- Kannada News Photo gallery Cricket photos ODI World Cup 2023 ten venues knowing how many spectators can watch the match
ವಿಶ್ವಕಪ್ ಪಂದ್ಯಗಳು ನಡೆಯಲ್ಲಿರುವ ಎಲ್ಲಾ 10 ಮೈದಾನಗಳ ಪ್ರೇಕ್ಷಕರ ಸಾಮರ್ಥ್ಯ ಎಷ್ಟು? ಇಲ್ಲಿದೆ ವಿವರ
ODI World Cup 2023: ಅಹಮದಾಬಾದ್ ಹೊರತುಪಡಿಸಿ, ಈ ವಿಶ್ವಕಪ್‌ನ ಪಂದ್ಯಗಳನ್ನು ಬೆಂಗಳೂರು, ಚೆನ್ನೈ, ದೆಹಲಿ, ಧರ್ಮಶಾಲಾ, ಗುವಾಹಟಿ, ಹೈದರಾಬಾದ್, ಕೋಲ್ಕತ್ತಾ, ಲಕ್ನೋ, ಇಂದೋರ್, ರಾಜ್‌ಕೋಟ್ ಮತ್ತು ಮುಂಬೈನಲ್ಲಿ ಆಡಿಸಲಾಗುತ್ತದೆ.
Updated on: Aug 11, 2023 | 11:09 AM

ನರೇಂದ್ರ ಮೋದಿ ಸ್ಟೇಡಿಯಂ: ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಿದೆ. ಏಕದಿನ ವಿಶ್ವಕಪ್‌ನ ಐದು ಪಂದ್ಯಗಳು ಇದೇ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅಂತಿಮ ಪಂದ್ಯವೂ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕ್ರೀಡಾಂಗಣದಲ್ಲಿ ಒಂದೇ ಬಾರಿಗೆ ಒಟ್ಟು 1,32,000 ಪ್ರೇಕ್ಷಕರು ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಈಡನ್ ಗಾರ್ಡನ್ಸ್ ಸ್ಟೇಡಿಯಂ: ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಐದು ಏಕದಿನ ವಿಶ್ವಕಪ್ ಪಂದ್ಯಗಳು ನಡೆಯಲಿವೆ. ಸುಮಾರು 66,000 ಪ್ರೇಕ್ಷಕರು ಒಂದೇ ಸಮಯದಲ್ಲಿ ಪಂದ್ಯವನ್ನು ಆನಂದಿಸಬಹುದಾಗಿದೆ.

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣ: ಹೈದರಾಬಾದ್‌ನಲ್ಲಿರುವ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಒಟ್ಟು 3 ಏಕದಿನ ವಿಶ್ವಕಪ್ ಪಂದ್ಯಗಳು ನಡೆಯಲಿವೆ. ಈ ಕ್ರೀಡಾಂಗಣದಲ್ಲಿ ಏಕಕಾಲಕ್ಕೆ ಸುಮಾರು 55,000 ಪ್ರೇಕ್ಷಕರು ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಎಕನಾ ಕ್ರಿಕೆಟ್ ಸ್ಟೇಡಿಯಂ: ಲಕ್ನೋದ ಎಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಐದು ಏಕದಿನ ವಿಶ್ವಕಪ್ ಪಂದ್ಯಗಳು ನಡೆಯಲಿವೆ. ಈ ಕ್ರೀಡಾಂಗಣ 50,000 ಪ್ರೇಕ್ಷಕರ ಸಾಮರ್ಥ್ಯ ಹೊಂದಿದೆ.

