ಸದ್ಯ 6 ದ್ವಿಶತಕಗಳೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಪಾರುಪತ್ಯ ಮುಂದುವರೆಸಿರುವ ಜೋ ರೂಟ್, ಇಂಗ್ಲೆಂಡ್ ಪರ ಟೆಸ್ಟ್ನಲ್ಲಿ ಅತ್ಯಧಿಕ ಶತಕ ಬಾರಿಸಿದ ಹಾಗೂ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ ಇಂಗ್ಲೆಂಡ್ ಪರ ಟೆಸ್ಟ್ನಲ್ಲಿ 12500+ ರನ್ ಕಲೆಹಾಕಿದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.