AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗೂ ವಿಶ್ವ ದಾಖಲೆ ಬರೆಯಬಹುದೆಂದು ತೋರಿಸಿಕೊಟ್ಟ ಪಾರ್ಲ್ ರಾಯಲ್ಸ್

Paarl Royals vs Pretoria Capitals: ಸೌತ್ ಆಫ್ರಿಕಾ ಟಿ20 ಲೀಗ್​ನ 20ನೇ ಪಂದ್ಯದಲ್ಲಿ ಪಾರ್ಲ್​ ರಾಯಲ್ಸ್ ತಂಡ 11 ರನ್​ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾರ್ಲ್ ರಾಯಲ್ಸ್ ತಂಡ 140 ರನ್​ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡ 20 ಓವರ್​ಗಳಲ್ಲಿ 129 ರನ್​ಗಳಿಸಲಷ್ಟೇ ಶಕ್ತರಾದರು.

ಝಾಹಿರ್ ಯೂಸುಫ್
|

Updated on: Jan 26, 2025 | 12:56 PM

Share
ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್ ರೆಕಾರ್ಡ್ ಬರೆದಿರುವುದು ಪಾರ್ಲ್​ ರಾಯಲ್ಸ್ ತಂಡ. ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ ಎಸ್​ಎಟಿ20 ಲೀಗ್​ನಲ್ಲಿ 5 ಸ್ಪಿನ್ನರ್​ಗಳಿಂದ 20 ಓವರ್​ ಬೌಲಿಂಗ್ ಮಾಡಿಸಿ ಪಾರ್ಲ್ ರಾಯಲ್ಸ್ ಈ ವಿಶೇಷ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

1 / 7
ಬೋಲ್ಯಾಂಡ್ ಪಾರ್ಕ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಪಾರ್ಲ್ ರಾಯಲ್ಸ್ ಹಾಗೂ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡದ ನಾಯಕ ರೈಲಿ ರೊಸ್ಸೊವ್ ಬೌಲಿಂಗ್ ಆಯ್ದುಕೊಂಡರು.

2 / 7
ಅದರಂತೆ ಮೊದಲು ಬ್ಯಾಟ್ ಮಾಡಿದ ಪಾರ್ಲ್ ರಾಯಲ್ಸ್ ಪರ ಜೋ ರೂಟ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ರನ್​ಗಳಿಸಲು ಕಷ್ಟಕರವಾಗಿದ್ದ ಪಿಚ್​ನಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ರೂಟ್ 56 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 78 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಪಾರ್ಲ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 140 ರನ್ ಕಲೆಹಾಕಿತು.

3 / 7
141 ರನ್​ಗಳ ಸುಲಭ ಗುರಿ ಬೆನ್ನತ್ತಿದ ಪ್ರಿಟೋರಿಯಾ ಕ್ಯಾಪಿಟಲ್ಸ್  ವಿರುದ್ಧ ಪಾರ್ಲ್​ ರಾಯಲ್ಸ್ ಸ್ಪಿನ್ ಅಸ್ತ್ರ ಪ್ರಯೋಗಿಸಿದರು. ಪಿಚ್​ ಸ್ಪಿನ್ ಸ್ನೇಹಿ ಎಂಬುದನ್ನು ಅರಿತುಕೊಂಡ ನಾಯಕ ಡೇವಿಡ್ ಮಿಲ್ಲರ್ ಐವರು ಸ್ಪಿನ್ನರ್​ಗಳನ್ನು ಬಳಸಿಕೊಂಡು 20 ಓವರ್​ ಪೂರೈಸಿದರು.

4 / 7
ಪಾರ್ಲ್ ರಾಯಲ್ಸ್ ಪರ ಸ್ಪಿನ್ ಮೋಡಿ ಮಾಡಿದ ಜಾರ್ನ್ ಫಾರ್ಚುಯಿನ್ 4 ಓವರ್​ಗಳಲ್ಲಿ 20 ರನ್ ನೀಡಿ 2 ವಿಕೆಟ್ ಪಡೆದರೆ, ದುನಿತ್ ವೆಲ್ಲಲಾಗೆ 4 ಓವರ್​​ಗಳಲ್ಲಿ 16 ರನ್ ನೀಡಿ 1 ವಿಕೆಟ್ ಕಬಳಿಸಿದರು. ಇನ್ನು ಮುಜೀಬ್ ಉರ್ ರೆಹಮಾನ್ 4 ಓವರ್​ಗಳಲ್ಲಿ 17 ರನ್ ನೀಡಿ 2 ವಿಕೆಟ್ ಉರುಳಿಸಿದರು.

5 / 7
ಎನ್​. ಪೀಟರ್ 4 ಓವರ್ ಎಸೆದರೆ, ಜೋ ರೂಟ್ 4 ಓವರ್​ಗಳಲ್ಲಿ 2 ವಿಕೆಟ್ ಕಬಳಿಸಿದರು. ಈ ಸ್ಪಿನ್ ಅಸ್ತ್ರಗಳ ಮುಂದೆ ರನ್​ಗಳಿಸಲು ಪರದಾಡಿದ ಪ್ರಿಟೋರಿಯಾ ಕ್ಯಾಪಿಟಲ್ಸ್ 20 ಓವರ್​​ಗಳಲ್ಲಿ 7 ವಿಕೆಟ್ ಕಳೆದುಕೊಂಡು 129 ರನ್​ಗಳಿಸಿ, 11 ರನ್​ಗಳಿಂದ ಸೋಲೊಪ್ಪಿಕೊಂಡಿತು.

6 / 7
ಇದರೊಂದಿಗೆ ಫ್ರಾಂಚೈಸಿ ಲೀಗ್ ಟಿ20 ಕ್ರಿಕೆಟ್​ನಲ್ಲಿ ಸ್ಪಿನ್ನರ್​ಗಳಿಂದಲೇ 20 ಓವರ್​​ಗಳನ್ನು ಮಾಡಿಸಿದ ಮೊದಲ ತಂಡವೆಂಬ ವಿಶ್ವ ದಾಖಲೆ ಪಾರ್ಲ್ ರಾಯಲ್ಸ್ ಪಾಲಾಯಿತು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅಪರೂಪದ ದಾಖಲೆಯೊಂದನ್ನು ಬರೆಯುವಲ್ಲಿ ಡೇವಿಡ್ ಮಿಲ್ಲರ್ ಮುಂದಾಳತ್ವದ ಪಾರ್ಲ್​ ರಾಯಲ್ಸ್ ಯಶಸ್ವಿಯಾಗಿದೆ.

7 / 7
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