ವೈಟ್ ವಾಶ್… ಏಕದಿನ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದ ಪಾಕಿಸ್ತಾನ್

South Africa vs Pakistan: ಸೌತ್ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು ಪಾಕಿಸ್ತಾನ್ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಪಾಕ್ ಪಡೆ 3 ವಿಕೆಟ್‌ಗಳ ಜಯ ಸಾಧಿಸಿತ್ತು. ಇನ್ನು ಎರಡನೇ ಮ್ಯಾಚ್ ನಲ್ಲಿ 81 ರನ್ ಗಳ ವಿಜಯ ಸಾಧಿಸಿದ್ದ ಪಾಕಿಸ್ತಾನ್ ಮೂರನೇ ಪಂದ್ಯದಲ್ಲಿ 36 ರನ್ ಗಳಿಂದ ಜಯದ ನಗೆಬೀರಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Dec 23, 2024 | 7:03 AM

ಸೌತ್ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲೂ ಪಾಕಿಸ್ತಾನ್ ತಂಡ ಜಯ ಸಾಧಿಸಿದೆ. ಜೋಹಾನ್ಸ್​ಬರ್ಗ್‌ನ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ಬೌಲಿಂಗ್ ಆಯ್ದುಕೊಂಡಿದ್ದರು.

1 / 6
ಅದರಂತೆ ಇನಿಂಗ್ಸ್ ಆರಂಭಿಸಿದ ಪಾಕಿಸ್ತಾನ್ ಪರ ಯುವ ದಾಂಡಿಗ ಸೈಮ್ ಅಯ್ಯೂಬ್ 94 ಎಸೆತಗಳಲ್ಲಿ 13 ಫೋರ್ ಹಾಗೂ 2 ಸಿಕ್ಸ್ ಗಳೊಂದಿಗೆ 101 ರನ್​ಗಳ ಭರ್ಜರಿ ಶತಕ ಸಿಡಿಸಿದರು. ಇನ್ನು ಬಾಬರ್ ಆಝಂ 52 ರನ್ ಗಳ ಕೊಡುಗೆ ನೀಡಿದರು.

2 / 6
ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಮೊಹಮ್ಮದ್ ರಿಝ್ವಾನ್ 53 ರನ್ ಚಚ್ಚಿದರು. ಸೈಮ್ ಅಯ್ಯೂಬ್ ಅವರ ಶತಕ ಮತ್ತು ಬಾಬರ್, ರಿಝ್ವಾನ್​ರ ಅರ್ಧಶತಕಗಳ ನೆರವಿನಿಂದ ಪಾಕಿಸ್ತಾನ್ ತಂಡವು ನಿಗದಿತ 47 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 308 ರನ್ ಕಲೆಹಾಕಿತು.

3 / 6
309 ರನ್ ಗಳ ಕಠಿಣ ಗುರಿ ಬೆನ್ನತ್ತಿದ ಸೌತ್ ಆಫ್ರಿಕಾ ಪರ ಹೆನ್ರಿಕ್ ಕ್ಲಾಸೆನ್ 43 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 12 ಫೋರ್ ಗಳೊಂದಿಗೆ 81 ರನ್ ಬಾರಿಸಿದರು. ಆದರೆ ಉಳಿದ ಬ್ಯಾಟರ್ ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಸೌತ್ ಆಫ್ರಿಕಾ ತಂಡವು 42 ಓವರ್‌ಗಳಲ್ಲಿ 271 ರನ್ ಗಳಿಸಿ ಆಲೌಟ್ ಆಗಿದೆ. ಈ ಮ‌ೂಲಕ ಪಾಕಿಸ್ತಾನ್ ತಂಡ 36 ರನ್ ಗಳ ಜಯ ಸಾಧಿಸಿತು.

4 / 6
ಈ ಗೆಲುವಿನೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ಸೌತ್ ಆಫ್ರಿಕಾ ತಂಡವನ್ನು ಸೌತ್ ಆಫ್ರಿಕಾದಲ್ಲೇ ವೈಟ್ ವಾಶ್ ಮಾಡಿದ ವಿಶ್ವದ ಮೊದಲ ತಂಡ ಎಂಬ ಹೆಗ್ಗಳಿಕೆ ಪಾಕಿಸ್ತಾನ್ ತಂಡದ ಪಾಲಾಯಿತು. ಅಂದರೆ 53 ವರ್ಷಗಳ ಏಕದಿನ ಇತಿಹಾಸದಲ್ಲಿ ಯಾವುದೇ ತಂಡದ ವಿರುದ್ಧ ಸೌತ್ ಆಫ್ರಿಕಾ ತವರಿನಲ್ಲಿ ಕ್ಲೀನ್ ಸ್ವೀಪ್ ಸೋಲನುಭವಿಸಿಲ್ಲ.

5 / 6
ಇದೀಗ ಸೌತ್ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು ಪಾಕಿಸ್ತಾನ್ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಸೌತ್ ಆಫ್ರಿಕಾ ಪಡೆಯನ್ನು ಹರಿಣರ ನಾಡಲ್ಲಿ ವೈಟ್ ವಾಶ್ ಮಾಡಿದ ವಿಶ್ವದ ಏಕೈಕ ತಂಡವೆಂಬ ದಾಖಲೆಯನ್ನು ಪಾಕಿಸ್ತಾನ್ ತನ್ನದಾಗಿಸಿಕೊಂಡಿದೆ.

6 / 6
Follow us
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ

ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ

ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!

ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?

ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು

ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ

ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು

ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್

ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!

ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?