ODI World Cup 2023 Schedule: ಏಕದಿನ ವಿಶ್ವಕಪ್​ನ​ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

| Updated By: ಝಾಹಿರ್ ಯೂಸುಫ್

Updated on: Aug 23, 2023 | 10:07 PM

ODI World Cup 2023 Schedule: ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯವು ಚೆನ್ನೈನಲ್ಲಿ ನಡೆಯಲಿದೆ.

1 / 6
ಬಹುನಿರೀಕ್ಷಿತ ಕ್ರಿಕೆಟ್ ಮಹಾಸಮರ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ 2019ರ ಫೈನಲಿಸ್ಟ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

2 / 6
ಇನ್ನು ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯವು ಚೆನ್ನೈನಲ್ಲಿ ನಡೆಯಲಿದೆ.

3 / 6
ಹಾಗೆಯೇ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯವು ಅಕ್ಟೋಬರ್ 14 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿದೆ.

4 / 6
ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದ್ದು, 48 ಪಂದ್ಯಗಳು ನಡೆಯಲಿದೆ. ಈ ಎಲ್ಲಾ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.

5 / 6
ಇಲ್ಲಿ ಪ್ರತಿ ತಂಡಗಳು ಒಟ್ಟು 9 ಪಂದ್ಯಗಳನ್ನಾಡಲಿದೆ. ಇದರಲ್ಲಿ ಅತ್ಯಧಿಕ ಪಾಯಿಂಟ್ಸ್ ಪಡೆಯುವ 4 ತಂಡಗಳು ಸೆಮಿಫೈನಲ್​ ಹಂತಕ್ಕೇರಲಿದೆ.

6 / 6
ಸೆಮಿಫೈನಲ್​​ನಿಂದ ಎರಡು ತಂಡಗಳು ಫೈನಲ್​ಗೆ ಎಂಟ್ರಿ ಕೊಡಲಿದೆ. ಅದರಂತೆ ಫೈನಲ್​ ಪಂದ್ಯವು ನವೆಂಬರ್ 19 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.