AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PAK vs BAN: ಪಾಕ್ ನಾಯಕನ ಆಘಾತಕ್ಕಾರಿ ನಿರ್ಧಾರ; ರಿಜ್ವಾನ್ ದ್ವಿಶತಕದ ಕನಸು ಭಗ್ನ

PAK vs BAN: ಮೊದಲ ಇನ್ನಿಂಗ್ಸ್​ನಲ್ಲಿ ಮೊಹಮ್ಮದ್ ರಿಜ್ವಾನ್​ಗೆ ದ್ವಿಶತಕ ಸಿಡಿಸುವ ಅವಕಾಶವಿತ್ತು. ಆದರೆ ಪಾಕಿಸ್ತಾನ ತಂಡದ ನಾಯಕ ಶಾನ್ ಮಸೂದ್ ತೆಗೆದುಕೊಂಡ ಡಿಕ್ಲೇರ್ ನಿರ್ಧಾರದಿಂದಾಗಿ ರಿಜ್ವಾನ್​ಗೆ ಚೊಚ್ಚಲ ಟೆಸ್ಟ್ ದ್ವಿಶತಕ ಸಿಡಿಸುವ ಅವಕಾಶ ಕೈತಪ್ಪಿತು. ಇದೀಗ ಮಸೂದ್ ಅವರು ತೆಗೆದುಕೊಂಡ ಈ ನಿರ್ಧಾರದ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.

ಪೃಥ್ವಿಶಂಕರ
|

Updated on: Aug 22, 2024 | 8:07 PM

Share
ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ರಾವಲ್ಪಿಂಡಿಯಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ 448 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ.

1 / 7
ಪಾಕಿಸ್ತಾನದ ತಂಡದ ಅತ್ಯಂತ ಕಳಪೆಯ ಆರಂಭದ ಹೊರತಾಗಿಯೂ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಅದ್ಭುತ ಪ್ರದರ್ಶನ ನೀಡಿದ್ದರಿಂದ ಪಾಕಿಸ್ತಾನ 6 ವಿಕೆಟ್ ನಷ್ಟಕ್ಕೆ 448 ರನ್ ಗಳಿಸಿತು. ತಂಡದ ಪರ ಇಬ್ಬರು ಬ್ಯಾಟ್ಸ್‌ಮನ್​ಗಳು ಶತಕದ ಇನ್ನಿಂಗ್ಸ್ ಆಡಿದರು.

2 / 7
ಮಧ್ಯಮ ಕ್ರಮಾಂಕದಲ್ಲಿ ಪಾಕ್ ತಂಡದ ಇನ್ನಿಂಗ್ಸ್ ನಿಭಾಯಿಸಿದ ಸೌದ್ ಶಕೀಲ್ 261 ಎಸೆತಗಳಲ್ಲಿ 9 ಬೌಂಡರಿ ಸಹಿತ 141 ಬಾರಿಸಿ ವಿಕೆಟ್ ಒಪ್ಪಿಸಿದರೆ, ತಂಡದ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಮೊಹಮ್ಮದ್ ರಿಜ್ವಾನ್ 239 ಎಸೆತಗಳಲ್ಲಿ 11 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಅಜೇಯ 171 ರನ್ ಬಾರಿಸಿದರು.

3 / 7
ವಾಸ್ತವವಾಗಿ ಮೊದಲ ಇನ್ನಿಂಗ್ಸ್​ನಲ್ಲಿ ಮೊಹಮ್ಮದ್ ರಿಜ್ವಾನ್​ಗೆ ದ್ವಿಶತಕ ಸಿಡಿಸುವ ಅವಕಾಶವಿತ್ತು. ಆದರೆ ಪಾಕಿಸ್ತಾನ ತಂಡದ ನಾಯಕ ಶಾನ್ ಮಸೂದ್ ತೆಗೆದುಕೊಂಡ ಡಿಕ್ಲೇರ್ ನಿರ್ಧಾರದಿಂದಾಗಿ ರಿಜ್ವಾನ್​ಗೆ ಚೊಚ್ಚಲ ಟೆಸ್ಟ್ ದ್ವಿಶತಕ ಸಿಡಿಸುವ ಅವಕಾಶ ಕೈತಪ್ಪಿತು. ಇದೀಗ ಮಸೂದ್ ಅವರು ತೆಗೆದುಕೊಂಡ ಈ ನಿರ್ಧಾರದ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.

4 / 7
ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ 16 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ನಂತರ 114 ರನ್‌ಗಳಿಗೆ ನಾಲ್ಕನೇ ವಿಕೆಟ್ ಕಳೆದುಕೊಂಡಿತು. ಇಲ್ಲಿಂದ ಮೊಹಮ್ಮದ್ ರಿಜ್ವಾನ್ ಅವರ ಇನ್ನಿಂಗ್ಸ್ ತಂಡವನ್ನು ತನ್ನದಾಗಿಸಿಕೊಂಡಿತು. ಸೌದ್ ಶಕೀಲ್ ಜತೆಗೂಡಿ ತಂಡವನ್ನು ಬಲಿಷ್ಠ ಸ್ಥಿತಿಗೆ ಕೊಂಡೊಯ್ದರು.

5 / 7
ಮೊಹಮ್ಮದ್ ರಿಜ್ವಾನ್ ಅವರ ಅಂತರರಾಷ್ಟ್ರೀಯ ಟೆಸ್ಟ್ ವೃತ್ತಿಜೀವನದ ಅತಿದೊಡ್ಡ ಇನ್ನಿಂಗ್ಸ್ ಕೂಡ ಇದಾಗಿದೆ. ಈ ಮೊದಲು ಅವರು 150 ರನ್‌ಗಳ ಗಡಿಯನ್ನೂ ಮುಟ್ಟಿರಲಿಲ್ಲ. ಇದಕ್ಕೂ ಮೊದಲು ಅಜೇಯ 115 ರನ್‌ಗಳು ಟೆಸ್ಟ್‌ನಲ್ಲಿ ಅವರ ಅತ್ಯುತ್ತಮ ಸ್ಕೋರ್ ಆಗಿತ್ತು. ಇದಲ್ಲದೇ ಟೆಸ್ಟ್‌ನಲ್ಲಿ ಇದು ಅವರ ಮೂರನೇ ಶತಕವಾಗಿದೆ.

6 / 7
ಅಚ್ಚರಿಯ ಸಂಗತಿ ಎಂದರೆ ಈ ಮೂರು ಶತಕಗಳೂ ರಿಜ್ವಾನ್ ಅವರ ಅಜೇಯ ಶತಕಗಳಾಗಿವೆ. ಅಂದರೆ ಈ ಮೂರು ಶತಕಗಳ ಇನ್ನಿಂಗ್ಸ್‌ಗಳಲ್ಲಿ ಅವರು ಅಜೇಯರಾಗಿ ಉಳಿದಿದ್ದಾರೆ. ಇದಲ್ಲದೆ, ಮೊಹಮ್ಮದ್ ರಿಜ್ವಾನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಪಾಕಿಸ್ತಾನ ಪರ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿಯನ್ನು ಹಿಂದಿಕ್ಕಿದ್ದಾರೆ.

7 / 7
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!