AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ವರು ಚಾಂಪಿಯನ್ಸ್… ಆದರೂ ಸೋತ ಟೀಮ್ ಇಂಡಿಯಾ

India vs Australia: 2023ರ ಏಕದಿನ ವಿಶ್ವಕಪ್​ನ ಫೈನಲ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್​ಗಳಲ್ಲಿ 240 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ 43 ಓವರ್​ಗಳಲ್ಲಿ ಪಂದ್ಯ ಮುಗಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಈ ಚಾಂಪಿಯನ್ ತಂಡ ಭಾಗವಾಗಿದ್ದ ನಾಲ್ವರು ಆಟಗಾರರು ಮಾತ್ರ ಟೀಮ್ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು.

ಝಾಹಿರ್ ಯೂಸುಫ್
|

Updated on: Oct 20, 2025 | 9:54 AM

Share
ಪರ್ತ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಮುಗ್ಗರಿಸಿದೆ. ಮಳೆಬಾಧಿತ ಊ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ನಿಗದಿತ 26 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 136 ರನ್​ಗಳು ಮಾತ್ರ.

1 / 7
ಅತ್ತ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ 26 ಓವರ್​ಗಳಲ್ಲಿ 131 ರನ್​ಗಳ ಗುರಿ ಪಡೆದ ಆಸ್ಟ್ರೇಲಿಯಾ ತಂಡವು 21.1 ಓವರ್​ಗಳಲ್ಲಿ ಗುರಿ ತಲುಪಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡವು 3 ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಪಡೆದುಕೊಂಡಿದೆ.

2 / 7
ವಿಶೇಷ ಎಂದರೆ ಈ ಗೆಲುವು ಮತ್ತೊಮ್ಮೆ ಆಸ್ಟ್ರೇಲಿಯಾ ತಂಡದ ಬಲಿಷ್ಠತೆಯನ್ನು ಎತ್ತಿ ತೋರಿಸಿದೆ. ಏಕೆಂದರೆ 2023 ರ ಏಕದಿನ ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಕೇವಲ ನಾಲ್ವರು ಆಟಗಾರರು ಮಾತ್ರ ಮೊದಲ ಏಕದಿನ ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು. ಅಂದರೆ ಚಾಂಪಿಯನ್ಸ್ ತಂಡದ ಬಹುತೇಕ ಆಟಗಾರರು ಮೊದಲ ಮ್ಯಾಚ್​ಗೆ ಅಲಭ್ಯರಾಗಿದ್ದರು.

3 / 7
2023ರ ಏಕದಿನ ವಿಶ್ವಕಪ್ ಫೈನಲ್​ನಲ್ಲಿ ಭಾರತದ ವಿರುದ್ಧ ಆಡಿದ್ದ ಮಿಚೆಲ್ ಸ್ಟಾರ್ಕ್, ಜೋಶ್ ಹೇಝಲ್​ವುಡ್, ಟ್ರಾವಿಡ್ ಹೆಡ್ ಹಾಗೂ ಮಿಚೆಲ್ ಮಾರ್ಷ್ ಮಾತ್ರ ಈ ಬಾರಿಯ ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡಿದ್ದರು. ಇದಾಗ್ಯೂ ಟೀಮ್ ಇಂಡಿಯಾಗೆ ಅನಾನುಭವಿ ಆಸ್ಟ್ರೇಲಿಯಾ ತಂಡಕ್ಕೆ ಸೋಲುಣಿಸಲು ಸಾಧ್ಯವಾಗಿಲ್ಲ ಎಂಬುದೇ ಅಚ್ಚರಿ.

4 / 7
ಅದರಲ್ಲೂ ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್, ಪ್ಯಾಟ್ ಕಮಿನ್ಸ್, ಗ್ಲೆನ್ ಮ್ಯಾಕ್ಸ್​ವೆಲ್, ಮಾರ್ನಸ್ ಲಾಬುಶೇನ್, ಆ್ಯಡಂ ಝಂಪಾನಂತಹ ಅನುಭವಿ ಆಟಗಾರರ ಅನುಪಸ್ಥಿತಿಯ ನಡುವೆಯೂ ಆಸ್ಟ್ರೇಲಿಯಾ ತಂಡವು ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಮತ್ತೊಮ್ಮೆ ತನ್ನ ಬಲಿಷ್ಠತೆಯನ್ನು ತೆರೆದಿಟ್ಟಿದೆ.

5 / 7
2023ರ ಏಕದಿನ ವಿಶ್ವಕಪ್ ಆಸ್ಟ್ರೇಲಿಯಾ ಪ್ಲೇಯಿಂಗ್ 11: ಟ್ರಾವಿಸ್ ಹೆಡ್ , ಡೇವಿಡ್ ವಾರ್ನರ್ , ಮಿಚೆಲ್ ಮಾರ್ಷ್ , ಸ್ಟೀವ್ ಸ್ಮಿತ್ , ಮಾರ್ನಸ್ ಲಾಬುಶೇನ್ , ಗ್ಲೆನ್ ಮ್ಯಾಕ್ಸ್‌ವೆಲ್ , ಜೋಶ್ ಇಂಗ್ಲಿಸ್ (ವಿಕೆಟ್‌ಕೀಪರ್) , ಮಿಚೆಲ್ ಸ್ಟಾರ್ಕ್ , ಪ್ಯಾಟ್ ಕಮ್ಮಿನ್ಸ್ (ನಾಯಕ) , ಆ್ಯಡಂ ಝಂಪಾ , ಜೋಶ್ ಹೇಝಲ್​ವುಡ್.

6 / 7
ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯದ ಆಸ್ಟ್ರೇಲಿಯಾ ಪ್ಲೇಯಿಂಗ್ 11: ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್ (ನಾಯಕ), ಮ್ಯಾಥ್ಯೂ ಶಾರ್ಟ್, ಜೋಶ್ ಫಿಲಿಪ್ (ವಿಕೆಟ್ ಕೀಪರ್), ಮ್ಯಾಟ್ ರೆನ್​ಶಾ, ಕೂಪರ್ ಕೊನೊಲಿ, ಮಿಚೆಲ್ ಓವನ್, ಮಿಚೆಲ್ ಸ್ಟಾರ್ಕ್, ನಾಥನ್ ಎಲ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಜೋಶ್ ಹೇಝಲ್​ವುಡ್.

7 / 7
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