AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್​ನಲ್ಲಿ ಭಾರತದ ದಾಖಲೆ ಮುರಿದು ಇತಿಹಾಸ ನಿರ್ಮಿಸಿದ ಪಾಕಿಸ್ತಾನ್

Pakistan vs West Indies: ಪಾಕಿಸ್ತಾನದಲ್ಲಿ ಆಡಲಾದ ಕೊನೆಯ ಮೂರು ಟೆಸ್ಟ್ ಪಂದ್ಯಗಳಲ್ಲಿ ವೇಗದ ಬೌಲರ್​ಗಳು ಒಂದೇ ಒಂದು ವಿಕೆಟ್ ಪಡೆದಿಲ್ಲ. ಇದೀಗ ವೆಸ್ಟ್ ಇಂಡೀಸ್ ವಿರುದ್ಧ 20 ವಿಕೆಟ್ ಕಬಳಿಸುವ ಮೂಲಕ ಪಾಕ್ ಸ್ಪಿನ್ನರ್​ಗಳು ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಭಾರತದ ಐತಿಹಾಸಿಕ ಸಾಧನೆಯನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on:Jan 20, 2025 | 10:01 AM

Share
ಮುಲ್ತಾನ್​ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಪಾಕಿಸ್ತಾನ್ 230 ರನ್ ಬಾರಿಸಿದರೆ, ವೆಸ್ಟ್ ಇಂಡೀಸ್ 137 ರನ್​​ಗಳಿಸಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಪಾಕ್ ತಂಡ 157 ರನ್​​ಗಳಿಸಿದರೆ, ವೆಸ್ಟ್ ಇಂಡೀಸ್ 123 ರನ್​​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಪಾಕಿಸ್ತಾನ್ ತಂಡ 127 ರನ್​ಗಳ ಅಮೋಘ ಗೆಲುವು ದಾಖಲಿಸಿದೆ.

1 / 6
ವಿಶೇಷ ಎಂದರೆ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್​ ಎಲ್ಲಾ ವಿಕೆಟ್​ಗಳನ್ನು ಪಾಕಿಸ್ತಾನದ ಸ್ಪಿನ್ನರ್​ಗಳೇ ಕಬಳಿಸಿದ್ದಾರೆ. ಅಂದರೆ ಮೊದಲ ಇನಿಂಗ್ಸ್​ನಲ್ಲಿ ಸ್ಪಿನ್ನರ್​ಗಳಾದ ಸಾಜಿದ್ ಖಾನ್ (4), ನೊಮಾನ್ ಅಲಿ (5) ಹಾಗೂ ಅಬ್ರಾರ್ ಅಹ್ಮದ್ (1) ಜೊತೆಯಾಗಿ 10 ವಿಕೆಟ್ ಕಬಳಿಸಿದ್ದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಸಾಜಿದ್ ಖಾನ್ (5),  ಅಬ್ರಾರ್ ಅಹ್ಮದ್ (4) ಹಾಗೂ ನೊಮಾನ್ ಅಲಿ (1) ಯೇ 10 ವಿಕೆಟ್ ಉರುಳಿಸಿದ್ದಾರೆ. ಈ ಮೂಲಕ ಪಾಕ್​ ಸ್ಪಿನ್ನರ್​​ಗಳೇ 20 ವಿಕೆಟ್​ಗಳನ್ನು ಕಬಳಿಸಿದ್ದಾರೆ.

2 / 6
ಇದರೊಂದಿಗೆ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ ಪಂದ್ಯವೊಂದರಲ್ಲಿ  ಅತೀ ಹೆಚ್ಚು ಬಾರಿ ಸ್ಪಿನ್ನರ್​ಗಳೇ ಎಲ್ಲಾ ವಿಕೆಟ್ ಕಬಳಿಸಿದ ವಿಶ್ವ ದಾಖಲೆ ಪಾಕಿಸ್ತಾನ್ ತಂಡದ ಪಾಲಾಗಿದೆ. ಇದಕ್ಕೂ ಮುನ್ನ ಈ ಸರ್ವಶ್ರೇಷ್ಠ ದಾಖಲೆ ಭಾರತ ತಂಡದ ಹೆಸರಿನಲ್ಲಿತ್ತು ಎಂಬುದು ವಿಶೇಷ.

