ODI World Cup 2023: 2 ಬದಲಾವಣೆ; ಟೀಂ ಇಂಡಿಯಾದ ಪರಿಷ್ಕೃತ ವಿಶ್ವಕಪ್ ವೇಳಾಪಟ್ಟಿ ಹೀಗಿದೆ
ODI World Cup 2023: ಪರಿಷ್ಕೃತ ಏಕದಿನ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಯಾಗಿದೆ. ನೂತನ ವೇಳಾಪಟ್ಟಿಯ ಪ್ರಕಾರ 9 ಪಂದ್ಯಗಳ ದಿನಾಂಕಗಳು ಬದಲಾಗಿವೆ. ಇದರಲ್ಲಿ ಟೀಂ ಇಂಡಿಯಾದ 2 ಪಂದ್ಯಗಳು ಸೇರಿವೆ. ಹಾಗಿದ್ದರೆ ಬದಲಾದ ವೇಳಾಪಟ್ಟಿಯ ಪ್ರಕಾರ ಟೀಂ ಇಂಡಿಯಾ ಯಾವ ದಿನ ಯಾವ ತಂಡವನ್ನು ಎದುರಿಸಿದೆ ಎಂಬುದರ ವಿವರವನ್ನು ನೋಡುವುದಾದರೆ..
1 / 10
ಪರಿಷ್ಕೃತ ಏಕದಿನ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಯಾಗಿದೆ. ನೂತನ ವೇಳಾಪಟ್ಟಿಯ ಪ್ರಕಾರ 9 ಪಂದ್ಯಗಳ ದಿನಾಂಕಗಳು ಬದಲಾಗಿವೆ. ಇದರಲ್ಲಿ ಟೀಂ ಇಂಡಿಯಾದ 2 ಪಂದ್ಯಗಳು ಸೇರಿವೆ. ಹಾಗಿದ್ದರೆ ಬದಲಾದ ವೇಳಾಪಟ್ಟಿಯ ಪ್ರಕಾರ ಟೀಂ ಇಂಡಿಯಾ ಯಾವ ದಿನ ಯಾವ ತಂಡವನ್ನು ಎದುರಿಸಿದೆ ಎಂಬುದರ ವಿವರವನ್ನು ನೋಡುವುದಾದರೆ..
2 / 10
ಏಕದಿನ ವಿಶ್ವಕಪ್ನಲ್ಲಿ ಟೀಂ ಇಂಡಿಯಾ ತನ್ನ ಅಭಿಯಾನವನ್ನು ಆಸ್ಟ್ರೇಲಿಯಾ ವಿರುದ್ಧ ಆರಂಭಿಸಲಿದೆ. ಉಭಯ ತಂಡಗಳ ಈ ಪಂದ್ಯ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ನಡೆಯಲ್ಲಿದೆ.
3 / 10
ಭಾರತ ತನ್ನ ಎರಡನೇ ವಿಶ್ವಕಪ್ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು ಎದುರಿಸಲಿದ್ದು, ಈ ಪಂದ್ಯ ಅಕ್ಟೋಬರ್ 11 ರಂದು ದೆಹಲಿಯಲ್ಲಿ ನಡೆಯಲ್ಲಿದೆ.
4 / 10
ಈ ಎರಡು ಪಂದ್ಯಗಳ ಬಳಿಕ ಅಕ್ಟೋಬರ್ 14 ರಂದು ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಬದ್ಧವೈರಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ಮುಖಾಮುಖಿಯಾಗಲಿವೆ. ಈ ಹಿಂದೆ ಈ ಪಂದ್ಯವನ್ನು ಅಕ್ಟೋಬರ್ 15 ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಭದ್ರತಾ ಸಮಸ್ಯೆಯಿಂದ ಪಂದ್ಯವನ್ನು 1 ದಿನ ಮೊದಲು ಆಯೋಜಿಸಲಾಗುತ್ತಿದೆ.
5 / 10
ಭಾರತ ತನ್ನ ನಾಲ್ಕನೇ ಪಂದ್ಯವನ್ನು ಬಾಂಗ್ಲಾದೇಶದ ವಿರುದ್ಧ ಆಡಲಿದೆ. ಈ ಪಂದ್ಯ ಅಕ್ಟೋಬರ್ 19 ರಂದು ಪುಣೆಯಲ್ಲಿ ನಡೆಯಲ್ಲಿದೆ.
6 / 10
ಅಕ್ಟೋಬರ್ 22 ರಂದು ನಡೆಯಲ್ಲಿರುವ ಐದನೇ ಪಂದ್ಯದಲ್ಲಿ ಟೀಂ ಇಂಡಿಯಾ, ಬಲಿಷ್ಠ ನ್ಯೂಜಿಲೆಂಡ್ ತಂಡವನ್ನು ಧರ್ಮಶಾಲಾದಲ್ಲಿ ಎದುರಿಸಲಿದೆ.
7 / 10
ಹಾಗೆಯೇ ಅಕ್ಟೋಬರ್ 29 ರಂದು ಮತ್ತೊಂದು ಬಲಿಷ್ಠ ತಂಡವಾದ ಇಂಗ್ಲೆಂಡ್ ಎದುರು ತನ್ನ ಆರನೇ ಪಂದ್ಯವನ್ನು ಟೀಂ ಇಂಡಿಯಾ ಲಕ್ನೋದಲ್ಲಿ ಆಡಲಿದೆ.
8 / 10
ತನ್ನ 7ನೇ ಪಂದ್ಯದಲ್ಲಿ ರೋಹಿತ್ ಪಡೆ ಶ್ರೀಲಂಕಾ ತಂಡವನ್ನು ಎದುರಿಸುತ್ತಿದ್ದು, ಈ ಪಂದ್ಯ ನವೆಂಬರ್ 2 ರಂದು ಮುಂಬೈನಲ್ಲಿ ನಡೆಯಲ್ಲಿದೆ.
9 / 10
ನವೆಂಬರ್ 5 ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತನ್ನ 8ನೇ ಪಂದ್ಯವನ್ನು ಆಡಲಿದೆ. ಈ ಪಂದ್ಯಕ್ಕೆ ಕೋಲ್ಕತ್ತಾ ಆತಿಥ್ಯವಹಿಸಲಿದೆ.
10 / 10
ಅಂತಿಮವಾಗಿ ಲೀಗ್ ಹಂತದಲ್ಲಿ ಭಾರತ ನವೆಂಬರ್ 12 ರಂದು ಬೆಂಗಳೂರಿನಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು ಎದುರಿಸಲಿದೆ. ಈ ಮೊದಲು ಈ ಪಂದ್ಯವನ್ನು ನವೆಂಬರ್ 11 ರಂದು ನಡೆಸಲು ತೀರ್ಮಾನಿಸಲಾಗಿತ್ತು.