ವಿಶ್ವಕಪ್ ಪಂದ್ಯಗಳು ನಡೆಯಲ್ಲಿರುವ ಎಲ್ಲಾ 10 ಮೈದಾನಗಳ ಪ್ರೇಕ್ಷಕರ ಸಾಮರ್ಥ್ಯ ಎಷ್ಟು? ಇಲ್ಲಿದೆ ವಿವರ

|

Updated on: Aug 11, 2023 | 11:09 AM

ODI World Cup 2023: ಅಹಮದಾಬಾದ್ ಹೊರತುಪಡಿಸಿ, ಈ ವಿಶ್ವಕಪ್‌ನ ಪಂದ್ಯಗಳನ್ನು ಬೆಂಗಳೂರು, ಚೆನ್ನೈ, ದೆಹಲಿ, ಧರ್ಮಶಾಲಾ, ಗುವಾಹಟಿ, ಹೈದರಾಬಾದ್, ಕೋಲ್ಕತ್ತಾ, ಲಕ್ನೋ, ಇಂದೋರ್, ರಾಜ್‌ಕೋಟ್ ಮತ್ತು ಮುಂಬೈನಲ್ಲಿ ಆಡಿಸಲಾಗುತ್ತದೆ.

1 / 10
ನರೇಂದ್ರ ಮೋದಿ ಸ್ಟೇಡಿಯಂ: ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಿದೆ. ಏಕದಿನ ವಿಶ್ವಕಪ್‌ನ ಐದು ಪಂದ್ಯಗಳು ಇದೇ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅಂತಿಮ ಪಂದ್ಯವೂ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕ್ರೀಡಾಂಗಣದಲ್ಲಿ ಒಂದೇ ಬಾರಿಗೆ ಒಟ್ಟು 1,32,000 ಪ್ರೇಕ್ಷಕರು ಪಂದ್ಯವನ್ನು ವೀಕ್ಷಿಸಬಹುದಾಗಿದೆ.

2 / 10
ಈಡನ್ ಗಾರ್ಡನ್ಸ್ ಸ್ಟೇಡಿಯಂ: ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಐದು ಏಕದಿನ ವಿಶ್ವಕಪ್ ಪಂದ್ಯಗಳು ನಡೆಯಲಿವೆ. ಸುಮಾರು 66,000 ಪ್ರೇಕ್ಷಕರು ಒಂದೇ ಸಮಯದಲ್ಲಿ ಪಂದ್ಯವನ್ನು ಆನಂದಿಸಬಹುದಾಗಿದೆ.

3 / 10
ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣ: ಹೈದರಾಬಾದ್‌ನಲ್ಲಿರುವ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಒಟ್ಟು 3 ಏಕದಿನ ವಿಶ್ವಕಪ್ ಪಂದ್ಯಗಳು ನಡೆಯಲಿವೆ. ಈ ಕ್ರೀಡಾಂಗಣದಲ್ಲಿ ಏಕಕಾಲಕ್ಕೆ ಸುಮಾರು 55,000 ಪ್ರೇಕ್ಷಕರು ಪಂದ್ಯವನ್ನು ವೀಕ್ಷಿಸಬಹುದಾಗಿದೆ.

4 / 10
ಎಕನಾ ಕ್ರಿಕೆಟ್ ಸ್ಟೇಡಿಯಂ: ಲಕ್ನೋದ ಎಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಐದು ಏಕದಿನ ವಿಶ್ವಕಪ್ ಪಂದ್ಯಗಳು ನಡೆಯಲಿವೆ.  ಈ ಕ್ರೀಡಾಂಗಣ 50,000 ಪ್ರೇಕ್ಷಕರ ಸಾಮರ್ಥ್ಯ ಹೊಂದಿದೆ.

