AUS vs PAK: ಆಸ್ಟ್ರೇಲಿಯಾಗೆ ಆಘಾತ: ಪಾಕ್​ಗೆ ಐತಿಹಾಸಿಕ ಸರಣಿ ಜಯ

Australia vs Pakistan: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಪಾಕಿಸ್ತಾನ್ ತಂಡ 2-1 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ 2 ವಿಕೆಟ್​ಗಳ ರೋಚಕ ಜಯ ಸಾಧಿಸಿತ್ತು. ಇನ್ನು ಎರಡನೇ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ್ 9 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತ್ತು. ಇದೀಗ ಮೂರನೇ ಏಕದಿನ ಪಂದ್ಯದಲ್ಲೂ ಜಯ ಸಾಧಿಸಿ ಪಾಕ್ ತಂಡ ಸರಣಿ ವಶಪಡಿಸಿಕೊಂಡಿದೆ.

| Updated By: ಝಾಹಿರ್ ಯೂಸುಫ್

Updated on: Nov 10, 2024 | 2:23 PM

ಬರೋಬ್ಬರಿ 22 ವರ್ಷಗಳ ಬಳಿಕ ಪಾಕಿಸ್ತಾನ್ ತಂಡವು ಆಸ್ಟ್ರೇಲಿಯಾದಲ್ಲಿ ಪರಾಕ್ರಮ ಮೆರೆದಿದೆ. ಅದು ಕೂಡ ಕಾಂಗರೂ ನಾಡಿನಲ್ಲಿ ಆಸೀಸ್ ಪಡೆಯನ್ನು 2-1 ಅಂತರದಿಂದ ಮಣಿಸಿ ಏಕದಿನ ಸರಣಿ ಗೆಲ್ಲುವ ಮೂಲಕ ಎಂಬುದು ವಿಶೇಷ. ಅಂದರೆ ಪಾಕಿಸ್ತಾನ್ ತಂಡವು ಆಸ್ಟ್ರೇಲಿಯಾದಲ್ಲಿ ಏಕದಿನ ಸರಣಿ ಗೆದ್ದು ಬರೋಬ್ಬರಿ 22 ವರ್ಷಗಳಾಗಿತ್ತು.

1 / 5
ಆದರೆ ಈ ಬಾರಿ ಮೊಹಮ್ಮದ್ ರಿಝ್ವಾನ್ ಮುಂದಾಳತ್ವದಲ್ಲಿ ಕಣಕ್ಕಿಳಿದ ಪಾಕ್ ಪಡೆಯು ಆತಿಥೇಯರನ್ನು ಬಗ್ಗು ಬಡಿದು 2 ದಶಕಗಳ ಬಳಿಕ ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈ ಗೆಲುವಿನೊಂದಿಗೆ ಆಸೀಸ್ ಪಿಚ್​ನಲ್ಲಿ ಸರಣಿ ಗೆಲ್ಲುವ ಪಾಕ್ ತಂಡದ 22 ವರ್ಷಗಳ ಕಾಯುವಿಕೆ ಕೂಡ ಕೊನೆಗೊಂಡಿದೆ.

2 / 5
ಇನ್ನು ಪರ್ತ್​ನಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಸೋತು ಮೊದಲ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಪಾಕ್ ವೇಗಿಗಳ ಕರಾರುವಾಕ್ ದಾಳಿ ಮುಂದೆ ಪೆವಿಲಿಯನ್ ಪರೇಡ್ ನಡೆಸಿದ ಆಸ್ಟ್ರೇಲಿಯಾ 31.5 ಓವರ್​ಗಳಲ್ಲಿ ಕೇವಲ 140 ರನ್​ಗಳಿಸಿ ಆಲೌಟ್ ಆಯಿತು.

