ಸುಮಾರು ಒಂದೂವರೆ ವರ್ಷಗಳಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಇದೀಗ ಶೀಘ್ರದಲ್ಲೇ ಕಂಬ್ಯಾಕ್ ಮಾಡಲಿದ್ದಾರೆ. ಈಗಾಗಲೇ ನೆಟ್ಸ್ನಲ್ಲಿ ಅಭ್ಯಾಸವನ್ನು ಆರಂಭಿಸಿರುವ ಬುಮ್ರಾ, ಪ್ರತಿದಿನ ಸುಮಾರು 8 ರಿಂದ 10 ಓವರ್‌ಗಳವರೆಗೆ ಬೌಲಿಂಗ್ ಮಾಡುತ್ತಿದ್ದಾರೆ. ಸದ್ಯ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿರುವ ಅವರು ಶೀಘ್ರದಲ್ಲೇ ಸಂಪೂರ್ಣ ಫಿಟ್ನೆಸ್ನೊಂದಿಗೆ ತಂಡಕ್ಕೆ ಮರಳಲಿದ್ದಾರೆ.