವಾರದ ನೋಸ್ತುಶ್ ಈ ಹಿಂದೆ ಬೆಂಗಳೂರಿನಲ್ಲಿ ಕ್ಲಬ್ ಕ್ರಿಕೆಟ್ ಆಡಿದ್ದರು. ಟೀಮ್ ಇಂಡಿಯಾ ಆಟಗಾರರಾದ ಮಯಾಂಕ್ ಆಗರ್ವಾಲ್, ಕರುಣ್ ನಾಯರ್, ಶ್ರೇಯಸ್ ಅಯ್ಯರ್ ಜೊತೆ ಕ್ಲಬ್ ತಂಡವನ್ನು ಪ್ರತಿನಿಧಿಸಿದ್ದರು.

3 / 6
ಆದರೆ ಹೆಚ್ಚಿನ ಅವಕಾಶ ಸಿಗದಿದ್ದ ಕಾರಣ ಅವರು ಅಮೆರಿಕದತ್ತ ಮುಖ ಮಾಡಿದ್ದರು. ಅಲ್ಲದೆ ಯುಎಸ್​ಎ ಪರ ಆಲ್​ರೌಂಡರ್ ಆಟದೊಂದಿಗೆ ಮಿಂಚಿದ ನೋಸ್ತುಶ್ ಕೆಂಜಿಗೆ ಇದೀಗ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ. ಅಲ್ಲದೆ ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಕಣಕ್ಕಿಳಿಯುವ ವಿಶ್ವಾಸದಲ್ಲಿದ್ದಾರೆ.

4 / 6
ಎಡಗೈ ಸ್ಪಿನ್ನರ್-ಬಲಗೈ ಬ್ಯಾಟರ್ ಆಗಿ ಕಣಕ್ಕಿಳಿಯುವ ನೋಸ್ತುಶ್ ಕೆಂಜಿಗೆ ಈಗಾಗಲೇ ಯುಎಸ್​ಎ ಪರ 40 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 38 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇನ್ನು 4 ಟಿ20 ಪಂದ್ಯಗಳಿಂದ ನಾಲ್ಕು ವಿಕೆಟ್ ಪಡೆದಿದ್ದಾರೆ. ಹಾಗೆಯೇ ಒಟ್ಟು 357 ರನ್ ಕಲೆಹಾಕಿದ್ದಾರೆ.

5 / 6
ಯುಎಸ್​ಎ ಟಿ20 ವಿಶ್ವಕಪ್ ತಂಡ: ಮೊನಾಂಕ್ ಪಟೇಲ್ (ನಾಯಕ), ಆರೋನ್ ಜೋನ್ಸ್ (ಉಪನಾಯಕ), ಆಂಡ್ರೀಸ್ ಗೌಸ್, ಕೋರಿ ಆಂಡರ್ಸನ್, ಅಲಿ ಖಾನ್, ಹರ್ಮೀತ್ ಸಿಂಗ್, ಜೆಸ್ಸಿ ಸಿಂಗ್, ಮಿಲಿಂದ್ ಕುಮಾರ್, ನಿಸರ್ಗ್ ಪಟೇಲ್, ನಿತೀಶ್ ಕುಮಾರ್, ನೋಸ್ತುಶ್ ಕೆಂಜಿಗೆ, ಸೌರಭ್ ನೇತ್ರಲ್ವಾಕರ್, ಶಾಡ್ಲಿ ವ್ಯಾನ್ ಶಾಲ್ಕ್ವಿಕ್ , ಸ್ಟೀವನ್ ಟೇಲರ್, ಶಯಾನ್ ಜಹಾಂಗೀರ್.

6 / 6

Published On - 11:07 am, Sat, 4 May 24

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!

ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?