Joe Root: ಡಬಲ್ ಸೆಂಚುರಿ ಸಿಡಿಸಿ ಸಚಿನ್ ದಾಖಲೆ ಸರಿಗಟ್ಟಿದ ಜೋ ರೂಟ್

|

Updated on: Oct 10, 2024 | 11:07 AM

Joe Root Records: ಇಂಗ್ಲೆಂಡ್ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಜೋ ರೂಟ್ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಾ ಸಾಗುತ್ತಿದ್ದಾರೆ. ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಪೂರೈಸುವ ಮೂಲಕ ಇಂಗ್ಲೆಂಡ್ ಪರ ಟೆಸ್ಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಬರೆದಿದ್ದ ರೂಟ್, ಇದೀಗ ಶತಕವನ್ನು ದ್ವಿಶತಕವನ್ನಾಗಿ ಪರಿವರ್ತಿಸಿ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.

1 / 5
ಮುಲ್ತಾನ್​ನಲ್ಲಿ ಪಾಕಿಸ್ತಾನ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಜೋ ರೂಟ್ (Joe Root) ದ್ವಿಶತಕ ಬಾರಿಸಿದ್ದಾರೆ. ಮೂರನೇ ದಿನದಾಟದ ಮುಕ್ತಾಯಕ್ಕೆ ಅಜೇಯ 176 ರನ್​ ಕಲೆಹಾಕಿದ್ದ ರೂಟ್, 4ನೇ ದಿನದಾಟದ ಆರಂಭದಲ್ಲಿ 14 ರನ್ ಪೇರಿಸಿ 305 ಎಸೆತಗಳಲ್ಲಿ 200* ರನ್ ಪೂರೈಸಿದ್ದಾರೆ.

2 / 5
ಇದು ಜೋ ರೂಟ್ ಅವರ 6ನೇ ದ್ವಿಶತಕ ಎಂಬುದು ವಿಶೇಷ. ಈ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಸಚಿನ್ 329 ಟೆಸ್ಟ್ ಇನಿಂಗ್ಸ್​ಗಳಲ್ಲಿ 6 ದ್ವಿಶತಕ ಬಾರಿಸಿದ್ದರು. ಈ ಮೂಲಕ ಡಬಲ್ ಸೆಂಚುರಿ ಸರದಾರರ ಪಟ್ಟಿಯಲ್ಲಿ 7ನೇ ಸ್ಥಾನ ಅಲಂಕರಿಸಿದ್ದರು.

3 / 5
ಇದೀಗ 268ನೇ ಇನಿಂಗ್ಸ್​ ಮೂಲಕ ಜೋ ರೂಟ್ ಒಟ್ಟು 6 ದ್ವಿಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತೀ ಹೆಚ್ಚು ಡಬಲ್ ಸೆಂಚುರಿ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ 7ನೇ ಸ್ಥಾನ ಅಲಂಕರಿಸಿದ್ದಾರೆ.

4 / 5
ಇನ್ನು ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ದ್ವಿಶತಕ ಸಿಡಿಸಿದ ಸರ್ವಶ್ರೇಷ್ಠ ದಾಖಲೆ ಆಸ್ಟ್ರೇಲಿಯಾದ ದಂತಕಥೆ ಡಾನ್ ಬ್ರಾಡ್​ಮ್ಯಾನ್ ಹೆಸರಿನಲ್ಲಿದೆ. ಕೇವಲ 80 ಟೆಸ್ಟ್ ಇನಿಂಗ್ಸ್ ಆಡಿರುವ ಡಾನ್ ಬ್ರಾಡ್​ಮ್ಯಾನ್ ಒಟ್ಟು 12 ದ್ವಿಶತಕಗಳನ್ನು ಬಾರಿಸಿ ಈ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.

5 / 5
ಸದ್ಯ 6 ದ್ವಿಶತಕಗಳೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಪಾರುಪತ್ಯ ಮುಂದುವರೆಸಿರುವ ಜೋ ರೂಟ್, ಇಂಗ್ಲೆಂಡ್ ಪರ ಟೆಸ್ಟ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ ಹಾಗೂ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ ಇಂಗ್ಲೆಂಡ್ ಪರ ಟೆಸ್ಟ್​ನಲ್ಲಿ 12500+ ರನ್ ಕಲೆಹಾಕಿದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.