- Kannada News Photo gallery Cricket photos NZ vs ENG Test England skipper Ben Stokes becomes third batter to smash 100 sixes in Test Cricket
Ben Stokes: ಸಿಕ್ಸರ್ಗಳ ಸರದಾರ: ಟೆಸ್ಟ್ ಕ್ರಿಕೆಟ್ನಲ್ಲಿ ನೂತನ ದಾಖಲೆ ಬರೆದ ಬೆನ್ ಸ್ಟೋಕ್ಸ್
NZ vs ENG Test: ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಅವರು ಲೀಡ್ಸ್ನಲ್ಲಿ ನಡೆದ ಮೂರನೇ ಮತ್ತು ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ವಿಶೇಷ ದಾಖಲೆ ನಿರ್ಮಿಸಿದ್ದಾರೆ.
Updated on:Jun 26, 2022 | 11:46 AM

ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಅವರು ಲೀಡ್ಸ್ನಲ್ಲಿ ನಡೆದ ಮೂರನೇ ಮತ್ತು ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

ಮೊದಲ ಇನ್ನಿಂಗ್ಸ್ ನಲ್ಲಿ ಬಾರಿಸಿದ ಏಕೈಕ ಸಿಕ್ಸರ್ ನಿಂದ ಟೆಸ್ಟ್ ಕ್ರಿಕೆಟ್ ನಲ್ಲಿ ಎರಡನೇ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಸ್ಟ್ರೇಲಿಯನ್ ಬ್ಯಾಟರ್- ವಿಕೆಟ್ ಕೀಪರ್ ಆಡಮ್ ಗಿಲ್ ಕ್ರಿಸ್ಟ್ ದಾಖಲೆಯನ್ನು ಸರಿಗಟ್ಟಿದರು. ಟೆಸ್ಟ್ ಕ್ರಿಕೆಟ್ ನಲ್ಲಿ ತ್ವರಿತವಾಗಿ ನೂರು ಸಿಕ್ಸರ್ ಬಾರಿಸಿದ ಎರಡನೇ ಬ್ಯಾಟ್ಸ್ ಮನ್ ಆದರು.

ಆತಿಥೇಯ ತಂಡದ ನಾಯಕ ಬೆನ್ ಸ್ಟೋಕ್ಸ್ ಗಳಿಸಿದ 18 ರನ್ಗಳಲ್ಲಿ ಎರಡು ಬೌಂಡರಿ ಮತ್ತು ಒಂದು ಸಿಕ್ಸರ್ ಗಳಿದ್ದವು. ಈ ಮೂಲಕ ಆಸೀಸ್ ಮಾಜಿ ಆಟಗಾರ ಆಡಮ್ ಗಿಲ್ ಕ್ರಿಸ್ಟ್ ಅವರ 100 ಸಿಕ್ಸರ್ ಗಳ ದಾಖಲೆಯನ್ನು ಸರಿಗಟ್ಟಿದರು.

ಕ್ರಿಕೆಟ್ ಲೋಕದ ಬಿಗ್ ಹಿಟ್ಟರ್ಗಳಲ್ಲಿ ಒಬ್ಬರಾದ ಆಸ್ಟ್ರೇಲಿಯನ್ ಆಡಮ್ ಗಿಲ್ ಕ್ರಿಸ್ಟ್ 137 ಇನ್ನಿಂಗ್ಸ್ ಗಳಲ್ಲಿ 100 ಸಿಕ್ಸರ್ ಬಾರಿಸಿದರೆ, ಬೆನ್ ಸ್ಟೋಕ್ಸ್ 151 ಇನ್ನಿಂಗ್ಸ್ ಗಳಲ್ಲಿ 100 ಸಿಕ್ಸರ್ ಸಿಡಿಸಿದ್ದಾರೆ.

ಈ ಪಟ್ಟಿಯಲ್ಲಿ ನ್ಯೂಜಿಲೆಂಡ್ ಮಾಜಿ ಆಟಗಾರ ಬ್ರೆಂಡನ್ ಮೆಕಲಮ್ ಅವರು 176 ಇನ್ನಿಂಗ್ಸ್ ಗಳಲ್ಲಿ 107 ಸಿಕ್ಸರ್ ನೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.
Published On - 11:46 am, Sun, 26 June 22
























