ODI World Cup 2023: ವಿಶ್ವದ ಅತಿದೊಡ್ಡ ಮೈದಾನದಲ್ಲಿ ಭಾರತ- ಪಾಕ್ ವಿಶ್ವಕಪ್ ಫೈಟ್..!

Updated on: May 05, 2023 | 3:58 PM

ODI World Cup 2023: ಈ ವರ್ಷ ಏಕದಿನ ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ನಡುವಿನ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಲಾಗುತ್ತಿದೆ.

1 / 6
ಈ ವರ್ಷ ಏಕದಿನ ವಿಶ್ವಕಪ್ ನಡೆಯಲಿದ್ದು, ಇದರ ಆಯೋಜನೆಯ ಹಕ್ಕನ್ನು ಭಾರತ ಪಡೆದುಕೊಂಡಿರುವುದು ಈ ಮಹಾ ಸಮರಕ್ಕೆ ಮತ್ತಷ್ಟು ಬೆರಗು ತಂದಿದೆ. ಇದೇ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ವಿಶ್ವಕಪ್ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲವಾದರೂ ಮೂಲಗಳ ಪ್ರಕಾರ, ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಪ್ರಾರಂಭವಾಲಿದ್ದು, ನವೆಂಬರ್ 19 ರಂದು ಫೈನಲ್ ಪಂದ್ಯ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಈ ವರ್ಷ ಏಕದಿನ ವಿಶ್ವಕಪ್ ನಡೆಯಲಿದ್ದು, ಇದರ ಆಯೋಜನೆಯ ಹಕ್ಕನ್ನು ಭಾರತ ಪಡೆದುಕೊಂಡಿರುವುದು ಈ ಮಹಾ ಸಮರಕ್ಕೆ ಮತ್ತಷ್ಟು ಬೆರಗು ತಂದಿದೆ. ಇದೇ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ವಿಶ್ವಕಪ್ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲವಾದರೂ ಮೂಲಗಳ ಪ್ರಕಾರ, ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಪ್ರಾರಂಭವಾಲಿದ್ದು, ನವೆಂಬರ್ 19 ರಂದು ಫೈನಲ್ ಪಂದ್ಯ ನಡೆಯಲಿದೆ ಎಂದು ಹೇಳಲಾಗುತ್ತಿದೆ.

2 / 6

ಆದರೆ ಈ ನಡುವೆ ಕ್ರಿಕೆಟ್​ನ ಸಾಂಪದ್ರಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ನಡುವಣ ವಿಶ್ವಕಪ್ ಪಂದ್ಯ ಯಾವ ಮೈದಾನದಲ್ಲಿ ನಡೆಯಲಿದೆ ಎಂಬುದು ಎಲ್ಲರಲ್ಲಿ ಕುತೂಹಲ ಹೆಚ್ಚಿಸಿದೆ. ಏಕೆಂದರೆ ಈ ಉಭಯ ತಂಡಗಳು ಕೇವಲ ಐಸಿಸಿ ಈವೆಂಟ್​​ನಲ್ಲಿ ಮಾತ್ರ ಮುಖಾಮುಖಿಯಾಗುತ್ತವೆ. ಹೀಗಾಗಿ ಈ ಮದಗಜಗಳ ಕಾಳಗವನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಕ್ರಿಕೆಟ್​ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

3 / 6

ವಾಸ್ತವವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಮುಗಿದ ನಂತರ ಬಿಸಿಸಿಐ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಈ ವರ್ಷ ಏಕದಿನ ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ನಡುವಿನ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಲಾಗುತ್ತಿದೆ.

4 / 6

ಭಾರತ-ಪಾಕಿಸ್ತಾನ ಪಂದ್ಯ ವೀಕ್ಷಿಸಲು ವಿದೇಶಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುತ್ತಾರೆ. ನರೇಂದ್ರ ಮೋದಿ ಸ್ಟೇಡಿಯಂ ವಿಶ್ವದ ಅತಿ ದೊಡ್ಡ ಕ್ರೀಡಾಂಗಣವಾಗಿದೆ. ಕ್ರೀಡಾಂಗಣವು 1 ಲಕ್ಷ ಪ್ರೇಕ್ಷಕರಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯವನ್ನು ಹೊಂದಿದೆ. ಹೀಗಾಗಿ ಬಿಸಿಸಿಐ ಭಾರತ-ಪಾಕಿಸ್ತಾನ ಪಂದ್ಯಕ್ಕೆ ನರೇಂದ್ರ ಮೋದಿ ಕ್ರೀಡಾಂಗಣವನ್ನು ಆಯ್ಕೆ ಮಾಡಿದೆ ಎಂದು ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ.

5 / 6

ವಿಶ್ವಕಪ್‌ನಲ್ಲಿ ಒಟ್ಟು 48 ಪಂದ್ಯಗಳು ನಡೆಯಲಿವೆ. ಈ ಬಾರಿಯ ವಿಶ್ವಕಪ್ 46 ದಿನಗಳ ಕಾಲ ನಡೆಯಲಿದೆ. ಏಳು ಸ್ಥಳಗಳಲ್ಲಿ ಲೀಗ್ ಪಂದ್ಯಗಳು ನಡೆಯಲಿವೆ. ಅಹಮದಾಬಾದ್ ಹೊರತುಪಡಿಸಿ, ಈ ವಿಶ್ವಕಪ್‌ನ ಪಂದ್ಯಗಳನ್ನು ಬೆಂಗಳೂರು, ಚೆನ್ನೈ, ದೆಹಲಿ, ಧರ್ಮಶಾಲಾ, ಗುವಾಹಟಿ, ಹೈದರಾಬಾದ್, ಕೋಲ್ಕತ್ತಾ, ಲಕ್ನೋ, ಇಂದೋರ್, ರಾಜ್‌ಕೋಟ್ ಮತ್ತು ಮುಂಬೈನಲ್ಲಿ ಆಡಿಸಲಾಗುತ್ತದೆ ಎಂದು ವರದಿಯಾಗಿದೆ.

6 / 6

ಐಸಿಸಿಯ ಇಡೀ ಟೂರ್ನಿ ಭಾರತದಲ್ಲಿ ನಡೆಯುತ್ತಿರುವುದು ಇದೇ ಮೊದಲು. 1987 ರಲ್ಲಿ, ಭಾರತ ಮತ್ತು ಪಾಕಿಸ್ತಾನ ಎರಡೂ ಒಟ್ಟಿಗೆ ಆತಿಥ್ಯ ವಹಿಸಿದ್ದವು. 1996 ರಲ್ಲಿ ಭಾರತ, ಪಾಕಿಸ್ತಾನ ಮತ್ತು ಶ್ರೀಲಂಕಾ ಜಂಟಿ ಆತಿಥ್ಯ ವಹಿಸಿದ್ದವು. 2011 ರ ವಿಶ್ವಕಪ್ ಅನ್ನು ಭಾರತ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ಆಯೋಜಿಸಿತ್ತು.

Loading...
Unable to load recommendations.
Follow Us