PAK vs NZ: ಕಿವೀಸ್ ನೆಲದಲ್ಲಿ ಅಪರೂಪದ ದಾಖಲೆ ನಿರ್ಮಿಸಿದ ಬಾಬರ್ ಆಝಂ..!
PAK vs NZ: ಈ ಪಂದ್ಯದಲ್ಲಿ ಪಾಕ್ ಗೆಲುವಿಗಾಗಿ ಏಕಾಂಗಿ ಹೋರಾಟ ನಡೆಸಿದ ಮಾಜಿ ನಾಯಕ ಬಾಬರ್ ಆಝಂ 43 ಎಸೆತಗಳಲ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್ ಸಹಾಯದಿಂದ 66 ರನ್ ಕಲೆಹಾಕಿದರು. ಆದರೂ ತಂಡವನ್ನು ಗೆಲುವಿನತ್ತ ಮುನ್ನಡೆಸಲು ಬಾಬರ್ಗೆ ಸಾಧ್ಯವಾಗಲಿಲ್ಲ. ಆದರೆ ಬಾಬರ್ ವೈಯಕ್ತಿಕವಾಗಿ ಅಪರೂಪದ ದಾಖಲೆ ಬರೆಯುವಲ್ಲಿ ಯಶಸ್ವಿಯಾದರು.
1 / 8
ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವೆ ಐದು ಟಿ20 ಪಂದ್ಯಗಳ ಸರಣಿ ನಡೆಯುತ್ತಿದೆ. ಮೊದಲ ಪಂದ್ಯದಲ್ಲಿ 46 ರನ್ಗಳ ಸೋಲು ಅನುಭವಿಸಿದ್ದ ಪಾಕಿಸ್ತಾನ ತಂಡ ಇದೀಗ ಎರಡನೇ ಟಿ20 ಪಂದ್ಯದಲ್ಲೂ 21 ರನ್ಗಳ ಸೋಲು ಅನುಭವಿಸಿದೆ. ಇದರೊಂದಿಗೆ ಸರಣಿಯಲ್ಲಿ 0-2 ಅಂತರದ ಹಿನ್ನಡೆ ಅನುಭವಿಸಿದೆ.
2 / 8
ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನದ ನಾಯಕ ಶಾಹೀನ್ ಶಾ ಆಫ್ರಿದಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಪಾಕ್ ಗೆಲುವಿಗೆ 195 ರನ್ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ಕೊನೆಯ ಓವರ್ನಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಲಷ್ಟೇ ಶಕ್ತವಾಯಿತು.
3 / 8
ಇನ್ನು ಈ ಪಂದ್ಯದಲ್ಲಿ ಪಾಕ್ ಗೆಲುವಿಗಾಗಿ ಏಕಾಂಗಿ ಹೋರಾಟ ನಡೆಸಿದ ಮಾಜಿ ನಾಯಕ ಬಾಬರ್ ಆಝಂ 43 ಎಸೆತಗಳಲ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್ ಸಹಾಯದಿಂದ 66 ರನ್ ಕಲೆಹಾಕಿದರು. ಆದರೂ ತಂಡವನ್ನು ಗೆಲುವಿನತ್ತ ಮುನ್ನಡೆಸಲು ಬಾಬರ್ಗೆ ಸಾಧ್ಯವಾಗಲಿಲ್ಲ. ಆದರೆ ಬಾಬರ್ ವೈಯಕ್ತಿಕವಾಗಿ ಅಪರೂಪದ ದಾಖಲೆ ಬರೆಯುವಲ್ಲಿ ಯಶಸ್ವಿಯಾದರು.
4 / 8
ಬಾಬರ್ ಈ ಪಂದ್ಯದಲ್ಲಿ 29 ನೇ ರನ್ ಗಳಿಸಿದ ತಕ್ಷಣ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿದೇಶಿ ನೆಲದಲ್ಲಿ 9000 ರನ್‌ಗಳನ್ನು ಪೂರ್ಣಗೊಳಿಸಿದರು. ಈ ಮೂಲಕ ಬಾಬರ್, ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ ಅವರನ್ನು ಹಿಂದಿಕ್ಕಿದರು.
5 / 8
ನ್ಯೂಜಿಲೆಂಡ್ ತಂಡದ ನಾಯಕ ವಿಲಿಯಮ್ಸನ್ ತವರಿನಿಂದ ಹೊರಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 8972 ರನ್ ಗಳಿಸಿದ್ದಾರೆ. ಇದೀಗ ಬಾಬರ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿದೇಶದಲ್ಲಿ 9 ಸಾವಿರ ರನ್ ಪೂರೈಸಿದ 9ನೇ ಆಟಗಾರ ಎನಿಸಿಕೊಂಡಿದ್ದಾರೆ.
6 / 8
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸಚಿನ್ ತೆಂಡೂಲ್ಕರ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 20165 ರನ್ ಕಲೆಹಾಕಿದ್ದು, ವಿದೇಶಿ ನೆಲದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ.
7 / 8
ಶ್ರೀಲಂಕಾ ತಂಡದ ಮಾಜಿ ವಿಕೆಟ್‌ಕೀಪರ್ ಬ್ಯಾಟರ್ ಕುಮಾರ ಸಂಗಕ್ಕಾರ 15973 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ.
8 / 8
ರಾಹುಲ್ ದ್ರಾವಿಡ್ 15204 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಮತ್ತೊಂದೆಡೆ, ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 14744 ರನ್ ಗಳಿಸಿದ್ದರೆ, ರೋಹಿತ್ ಶರ್ಮಾ 10141 ರನ್ ಗಳಿಸಿ ಪಟ್ಟಿಯಲ್ಲಿ ಕ್ರಮವಾಗಿ ಸ್ಥಾನ ಪಡೆದಿದ್ದಾರೆ.