AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

147 ವರ್ಷಗಳ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಚರಿತ್ರೆ ಬರೆದ ಒಲೀ ಪೋಪ್

England vs Sri Lanka: ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಭರ್ಜರಿ ಪ್ರದರ್ಶನ ಮುಂದುವರೆಸಿದೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಇಂಗ್ಲೆಂಡ್ ಪರ ಒಲೀ ಪೋಪ್ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದ ನೆರವಿನಿಂದ ಇಂಗ್ಲೆಂಡ್ ತಂಡವು ಮೊದಲ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 221 ರನ್ ಕಲೆಹಾಕಿದೆ.

ಝಾಹಿರ್ ಯೂಸುಫ್
|

Updated on: Sep 07, 2024 | 2:08 PM

Share
ಟೆಸ್ಟ್ ಕ್ರಿಕೆಟ್ ಶುರುವಾಗಿ 147 ವರ್ಷಗಳೇ ಕಳೆದಿವೆ. ಈ 147 ವರ್ಷಗಳಲ್ಲಿ ಯಾವುದೇ ಬ್ಯಾಟರ್​ನಿಂದಲೂ ಸಾಧ್ಯವಾಗದ ಅಪರೂಪದ ವಿಶ್ವ ದಾಖಲೆಯನ್ನು ಒಲೀ ಪೋಪ್ ನಿರ್ಮಿಸಿದ್ದಾರೆ. ಅದು ಸಹ ಕೇವಲ 7 ಟೆಸ್ಟ್ ಶತಕಗಳೊಂದಿಗೆ ಎಂಬುದೇ ವಿಶೇಷ.

1 / 6
ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಒಲೀ ಪೋಪ್ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪೋಪ್ 103 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ ಶತಕ ಪೂರೈಸಿದ್ದಾರೆ.

2 / 6
ಈ ಸೆಂಚುರಿಯೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ತಮ್ಮ ಮೊದಲ ಏಳು ಶತಕಗಳನ್ನು 7 ರಾಷ್ಟ್ರಗಳ ವಿರುದ್ಧ ಬಾರಿಸಿದ ವಿಶೇಷ ದಾಖಲೆಯನ್ನು ಒಲೀ ಪೋಪ್ ತಮ್ಮದಾಗಿಸಿಕೊಂಡಿದ್ದಾರೆ. ಅಂದರೆ ಪೋಪ್ ಈವರೆಗೆ 7 ಶತಕ ಸಿಡಿಸಿದ್ದು, ಈ ಏಳು ಶತಕಗಳು ಮೂಡಿಬಂದಿರುವುದು ವಿಭಿನ್ನ ದೇಶಗಳ ವಿರುದ್ಧ ಎಂಬುದು ವಿಶೇಷ.

3 / 6
ಒಲೀ ಪೋಪ್ ಮೊದಲ ಟೆಸ್ಟ್ ಶತಕ ಬಾರಿಸಿದ್ದು ಸೌತ್ ಆಫ್ರಿಕಾ (135*) ವಿರುದ್ಧ, ಇದಾದ ಬಳಿಕ ನ್ಯೂಝಿಲೆಂಡ್ (145) ವಿರುದ್ಧ 2ನೇ ಶತಕ ಸಿಡಿಸಿದ್ದರು. ಇನ್ನು ಪಾಕಿಸ್ತಾನ್ (108) ಹಾಗೂ ಭಾರತ (196) ವಿರುದ್ಧ ಶತಕಗಳನ್ನು ಬಾರಿಸಿದ್ದಾರೆ. ಹಾಗೆಯೇ ವೆಸ್ಟ್ ಇಂಡೀಸ್ (121) ಶತಕ ಸಿಡಿಸಿದರೆ, ಐರ್ಲೆಂಡ್ (205) ದ್ವಿಶತಕ ಬಾರಿಸಿದ್ದಾರೆ.

4 / 6
ಇದೀಗ ಶ್ರೀಲಂಕಾ ವಿರುದ್ಧ ಅಜೇಯ 103 ರನ್ ಕಲೆಹಾಕುವ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ವಿಭಿನ್ನ ಎದುರಾಳಿಗಳ ವಿರುದ್ಧ ತಮ್ಮ ಮೊದಲ ಏಳು ಶತಕಗಳನ್ನು ಗಳಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ವಿಶೇಷ ಎಂದರೆ ಇದು ನಾಯಕನಾಗಿ ಒಲೀ ಪೋಪ್ ಅವರ ಮೊದಲ ಶತಕವಾಗಿದೆ.

5 / 6
ಅಂದರೆ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಗಾಯದ ಕಾರಣ ಹೊರಗುಳಿದಿದ್ದಾರೆ. ಹೀಗಾಗಿ ಹಂಗಾಮಿ ನಾಯಕನಾಗಿ ಕಣಕ್ಕಿಳಿದಿರುವ ಪೋಪ್ ಮೊದಲೆರಡು ಟೆಸ್ಟ್​ನಲ್ಲಿ ವಿಫಲರಾಗಿದ್ದರು. ಇದೀಗ ಮೂರನೇ ಟೆಸ್ಟ್​ನಲ್ಲಿ ವಿಶ್ವ ದಾಖಲೆಯ ಶತಕ ಸಿಡಿಸಿ ಟೀಕಾಗಾರರಿಗೆ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದಾರೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?

ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು

ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?

‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ

ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