ಎಂ ಚಿದಂಬರಂ ಕ್ರೀಡಾಂಗಣ: ಚೆನ್ನೈನಲ್ಲಿರುವ ಈ ಕ್ರೀಡಾಂಗಣದಲ್ಲಿ ಐದು ಏಕದಿನ ವಿಶ್ವಕಪ್ ಪಂದ್ಯಗಳು ನಡೆಯಲಿವೆ. ಈ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾದ ಮೊದಲ ಏಕದಿನ ವಿಶ್ವಕಪ್ ಪಂದ್ಯ ನಡೆಯಲಿದೆ. ಈ ಕ್ರೀಡಾಂಗಣವು 50,000 ಪ್ರೇಕ್ಷಕರ ಸಾಮರ್ಥ್ಯವನ್ನು ಹೊಂದಿದೆ.

ಎಂ ಚಿನ್ನಸ್ವಾಮಿ ಕ್ರೀಡಾಂಗಣ: ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐದು ಏಕದಿನ ವಿಶ್ವಕಪ್ ಪಂದ್ಯಗಳು ನಡೆಯಲಿವೆ. ಈ ಕ್ರೀಡಾಂಗಣದ ಪ್ರೇಕ್ಷಕರ ಸಾಮರ್ಥ್ಯ ಸುಮಾರು 40,000.

ಅರುಣ್ ಜೇಟ್ಲಿ ಕ್ರೀಡಾಂಗಣ: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಏಕದಿನ ವಿಶ್ವಕಪ್‌ನ ಐದು ಪಂದ್ಯಗಳು ನಡೆಯಲಿದ್ದು, ಈ ಕ್ರೀಡಾಂಗಣದಲ್ಲಿ ಏಕಕಾಲಕ್ಕೆ 41,000 ಪ್ರೇಕ್ಷಕರು ಪಂದ್ಯವನ್ನು ಆನಂದಿಸಬಹುದಾಗಿದೆ.

ಧರ್ಮಶಾಲಾ: ವಿಶ್ವದ ಅತ್ಯಂತ ಸುಂದರ ಕ್ರೀಡಾಂಗಣಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಸ್ಟೇಡಿಯಂ ಧರ್ಮಶಾಲಾದಲ್ಲಿದೆ. ಈ ಕ್ರೀಡಾಂಗಣದಲ್ಲಿ ಐದು ಏಕದಿನ ವಿಶ್ವಕಪ್ ಪಂದ್ಯಗಳು ನಡೆಯಲಿವೆ. ಈ ಮೈದಾನದಲ್ಲಿ ಒಟ್ಟು 23,000 ಪ್ರೇಕ್ಷಕರು ಏಕಕಾಲದಲ್ಲಿ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ವಾಂಖೆಡೆ ಸ್ಟೇಡಿಯಂ: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 2011ರ ಏಕದಿನ ವಿಶ್ವಕಪ್ ಫೈನಲ್ ನಡೆದಿತ್ತು. ಈ ಪಂದ್ಯವನ್ನು ಗೆದ್ದು ಭಾರತ ಇತಿಹಾಸ ನಿರ್ಮಿಸಿತ್ತು. ಇದೀಗ ಇದೇ ವಾಂಖೆಡೆ ಸ್ಟೇಡಿಯಂನಲ್ಲಿ ಒಟ್ಟು 5 ಏಕದಿನ ವಿಶ್ವಕಪ್ ಪಂದ್ಯಗಳು ನಡೆಯಲಿವೆ. ಈ ಕ್ರೀಡಾಂಗಣದ ಪ್ರೇಕ್ಷಕರ ಸಾಮರ್ಥ್ಯ 32,000.

ಎಂ.ಸಿ.ಎ. ಕ್ರೀಡಾಂಗಣ: ಮಹಾರಾಷ್ಟ್ರದ ಪುಣೆಯಲ್ಲಿರುವ ಈ ಕ್ರೀಡಾಂಗಣದಲ್ಲಿ ಏಕದಿನ ವಿಶ್ವಕಪ್‌ನ ಐದು ಪಂದ್ಯಗಳು ನಡೆಯಲಿವೆ. ಒಟ್ಟು 37,000 ಪ್ರೇಕ್ಷಕರು ಒಂದೇ ಬಾರಿಗೆ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
























