ಈ ಎರಡು ಪಂದ್ಯಗಳ ಬಳಿಕ ಅಕ್ಟೋಬರ್ 14 ರಂದು ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಬದ್ಧವೈರಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ಮುಖಾಮುಖಿಯಾಗಲಿವೆ. ಈ ಹಿಂದೆ ಈ ಪಂದ್ಯವನ್ನು ಅಕ್ಟೋಬರ್ 15 ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಭದ್ರತಾ ಸಮಸ್ಯೆಯಿಂದ ಪಂದ್ಯವನ್ನು 1 ದಿನ ಮೊದಲು ಆಯೋಜಿಸಲಾಗುತ್ತಿದೆ.