3 / 6
1973ರಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತೀಯ ಸ್ಪಿನ್ನರ್​ಗಳು ಮೊದಲ ಬಾರಿಗೆ 20 ವಿಕೆಟ್ ಕಬಳಿಸಿ ಮಿಂಚಿದ್ದರು. ಇದಾದ ಬಳಿಕ 1976 ರಲ್ಲಿ ನ್ಯೂಝಿಲೆಂಡ್ ವಿರುದ್ಧ ಈ ಸಾಧನೆಯನ್ನು ಪುನರಾವರ್ತಿಸಿದ್ದರು. ಇನ್ನು 2013 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್​ಗಳು 20 ವಿಕೆಟ್ ಕಬಳಿಸಿ ಕೈಚಳಕ ಮೆರೆದಿದ್ದರು. ಇದಾದ ಬಳಿಕ 2015 ರಲ್ಲಿ ಸೌತ್ ಆಫ್ರಿಕಾ ವಿರುದ್ಧ ಭಾರತೀಯ ಸ್ಪಿನ್ನರ್​ಗಳು 20 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ಮೂಲಕ ಟೀಮ್ ಇಂಡಿಯಾ ಸ್ಪಿನ್ನರ್​ಗಳು ಟೆಸ್ಟ್ ಕ್ರಿಕೆಟ್​ನಲ್ಲಿ 4 ಬಾರಿ 20 ವಿಕೆಟ್​ಗಳ ಐತಿಹಾಸಿಕ ಸಾಧನೆ ಮಾಡಿದ್ದರು.

4 / 6
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಪಾಕಿಸ್ತಾನ್ ತಂಡ ಯಶಸ್ವಿಯಾಗಿದೆ. 1980 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಪಾಕಿಸ್ತಾನ್ ತಂಡದ ಸ್ಪಿನ್ನರ್​ಗಳು ಮೊದಲ ಬಾರಿಗೆ 20 ವಿಕೆಟ್ ಕಬಳಿಸಿದ್ದರು. ಇದಾದ ಬಳಿಕ 1987 ರಲ್ಲಿ ಇಂಗ್ಲೆಂಡ್ ವಿರುದ್ಧ ಈ ಸಾಧನೆಯನ್ನು ಪುನರಾವರ್ತಿಸಿದ್ದರು. ಇನ್ನು 2024 ರಲ್ಲಿ ಇಂಗ್ಲೆಂಡ್ ವಿರುದ್ಧದ 2 ಟೆಸ್ಟ್ ಪಂದ್ಯಗಳಲ್ಲಿ ಪಾಕ್ ಸ್ಪಿನ್ನರ್​ಗಳೇ 40 ವಿಕೆಟ್ ಕಬಳಿಸಿದ್ದರು. ಇದೀಗ 2025 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕೂಡ ಪಾಕಿಸ್ತಾನ್ ಸ್ಪಿನ್ನರ್​ಗಳು ಮೋಡಿ ಮಾಡಿದ್ದಾರೆ.

5 / 6
ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಪಾಕಿಸ್ತಾನ್ ಸ್ಪಿನ್ನರ್​​ಗಳು 5 ಬಾರಿ 20 ವಿಕೆಟ್​ ಉರುಳಿಸಿ ಹೊಸ ದಾಖಲೆ ಬರೆದಿದ್ದಾರೆ. ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶ ಎಂದರೆ ಪಾಕಿಸ್ತಾನದಲ್ಲಿ ನಡೆದ ಕೊನೆಯ ಮೂರು ಟೆಸ್ಟ್ ಪಂದ್ಯಗಳಲ್ಲಿ ಯಾವುದೇ ವೇಗದ ಬೌಲರ್ ಒಂದೇ ಒಂದು ವಿಕೆಟ್ ಪಡೆದಿಲ್ಲ ಎಂಬುದು. ಇದು ಕೂಡ ಒಂದು ದಾಖಲೆ ಎಂಬುದು ವಿಶೇಷ.

6 / 6

Published On - 9:53 am, Mon, 20 January 25

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ

600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು

ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್

ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!

ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ

ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು

ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ

ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ

ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ

ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​