PAK vs BAN: 26 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡಿದ್ದ ಬಾಂಗ್ಲಾ ತಂಡಕ್ಕೆ ಶತಕದ ಆಸರೆಯಾದ ಲಿಟನ್ ದಾಸ್

Litton Das: ರಾವಲ್ಪಿಂಡಿಯಲ್ಲಿ ನಡೆಯುತ್ತಿರುವ ಪಾಕಿಸ್ತಾನ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶದ ವಿಕೆಟ್ ಕೀಪರ್ ಲಿಟನ್ ದಾಸ್ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ ಅಮೋಘ ಶತಕ ಬಾರಿಸಿದರು. 171 ಎಸೆತಗಳಲ್ಲಿ ಶತಕ ಪೂರೈಸಿದ ಲಿಟನ್ ಅವರ ಇನ್ನಿಂಗ್ಸ್​ನಲ್ಲಿ 11 ಬೌಂಡರಿ ಮತ್ತು ಎರಡು ಸಿಕ್ಸರ್‌ಗಳು ಸೇರಿದ್ದವು.

ಪೃಥ್ವಿಶಂಕರ
|

Updated on: Sep 01, 2024 | 6:26 PM

ರಾವಲ್ಪಿಂಡಿಯಲ್ಲಿ ನಡೆಯುತ್ತಿರುವ ಪಾಕಿಸ್ತಾನ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶದ ವಿಕೆಟ್ ಕೀಪರ್ ಲಿಟನ್ ದಾಸ್ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ ಅಮೋಘ ಶತಕ ಬಾರಿಸಿದರು. 171 ಎಸೆತಗಳಲ್ಲಿ ಶತಕ ಪೂರೈಸಿದ ಲಿಟನ್ ಅವರ ಇನ್ನಿಂಗ್ಸ್​ನಲ್ಲಿ 11 ಬೌಂಡರಿ ಮತ್ತು ಎರಡು ಸಿಕ್ಸರ್‌ಗಳು ಸೇರಿದ್ದವು. ಇದು ಅವರ ಟೆಸ್ಟ್ ವೃತ್ತಿಜೀವನದ ನಾಲ್ಕನೇ ಶತಕ ಮತ್ತು ಪಾಕಿಸ್ತಾನದ ವಿರುದ್ಧ ಎರಡನೇ ಶತಕವಾಗಿದೆ.

1 / 6
ಮೊದಲ ಇನ್ನಿಂಗ್ಸ್​ನಲ್ಲಿ ಪಾಕಿಸ್ತಾನದ 274 ರನ್‌ಗಳಿಗೆ ಉತ್ತರವಾಗಿ ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್‌ನಲ್ಲಿ ಅತ್ಯಂತ ಕಳಪೆ ಆರಂಭ ಮಾಡಿತು. ತಂಡ ಕೇವಲ 26 ರನ್ ಸೇರಿಸುವಷ್ಟರಲ್ಲಿ 6 ವಿಕೆಟ್ ಕಳೆದುಕೊಂಡಿತು. ಪಾಕ್ ಬೌಲರ್​ಗಳಾದ ಖುರ್ರಂ ಶಹಜಾದ್ ಮತ್ತು ಮಿರ್ ಹಮ್ಜಾ ಬಾಂಗ್ಲಾದೇಶದ ಬ್ಯಾಟಿಂಗ್ ಬೆನ್ನೇಲುಬು ಮುರಿದರು.