5 / 10
ಎಂ ಚಿದಂಬರಂ ಕ್ರೀಡಾಂಗಣ: ಚೆನ್ನೈನಲ್ಲಿರುವ ಈ ಕ್ರೀಡಾಂಗಣದಲ್ಲಿ ಐದು ಏಕದಿನ ವಿಶ್ವಕಪ್ ಪಂದ್ಯಗಳು ನಡೆಯಲಿವೆ. ಈ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾದ ಮೊದಲ ಏಕದಿನ ವಿಶ್ವಕಪ್ ಪಂದ್ಯ ನಡೆಯಲಿದೆ. ಈ ಕ್ರೀಡಾಂಗಣವು 50,000 ಪ್ರೇಕ್ಷಕರ ಸಾಮರ್ಥ್ಯವನ್ನು ಹೊಂದಿದೆ.

6 / 10
ಎಂ ಚಿನ್ನಸ್ವಾಮಿ ಕ್ರೀಡಾಂಗಣ: ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐದು ಏಕದಿನ ವಿಶ್ವಕಪ್ ಪಂದ್ಯಗಳು ನಡೆಯಲಿವೆ. ಈ ಕ್ರೀಡಾಂಗಣದ ಪ್ರೇಕ್ಷಕರ ಸಾಮರ್ಥ್ಯ ಸುಮಾರು 40,000.

7 / 10
ಅರುಣ್ ಜೇಟ್ಲಿ ಕ್ರೀಡಾಂಗಣ: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಏಕದಿನ ವಿಶ್ವಕಪ್‌ನ ಐದು ಪಂದ್ಯಗಳು ನಡೆಯಲಿದ್ದು, ಈ ಕ್ರೀಡಾಂಗಣದಲ್ಲಿ ಏಕಕಾಲಕ್ಕೆ 41,000 ಪ್ರೇಕ್ಷಕರು ಪಂದ್ಯವನ್ನು ಆನಂದಿಸಬಹುದಾಗಿದೆ.

8 / 10
ಧರ್ಮಶಾಲಾ: ವಿಶ್ವದ ಅತ್ಯಂತ ಸುಂದರ ಕ್ರೀಡಾಂಗಣಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಸ್ಟೇಡಿಯಂ ಧರ್ಮಶಾಲಾದಲ್ಲಿದೆ. ಈ ಕ್ರೀಡಾಂಗಣದಲ್ಲಿ ಐದು ಏಕದಿನ ವಿಶ್ವಕಪ್ ಪಂದ್ಯಗಳು ನಡೆಯಲಿವೆ. ಈ ಮೈದಾನದಲ್ಲಿ ಒಟ್ಟು 23,000 ಪ್ರೇಕ್ಷಕರು ಏಕಕಾಲದಲ್ಲಿ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

9 / 10
ವಾಂಖೆಡೆ ಸ್ಟೇಡಿಯಂ: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 2011ರ ಏಕದಿನ ವಿಶ್ವಕಪ್ ಫೈನಲ್ ನಡೆದಿತ್ತು. ಈ ಪಂದ್ಯವನ್ನು ಗೆದ್ದು ಭಾರತ ಇತಿಹಾಸ ನಿರ್ಮಿಸಿತ್ತು. ಇದೀಗ ಇದೇ ವಾಂಖೆಡೆ ಸ್ಟೇಡಿಯಂನಲ್ಲಿ ಒಟ್ಟು 5 ಏಕದಿನ ವಿಶ್ವಕಪ್ ಪಂದ್ಯಗಳು ನಡೆಯಲಿವೆ. ಈ ಕ್ರೀಡಾಂಗಣದ ಪ್ರೇಕ್ಷಕರ ಸಾಮರ್ಥ್ಯ 32,000.

10 / 10
ಎಂ.ಸಿ.ಎ.  ಕ್ರೀಡಾಂಗಣ: ಮಹಾರಾಷ್ಟ್ರದ ಪುಣೆಯಲ್ಲಿರುವ ಈ ಕ್ರೀಡಾಂಗಣದಲ್ಲಿ ಏಕದಿನ ವಿಶ್ವಕಪ್‌ನ ಐದು ಪಂದ್ಯಗಳು ನಡೆಯಲಿವೆ. ಒಟ್ಟು 37,000 ಪ್ರೇಕ್ಷಕರು ಒಂದೇ ಬಾರಿಗೆ ಪಂದ್ಯವನ್ನು ವೀಕ್ಷಿಸಬಹುದಾಗಿದೆ.