ರಾವಲ್ಪಿಂಡಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಎದುರು 74 ರನ್ಗಳ ಸೋಲು ಅನುಭವಿಸಿರುವ ಪಾಕ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಮುಲ್ತಾನ್ನಲ್ಲಿ ನಡೆಯಲ್ಲಿರುವ ಎರಡನೇ ಟೆಸ್ಟ್ ಪಂದ್ಯದಿಂದ ತಂಡದ ಸ್ಟಾರ್ ವೇಗಿ ಹೊರಗುಳಿಯಲಿದ್ದಾರೆ.
ESPNcricinfo ವೆಬ್‌ಸೈಟ್‌ನ ವರದಿಯ ಪ್ರಕಾರ, ಮೊದಲ ಟೆಸ್ಟ್ ಪಂದ್ಯದಲ್ಲಿ ಗಾಯಗೊಂಡಿದ್ದ ಪಾಕಿಸ್ತಾನದ ವೇಗದ ಬೌಲರ್ ಹ್ಯಾರಿಸ್ ರೌಫ್ ಅವರನ್ನು ಎರಡನೇ ಟೆಸ್ಟ್ ಪಂದ್ಯದಿಂದ ಹೊರಗಿಡಲಾಗಿದೆ ಎಂದು ವರದಿಯಾಗಿದೆ.
ರಾವಲ್ಪಿಂಡಿಯಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಪಾಕ್ ಪರ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದ ರೌಫ್, ಫೀಲ್ಡಿಂಗ್ ಮಾಡುವಾಗ ಬಲಗಾಲಿಗೆ ಪೆಟ್ಟು ಮಾಡಿಕೊಂಡಿದ್ದರು.
ಬಳಿಕ ರೌಫ್ ಅವರನ್ನು ಎಂಆರ್ಐ ಸ್ಕ್ಯಾನಿಂಗ್ಗಾಗಿ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಹೀಗಾಗಿ ರೌಫ್ಗೆ ಪಂದ್ಯದ ಎರಡನೇ ಇನ್ನಿಂಗ್ಸ್ ಆಡಲು ಸಾಧ್ಯವಾಗಿರಲಿಲ್ಲ. ಇಂಜುರಿ ನಡುವೆಯೂ ಮೊದಲ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡಿದ್ದ ರೌಫ್ಗೆ ಎರಡನೇ ಇನ್ನಿಂಗ್ಸ್ನಲ್ಲಿ ಬೌಲಿಂಗ್ ಮಾಡಲು ಸಾಧ್ಯವಾಗಿರಲಿಲ್ಲ
ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಶಾಹೀನ್ ಶಾ ಆಫ್ರಿದಿ ಅಲಭ್ಯತೆಯ ಶಾಕ್ಗೆ ಒಳಗಾಗಿದ್ದ ಪಾಕಿಸ್ತಾನಕ್ಕೆ ಇದೀಗ ರೌಫ್ ಕೂಡ ಗಾಯಗೊಂಡಿರುವುದು ಆಘಾತ ತಂದೊಡ್ಡಿದೆ.
Published On - 6:27 pm, Mon, 5 December 22