Updated on: May 12, 2023 | 4:16 PM
ಐಸಿಸಿ ವಾರ್ಷಿಕ ಏಕದಿನ ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು, ಈ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ಎಂದಿನಂತೆ ಆಸ್ಟ್ರೇಲಿಯಾ ತಂಡ ಮೊದಲ ಸ್ಥಾನವನ್ನು ಉಳಿಸಿಕೊಂಡಿದೆ. ಆದರೆ 2 ಮತ್ತು 3 ನೇ ಸ್ಥಾನದಲ್ಲಿ ಬದಲಾವಣೆ ಕಂಡು ಬಂದಿದೆ.
ಈ ಹಿಂದೆ 2ನೇ ಸ್ಥಾನದಲ್ಲಿದ್ದ ಭಾರತ ಇದೀಗ ತನ್ನ ಸ್ಥಾನವನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿದೆ.
ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ನಡೆದ 5 ಏಕದಿನ ಪಂದ್ಯಗಳ ಸರಣಿಯನ್ನು 4-1 ಅಂತರದಿಂದ ಗೆದ್ದುಕೊಂಡ ಪಾಕಿಸ್ತಾನ ಸರಣಿ ಗೆಲುವಿನ ಲಾಭವನ್ನು ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ಪಡೆದುಕೊಂಡಿದೆ.
ಇನ್ನು ಐಪಿಎಲ್ನಲ್ಲಿ ಬ್ಯುಸಿಯಾಗಿರುವ ಟೀಂ ಇಂಡಿಯಾ ಯಾವುದೇ ಏಕದಿನ ಸರಣಿಯನ್ನು ಆಡದ ಕಾರಣ 115 ರೇಟಿಂಗ್ನೊಂದಿಗೆ 2ನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಕುಸಿತ ಕಂಡಿದೆ.
ಆದರೂ ಐಪಿಎಲ್ ಮುಗಿದ ಬಳಿಕ ಏಕದಿನ ವಿಶ್ವಕಪ್ ತಯಾರಿಯ ದೃಷ್ಟಿಯಿಂದ ಕ್ರಿಕೆಟ್ ಆಡುವ ಎಲ್ಲಾ ದೇಶಗಳು ದ್ವಿಪಕ್ಷೀಯ ಸರಣಿಯಲ್ಲಿ ಬ್ಯುಸಿಯಾಗಲಿವೆ. ಹೀಗಾಗಿ ಏಕದಿನ ರ್ಯಾಂಕಿಂಗ್ನಲ್ಲಿ ಬದಲಾವಣೆಗಳಾಗುವ ಸಾಧ್ಯತೆಗಳು ಹೆಚ್ಚಿವೆ.
ಇನ್ನುಳಿದಂತೆ ಪಾಕ್ ವಿರುದ್ಧ ಏಕದಿನ ಸರಣಿ ಸೋತ ನ್ಯೂಜಿಲೆಂಡ್ 104 ರೇಟಿಂಗ್ನೊಂದಿಗೆ 4ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.
5ನೇ ಸ್ಥಾನದಲ್ಲಿರುವ ಇಂಗ್ಲೆಂಡ್ 101 ರೇಟಿಂಗ್ ಪಡೆದುಕೊಂಡಿದೆ. ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ಅಫ್ಘಾನಿಸ್ಥಾನ, ಶ್ರೀಲಂಕಾ ಹಾಗೂ ವೆಸ್ಟ್ ಇಂಡೀಸ್ ಕ್ರಮವಾಗಿ 6,7,8,9,10ನೇ ಸ್ಥಾನ ಪಡೆದುಕೊಂಡಿವೆ.