3 / 5
141 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡಕ್ಕೆ ಆರಂಭಿಕರಾದ ಸೈಮ್ ಅಯ್ಯೂಬ್ ಹಾಗೂ ಅಬ್ದುಲ್ಲಾ ಶಫೀಕ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 84 ರನ್​ಗಳ ಜೊತೆಯಾಟವಾಡಿದ ಬಳಿಕ ಅಬ್ದುಲ್ಲಾ ಶಫೀಕ್ (37) ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಸೈಮ್ ಅಯ್ಯೂಬ್ (42) ಕೂಡ ಔಟಾದರು. ಅಂತಿಮವಾಗಿ ಪಾಕ್ ತಂಡವು 26.5 ಓವರ್​ಗಳಲ್ಲಿ 143 ರನ್​ ಬಾರಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

4 / 5
ಈ ಮೂಲಕ 22 ವರ್ಷಗಳ ಬಳಿಕ ಆಸ್ಟ್ರೇಲಿಯಾದಲ್ಲಿ ಸರಣಿ ಗೆಲ್ಲುವಲ್ಲಿ ಪಾಕಿಸ್ತಾನ್ ತಂಡ ಯಶಸ್ವಿಯಾಗಿದೆ. ಇದಕ್ಕೂ ಮುನ್ನ 2002 ರಲ್ಲಿ ವಾಕರ್ ಯೂನಿಸ್ ನೇತೃತ್ವದ ಪಾಕ್ ಪಡೆ ಆಸ್ಟ್ರೇಲಿಯಾ ವಿರುದ್ಧ 2-1 ಅಂತರದಿಂದ ಏಕದಿನ ಸರಣಿ ಗೆದ್ದುಕೊಂಡಿತ್ತು. ಇದಾದ ಬಳಿಕ ಒಮ್ಮೆಯೂ ಪಾಕಿಸ್ತಾನ್ ತಂಡ ಆಸ್ಟ್ರೇಲಿಯಾದಲ್ಲಿ ಸರಣಿ ಜಯಿಸಿರಲಿಲ್ಲ. ಇದೀಗ ಇತಿಹಾಸ ಪುನರಾವರ್ತಿಸುವಲ್ಲಿ ಮೊಹಮ್ಮದ್ ರಿಝ್ವಾನ್ ಪಡೆ ಯಶಸ್ವಿಯಾಗಿದೆ.

5 / 5
Follow us
ಬುಡಕಟ್ಟು ಜನರೊಂದಿಗೆ ನೃತ್ಯ ಮಾಡಿದ ಸಿಎಂ ಸಿದ್ದರಾಮಯ್ಯ

ಊಟ ಮಾಡುವಾಗ ಅರ್ಧಕ್ಕೆ ಎದ್ದು ಹೋಗಬಾರದು ಯಾಕೆ? ವಿಡಿಯೋ ನೋಡಿ

Nithya Bhavishya: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ

ತಮಿಳು, ತೆಲುಗಿನಲ್ಲೂ ಶಿವರಾಜ್​ಕುಮಾರ್ ಬ್ಯುಸಿ; ಇಲ್ಲಿದೆ ಮಾಹಿತಿ..

ಶಿವರಾಜ್​ಕುಮಾರ್​ ಆರೋಗ್ಯ ಸಮಸ್ಯೆ; ಕರೆ ಮಾಡಿ ವಿಚಾರಿಸಿದ ಯಶ್, ಸುದೀಪ್

ಕೆರೆ ಹಾಡಿಯ ಪಡಸಾಲೆಯಲ್ಲಿ ಕುಳಿತು ಜನದ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ

ಜನಾಂಗೀಯ ನಿಂದನೆಯಾಗಿದೆ ಅಂತ ಕುಮಾರಸ್ವಾಮಿ ಯಾಕೆ ದೂರು ನೀಡಿಲ್ಲ? ಶಿವಕುಮಾರ್

ಜಮೀರ್ ಅಹ್ಮದ್​​ರನ್ನು ಸೃಷ್ಟಿ ಮಾಡಿದ್ದೇ ದೇವೇಗೌಡರ ಕುಟುಂಬ: ವಿ ಸೋಮಣ್ಣ

ಹನುಮಂತನ ಪಂಚೆ ಧರಿಸಿದ ಗೌತಮಿ ಜಾದವ್; ಬಟ್ಟೆ ಮಹಿಮೆಯಿಂದ ಬದಲಾಯ್ತು ವರ್ತನೆ

ಸಿದ್ದರಾಮಯ್ಯ ವಿರುದ್ಧ ಯಾವತ್ತೂ ವೈಯಕ್ತಿಕ ಟೀಕೆ ಮಾಡಿಲ್ಲ: ಎ ಮಂಜು