2 / 6
ಈ ಇಬ್ಬರ ದಾಳಿಗೆ ನಲುಗಿದ ಆರಂಭಿಕ ಆಟಗಾರ ಶದ್ಮನ್ ಇಸ್ಲಾಂ 10 ರನ್ ಗಳಿಸಿದರೆ, ಜಾಕಿರ್ ಹಸನ್ (1), ನಜ್ಮುಲ್ ಹುಸೇನ್ ಶಾಂಟೊ (4), ಮೊಮಿನುಲ್ ಹಕ್ (1), ಮುಶ್ಫಿಕರ್ ರಹೀಮ್ (3) ಮತ್ತು ಶಕೀಬ್ ಅಲ್ ಹಸನ್ (2) ಎರಡಂಕಿ ತಲುಪಲಿಲ್ಲ. ಹೀಗಾಗಿ ತಂಡ ಆರಂಭದಲ್ಲೇ ಒತ್ತಡಕ್ಕೆ ಸಿಲುಕಿತು.

3 / 6
ಆದರೆ ಇಲ್ಲಿಂದ ಜೊತೆಯಾದ ಲಿಟನ್ ದಾಸ್ ಹಾಗೂ ಮೆಹದಿ ಹಸನ್ ಮಿರಾಜ್ ಜೊತೆಗೂಡಿ ಬಾಂಗ್ಲಾದೇಶವನ್ನು ಸಂಕಷ್ಟದಿಂದ ಪಾರು ಮಾಡಿದರು. ಇವರಿಬ್ಬರು ಏಳನೇ ವಿಕೆಟ್‌ಗೆ 165 ರನ್‌ಗಳ ಬಲವಾದ ಜೊತೆಯಾಟ ನೀಡಿದರು. ಆರಂಭದಲ್ಲೇ ಪ್ರಾಬಲ್ಯ ಮೆರೆದಿದ್ದ ಪಾಕಿಸ್ತಾನಿ ಬೌಲರ್‌ಗಳು ಲಿಟನ್-ಮಿರಾಜ್ ಎದುರು ಸೋತರು.

4 / 6
ಆದರೆ 52ನೇ ಓವರ್​ನಲ್ಲಿ ಮಿರಾಜ್ ಅವರ ವಿಕೆಟ್ ಕಬಳಿಸುವ ಮೂಲಕ ಖುರ್ರಂ ಈ ಜೊತೆಯಾಟ ಮುರಿದರು. ಅಂತಿಮವಾಗಿ ಮೀರಜ್ 124 ಎಸೆತಗಳಲ್ಲಿ 12 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 78 ರನ್ ಗಳಿಸಿದರು. ಆದರೆ ಹೋರಾಟ ನಿಲ್ಲಿಸದ ಲಿಟನ್, 65ನೇ ಓವರ್​ನಲ್ಲಿ ಅಬ್ರಾರ್ ಅಹ್ಮದ್ ವಿರುದ್ಧ ಬೌಂಡರಿ ಬಾರಿಸುವ ಮೂಲಕ ಶತಕ ಪೂರ್ಣಗೊಳಿಸಿದರು.

5 / 6
ಈ ಶತಕದ ಮೂಲಕ 29 ವರ್ಷದ ಲಿಟನ್ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ (ಡಬ್ಲ್ಯುಟಿಸಿ) ಬಾಂಗ್ಲಾದೇಶದ ಪರವಾಗಿ ನಾಲ್ಕು ಶತಕಗಳನ್ನು ಗಳಿಸಿದ ಏಕೈಕ ಬಾಂಗ್ಲಾದೇಶದ ಆಟಗಾರ ಎನಿಸಿಕೊಂಡಿದ್ದಾರೆ. 40 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿರುವ ಅವರು ಡಬ್ಲ್ಯುಟಿಸಿಯಲ್ಲಿ 34 ಇನ್ನಿಂಗ್ಸ್‌ಗಳಲ್ಲಿ ಮೂರು ಶತಕಗಳನ್ನು ಗಳಿಸಿರುವ ಮುಶ್ಫಿಕರ್ ರಹೀಮ್ ಅವರ ದಾಖಲೆಯನ್ನು ಮುರಿದಿದ್ದಾರೆ.

6 / 6
Follow us
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ

ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್

ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ

ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು

ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ

29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್

ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು

ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ

ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