- Kannada News Photo gallery Cricket photos ODI World Cup 2023: Virender Sehwag Predicts the 4 Semi-finalists
ODI World Cup 2023: ಈ 4 ತಂಡಗಳು ಸೆಮಿಫೈನಲ್ ಪ್ರವೇಶಿಸುವುದು ಖಚಿತ: ಸೆಹ್ವಾಗ್
ODI World Cup 2023: ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಹಾಗೆಯೇ ಫೈನಲ್ ಪಂದ್ಯ ನವೆಂಬರ್ 19 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿದೆ.
Updated on: Aug 12, 2023 | 3:59 PM

ಅಕ್ಟೋಬರ್-ನವೆಂಬರ್ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ಗಾಗಿ (ODI World Cup 2023) ದಿನಗಣನೆ ಶುರುವಾಗಿದೆ. ಈ ದಿನಗಣನೆ ಬೆನ್ನಲ್ಲೇ ಈ ಬಾರಿ ಚಾಂಪಿಯನ್ ಪಟ್ಟಕ್ಕೇರುವ ತಂಡ ಯಾವುದೆಂಬ ಚರ್ಚೆಗಳು ಕೂಡ ಮುನ್ನಲೆಗೆ ಬರುತ್ತಿವೆ. ಈ ಚರ್ಚೆಗಳ ನಡುವೆ ಈ ಬಾರಿ ಸೆಮಿಫೈನಲ್ ಆಡಲಿರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್.

ಏಕದಿನ ವಿಶ್ವಕಪ್ ಚರ್ಚೆವೊಂದರಲ್ಲಿ ಮಾತನಾಡಿದ ಸೆಹ್ವಾಗ್, ಈ ಬಾರಿಯ ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರು ನೋಡಬಹುದು. ಏಕೆಂದರೆ ಆಸೀಸ್ ಪಡೆಯು ಯಾವತ್ತೂ ಸಾಂಪ್ರದಾಯಿಕ ಕ್ರಿಕೆಟ್ ಆಡುತ್ತಾ ಬಂದಿಲ್ಲ. ಉಪಖಂಡಗಳಲ್ಲೂ ಅವರು ಉತ್ತ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ಸೆಮಿಫೈನಲ್ ಹಂತಕ್ಕೇರುವುದು ಖಚಿತ ಎಂದಿದ್ದಾರೆ.

ಇನ್ನು ಇಂಗ್ಲೆಂಡ್ ತಂಡವನ್ನು ಕೂಡ ಸೆಮಿಫೈನಲ್ನಲ್ಲಿ ಕಾಣಬಹುದು. ಏಕೆಂದರೆ ಇಂಗ್ಲೆಂಡ್ ಕೂಡ ಉಪಖಂಡಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತದೆ. ಅದರಲ್ಲೂ ಭಾರತದಲ್ಲಿ ಅತ್ಯುತ್ತವಾಗಿ ಆಡುವ ವಿದೇಶಿ ತಂಡಗಳಲ್ಲಿ ಇಂಗ್ಲೆಂಡ್ ಕೂಡ ಒಂದು. ಹಾಗಾಗಿ ಆಂಗ್ಲ ಪಡೆ ಕೂಡ ಏಕದಿನ ವಿಶ್ವಕಪ್ನಲ್ಲಿ ಸೆಮಿಫೈನಲ್ ಪ್ರವೇಶಿಸಲಿದೆ ಎಂದು ಸೆಹ್ವಾಗ್ ಭವಿಷ್ಯ ನುಡಿದಿದ್ದಾರೆ.

ಹಾಗೆಯೇ ಐಸಿಸಿ ಟೂರ್ನಿಗಳಲ್ಲಿ ಡಾರ್ಕ್ ಹೋರ್ಸ್ ಎಂದೇ ಗುರುತಿಸಿಕೊಂಡಿರುವ ಪಾಕಿಸ್ತಾನ್ ತಂಡ ಕೂಡ ಸೆಮಿಫೈನಲ್ ಪ್ರವೇಶಿಸಲಿದೆ. ಭಾರತದಲ್ಲಿ ವಿಶ್ವಕಪ್ ಆಡುತ್ತಿರುವುದರಿಂದ ಇಲ್ಲಿನ ಹವಾಮಾನಕ್ಕೆ ಹೊಂದಿಕೊಳ್ಳುವುದು ಅವರಿಗೆ ತುಂಬಾ ಸುಲಭ. ಹೀಗಾಗಿ ಪಾಕ್ ತಂಡವನ್ನು ಕೂಡ ಸೆಮಿಫೈನಲ್ಗೆ ಎದುರು ನೋಡಬಹುದು ಎಂದು ಸೆಹ್ವಾಗ್ ತಿಳಿಸಿದ್ದಾರೆ.

ಇನ್ನು ಆತಿಥೇಯ ಭಾರತ ತಂಡವು ಸೆಮಿಫೈನಲ್ ಪ್ರವೇಶಿಸುವ ನೆಚ್ಚಿನ ತಂಡವಾಗಿದೆ. ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಉತ್ತಮ ಸಮತೋಲಿತ ಬಳಗವನ್ನು ಹೊಂದಿದೆ. ಅದರಲ್ಲೂ ತವರು ಮೈದಾನಗಳಲ್ಲಿ ಪಂದ್ಯಗಳು ನಡೆಯುತ್ತಿರುವುದು ಭಾರತದ ಪಾಲಿಗೆ ಪ್ಲಸ್ ಪಾಯಿಂಟ್. ಹೀಗಾಗಿ ಟೀಮ್ ಇಂಡಿಯಾ ಸೆಮಿಫೈನಲ್ಗೆ ಪ್ರವೇಶಿಸುವುದು ಖಚಿತ ಎಂದು ಸೆಹ್ವಾಗ್ ಭವಿಷ್ಯ ನುಡಿದಿದ್ದಾರೆ.

ಅದರಂತೆ ಈ ಬಾರಿಯ ಏಕದಿನ ವಿಶ್ವಕಪ್ನಲ್ಲಿ ಆಸ್ಟ್ರೇಲಿಯಾ, ಇಂಗ್ಲೆಂಡ್, ಭಾರತ ಹಾಗೂ ಪಾಕಿಸ್ತಾನ್ ತಂಡಗಳು ಸೆಮಿಫೈನಲ್ಗೆ ಎಂಟ್ರಿ ಕೊಡಲಿದೆ ಎಂದು ಸೆಹ್ವಾಗ್ ತಿಳಿಸಿದ್ದಾರೆ. ವೀರೇಂದ್ರ ಸೆಹ್ವಾಗ್ ಅವರ ಈ ಭವಿಷ್ಯವಾಣಿ ನಿಜವಾಗಲಿದೆಯಾ ಎಂದು ತಿಳಿಯಲು ವಿಶ್ವಕಪ್ನ ಲೀಗ್ ಹಂತದ ಪಂದ್ಯಗಳ ಮುಕ್ತಾಯದವರೆಗೂ ಕಾಯಲೇಬೇಕು.

ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಹಾಗೆಯೇ ಫೈನಲ್ ಪಂದ್ಯ ನವೆಂಬರ್ 19 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿದೆ.
