Odisha Train Accident: ದುರ್ಘಟನೆಗೆ ನಲುಗಿದ ಕೊಹ್ಲಿ ಹೃದಯ; ಟ್ವಿಟರ್ನಲ್ಲಿ ಕ್ರಿಕೆಟಿಗರ ಸಂತಾಪ
Odisha Train Accident: ಒಡಿಶಾದಲ್ಲಿ ಕಳೆದ ರಾತ್ರಿ 7 ಗಂಟೆ ಸುಮಾರಿಗೆ ಸಂಭವಿಸಿದ ರೈಲು ಅಪಘಾತ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ದುರಂತದ ಬಗ್ಗೆ ಟೀಂ ಇಂಡಿಯಾ ಆಟಗಾರರು ಟ್ವಿಟರ್ನಲ್ಲಿ ಸಂತಾಪ ಸೂಚಿಸಿದ್ದಾರೆ.
1 / 5
ಒಡಿಶಾದಲ್ಲಿ ಕಳೆದ ರಾತ್ರಿ 7 ಗಂಟೆ ಸುಮಾರಿಗೆ ಸಂಭವಿಸಿದ ರೈಲು ಅಪಘಾತ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಅಪಘಾತದಲ್ಲಿ ಇಲ್ಲಿಯವರೆಗೆ 200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 900ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ದುರ್ಘಟನೆಯನ್ನು ಇಡೀ ಮನುಕುಲವೇ ಮಮ್ಮಲ ಮರುಗುತ್ತಿದೆ. ನೊಂದ ಕುಟುಂಬಗಳಿಗೆ ಸಾಂತ್ವಾನ ಹೇಳುವ ಕೆಲಸವನ್ನು ದೇಶ ವಿದೇಶಗಳ ಪ್ರಭಾವಿಗಳು ಮಾಡುತ್ತಿದ್ದಾರೆ. ಇದರಲ್ಲಿ ಟೀಂ ಇಂಡಿಯಾ ಆಟಗಾರರು ಸೇರಿದ್ದು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸುತ್ತಿದ್ದಾರೆ.
2 / 5
ಸದ್ಯ ಡಬ್ಲ್ಯುಟಿಸಿ ಫೈನಲ್ಗಾಗಿ ಇಂಗ್ಲೆಂಡ್ನಲ್ಲಿರುವ ವಿರಾಟ್ ಕೊಹ್ಲಿ, ಶನಿವಾರ ಈ ದುರಂತದ ಬಗ್ಗೆ ಟ್ವೀಟ್ ಮಾಡಿದ್ದು, ಒಡಿಶಾದಲ್ಲಿ ಸಂಭವಿಸಿರುವ ರೈಲು ಅಪಘಾತದ ಸುದ್ದಿ ಕೇಳಿ ಬೇಸರವಾಗಿದೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರು, ಆ ಕುಟುಂಬಗಳೊಂದಿಗೆ ನನ್ನ ಪ್ರಾರ್ಥನೆ ಇದೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಕೊಹ್ಲಿ ಟ್ವೀಟ್ ಮಾಡಿದ್ದಾರೆ.
3 / 5
ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ದೇವರು ಶಕ್ತಿ ನೀಡಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಇಡೀ ದೇಶ ಅವರ ಜೊತೆ ನಿಂತಿದೆ ಎಂದು ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಟ್ವೀಟ್ ಮಾಡಿದ್ದಾರೆ.
4 / 5
ಒಡಿಶಾ ರೈಲು ಅಪಘಾತದ ಬಗ್ಗೆ ತಿಳಿದು ತುಂಬಾ ನೋವಾಗಿದೆ. ಆದಷ್ಟು ಬೇಗ ಪ್ರಯಾಣಿಕರನ್ನು ರಕ್ಷಿಸುವಂತೆ ರೈಲ್ವೆ ಸಚಿವಾಲಯಕ್ಕೆ ಮನವಿ ಮಾಡುತ್ತಿದ್ದೇನೆ ಎಂದು ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ.
5 / 5
ಒಡಿಶಾ ರೈಲು ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತಿದ್ದೇನೆ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಯುವರಾಜ್ ಸಿಂಗ್ ಟ್ವೀಟ್ ಮಾಡಿದ್ದಾರೆ.