- TV9 Kannada Kannada News Photos Cricket Photos NZ vs IND T20: Chapman, Foulkes Out; Kiwis Announce Replacements for Series
ಭಾರತ- ಕಿವೀಸ್ ಟಿ20 ಸರಣಿಯಿಂದ ಇಬ್ಬರು ಸ್ಟಾರ್ ಪ್ಲೇಯರ್ಸ್ ಔಟ್..!
ಭಾರತ-ನ್ಯೂಜಿಲೆಂಡ್ T20 ಸರಣಿ ಅಕ್ಟೋಬರ್ 22 ರಂದು ಪ್ರಾರಂಭವಾಗಲಿದೆ. ಸರಣಿಗೆ ಮುನ್ನವೇ, ಗಾಯಗಳಿಂದಾಗಿ ನ್ಯೂಜಿಲೆಂಡ್ ತಂಡದಲ್ಲಿ ಎರಡು ಪ್ರಮುಖ ಬದಲಾವಣೆಗಳಾಗಿವೆ. ಸ್ಫೋಟಕ ಬ್ಯಾಟ್ಸ್‌ಮನ್ ಮಾರ್ಕ್ ಚಾಪ್‌ಮನ್ ಮತ್ತು ವೇಗದ ಬೌಲರ್ ಜ್ಯಾಕ್ ಫೌಲ್ಕ್ಸ್ ಗಾಯದಿಂದ ಸರಣಿಯಿಂದ ಹೊರಗುಳಿದಿದ್ದಾರೆ. ಇವರ ಬದಲಿಗೆ ಜೋಶ್ ಕ್ಲಾರ್ಕ್ಸನ್ ಮತ್ತು ಬ್ಲೇರ್ ಟಿಕ್ನರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
Updated on: Oct 09, 2026 | 5:32 PM

ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿ ಮುಗಿದ ಬಳಿಕ ಟೀಂ ಇಂಡಿಯಾ ನೇರವಾಗಿ ನ್ಯೂಜಿಲೆಂಡ್‌ಗೆ ಪ್ರಯಾಣ ಬೆಳೆಸಲಿದೆ. ಅಲ್ಲಿ ಮೂರು ಮಾದರಿಯ ಸರಣಿಯನ್ನು ಆಡಲಿದೆ. ಅಕ್ಟೋಬರ್ 22 ರಂದು ಪ್ರಾರಂಭವಾಗುವ ಐದು ಪಂದ್ಯಗಳ ಟಿ20 ಸರಣಿಯೊಂದಿಗೆ ಭಾರತದ ಈ ಪ್ರವಾಸ ಆರಂಭವಾಗಲಿದೆ(PC-PTI).

ಈ ಸರಣಿಗೆ ಎರಡೂ ದೇಶಗಳು ಈಗಾಗಲೇ ತಮ್ಮ ತಮ್ಮ ತಂಡಗಳನ್ನು ಘೋಷಿಸಿವೆ. ಆದಾಗ್ಯೂ, ಸರಣಿಯ ಮೊದಲ ಪಂದ್ಯ ಪ್ರಾರಂಭವಾಗುವ ಮೊದಲೇ ಆತಿಥೇಯ ನ್ಯೂಜಿಲೆಂಡ್ ತಂಡದಲ್ಲಿ ಎರಡು ಬದಲಾವಣೆಗಳಾಗಿವೆ. ಗಾಯಗಳಿಂದಾಗಿ ಕಿವೀಸ್ ತಂಡವು ತನ್ನ ತಂಡದಲ್ಲಿ ಎರಡು ಮಹತ್ವದ ಬದಲಾವಣೆಗಳನ್ನು ಮಾಡಿದೆ (PC-PTI).

ನ್ಯೂಜಿಲೆಂಡ್‌ನ ಸ್ಫೋಟಕ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಮಾರ್ಕ್ ಚಾಪ್‌ಮನ್ ಮತ್ತು ವೇಗದ ಬೌಲರ್ ಜ್ಯಾಕ್ ಫೌಲ್ಕ್ಸ್ ಅವರನ್ನು ಗಾಯದಿಂದಾಗಿ ಸಂಪೂರ್ಣ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ. ಕಳೆದ ತಿಂಗಳು ಯುರೋಪಿಯನ್ ಟಿ20 ಲೀಗ್‌ನಲ್ಲಿ ಆಡುವಾಗ ಚಾಪ್‌ಮನ್ ಎಡ ಮಂಡಿರಜ್ಜು ನೋವಿಗೆ ಒಳಗಾಗಿದ್ದರು(PC-PTI).

ಆದಾಗ್ಯೂ ಅವರು ಟಿ20 ಸರಣಿ ಮುಗಿದ ಬಳಿಕ ಆರಂಭವಾಗಲಿರುವ ಏಕದಿನ ಸರಣಿಗೆ ಫಿಟ್ ಆಗುವ ನಿರೀಕ್ಷೆಯಿದೆ. ಏತನ್ಮಧ್ಯೆ, ಫೌಲ್ಕ್ಸ್ ಇತ್ತೀಚೆಗೆ ಕ್ಯಾಂಟರ್ಬರಿ ಪುರುಷರ ತಂಡದೊಂದಿಗಿನ ಅಭ್ಯಾಸ ಸಮಯದಲ್ಲಿ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಅವರನ್ನು ಸಹ ಈ ಟಿ20 ಸರಣಿಯಿಂದ ಹೊರಗಿಡಲಾಗಿದೆ(PC-PTI).

ನ್ಯೂಜಿಲೆಂಡ್ ಕ್ರಿಕೆಟ್ ಈ ಇಬ್ಬರು ಆಟಗಾರರ ಬದಲಿ ಆಟಗಾರರನ್ನು ಸಹ ಘೋಷಿಸಿದ್ದು, ಆಲ್‌ರೌಂಡರ್ ಜೋಶ್ ಕ್ಲಾರ್ಕ್ಸನ್ ಮತ್ತು ವೇಗದ ಬೌಲರ್ ಬ್ಲೇರ್ ಟಿಕ್ನರ್ ಅವರನ್ನು ಬದಲಿ ಆಟಗಾರರಾಗಿ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ(PC-PTI).

ನ್ಯೂಜಿಲೆಂಡ್ ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಜೋಶ್ ಕ್ಲಾರ್ಕ್ಸನ್, ಡೆವೊನ್ ಕಾನ್ವೇ, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಬೆವೊನ್ ಜೇಕಬ್ಸ್, ಕೈಲ್ ಜೇಮಿಸನ್, ಆಡಮ್ ಮಿಲ್ನೆ, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಟಿಮ್ ಸೀಫರ್ಟ್, ನಾಥನ್ ಸ್ಮಿತ್, ಬ್ಲೇರ್ ಟಿಕ್ನರ್(PC-PTI).

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.
Read More



