ODI World Cup 2023 Schedule: ಬೆಂಗಳೂರಿನಲ್ಲಿ ಒಟ್ಟು 5 ಪಂದ್ಯಗಳು: ಪಾಕ್ ತಂಡಕ್ಕೆ 2 ಮ್ಯಾಚ್..!

| Updated By: ಝಾಹಿರ್ ಯೂಸುಫ್

Updated on: Jun 27, 2023 | 7:08 PM

ODI World Cup 2023 Schedule: ಅಕ್ಟೋಬರ್ 5 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾದರೆ, ಆತಿಥೇಯ ಭಾರತ ತಂಡವು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

1 / 10
ODI World Cup 2023 Schedule: ಬಹುನಿರೀಕ್ಷಿತ ಏಕದಿನ ವಿಶ್ವಕಪ್ ಗುರುವಾರದಿಂದ (ಅ.5) ಶುರುವಾಗಲಿದೆ. ಈ ಬಾರಿಯ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದ್ದು, 45 ದಿನಗಳಲ್ಲಿ ಒಟ್ಟು 48 ಪಂದ್ಯಗಳನ್ನು ಆಡಲಾಗುತ್ತದೆ.

2 / 10
ಇವುಗಳಲ್ಲಿ 5 ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವುದು ವಿಶೇಷ. ಆದರೆ ಈ ಐದು ಪಂದ್ಯಗಳಲ್ಲಿ ಭಾರತವು ಒಂದು ಪಂದ್ಯದಲ್ಲಿ ಮಾತ್ರ ಬೆಂಗಳೂರಿಗೆ ಆಗಮಿಸಲಿದೆ. ಇನ್ನು ಪಾಕಿಸ್ತಾನ್ ಹಾಗೂ ನ್ಯೂಝಿಲೆಂಡ್ ತಂಡಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ತಲಾ 2 ಪಂದ್ಯಗಳನ್ನಾಡಲಿದೆ.

3 / 10
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ...

4 / 10
1- ಅಕ್ಟೋಬರ್ 20 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊದಲ ಪಂದ್ಯ ನಡೆಯಲಿದ್ದು, ಈ ಮ್ಯಾಚ್​ನಲ್ಲಿ ಪಾಕಿಸ್ತಾನ್ vs ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.

5 / 10
2- ಅಕ್ಟೋಬರ್ 26 ರಂದು ಬೆಂಗಳೂರಿನಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ ತಂಡ ಕಣಕ್ಕಿಳಿಯಲಿದೆ.

6 / 10
3- ನವೆಂಬರ್ 4 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೂರನೇ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡದ ಎದುರಾಳಿ ಪಾಕಿಸ್ತಾನ್.

7 / 10
4- ನವೆಂಬರ್ 9 ರಂದು ನ್ಯೂಝಿಲೆಂಡ್ ಮತ್ತೊಮ್ಮೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯಲಿದ್ದು, ಈ ವೇಳೆ ಶ್ರೀಲಂಕಾ ತಂಡವನ್ನು ಎದುರಿಸಲಿದೆ.

8 / 10
5- ನವೆಂಬರ್ 12 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯದಲ್ಲಿ ಟೀಮ್ ಇಂಡಿಯಾ ನೆದರ್​ಲೆಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯದೊಂದಿಗೆ ವಿಶ್ವಕಪ್​ನ ಲೀಗ್​ನ ಹಂತದ ಪಂದ್ಯಗಳು ಮುಕ್ತಾಯಗೊಳ್ಳಲಿದೆ.

9 / 10
ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಆತಿಥೇಯ ಭಾರತ ತಂಡವು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

10 / 10
ಹಾಗೆಯೇ ಅಕ್ಟೋಬರ್ 14 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ-ಪಾಕ್ ನಡುವೆ ಹೈವೋಲ್ಟೇಜ್ ಕದನ ನಡೆಯಲಿದೆ.