AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗಾಂಡ ದಾಖಲೆ ಸೇಫ್… ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಪಾಕಿಸ್ತಾನ್

Pakistan Records: ಶ್ರೀಲಂಕಾ ಹಾಗೂ ಝಿಂಬಾಬ್ವೆ ವಿರುದ್ಧ ತ್ರಿಕೋನ ಸರಣಿಯ ಫೈನಲ್​ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಜಯಗಳಿಸಿದೆ. ರಾವಲ್ಪಿಂಡಿಯಲ್ಲಿ ನಡೆದ ಅಂತಿಮ ಹಣಾಹಣಿಯಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿ ಪಾಕಿಸ್ತಾನ್ ತಂಡ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಈ ಗೆಲುವಿನೊಂದಿಗೆ ಪಾಕಿಸ್ತಾನ್ ತಂಡ ಟಿ20 ಕ್ರಿಕೆಟ್​​ನಲ್ಲಿ ಹೊಸ ಮೈಲುಗಲ್ಲನ್ನು ಮುಟ್ಟಿದೆ.

ಝಾಹಿರ್ ಯೂಸುಫ್
|

Updated on: Dec 01, 2025 | 7:54 AM

Share
ಟಿ20 ಕ್ರಿಕೆಟ್​​ನಲ್ಲಿ ಪಾಕಿಸ್ತಾನ್ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಒಂದೇ ವರ್ಷದಲ್ಲಿ ಅತೀ ಹೆಚ್ಚು ಗೆಲುವುಗಳನ್ನು ದಾಖಲಿಸುವ ಮೂಲಕ. ಅಂದರೆ ಪಾಕಿಸ್ತಾನ್ ತಂಡವು ಇದೇ ಮೊದಲ ಬಾರಿಗೆ ಒಂದೇ ವರ್ಷದೊಳಗೆ 20ಕ್ಕಿಂತ ಹೆಚ್ಚು ಟಿ20 ಪಂದ್ಯಗಳನ್ನು ಗೆದ್ದುಕೊಂಡಿದೆ.

1 / 5
ಶ್ರೀಲಂಕಾ, ಝಿಂಬಾಬ್ವೆ ವಿರುದ್ಧದ ತ್ರಿಕೋನ ಸರಣಿಯ 5 ಪಂದ್ಯಗಳಲ್ಲಿ 4 ಗೆಲುವು ದಾಖಲಿಸುವ ಮೂಲಕ ಪಾಕಿಸ್ತಾನ್ ತಂಡವು ಟಿ20 ಕ್ರಿಕೆಟ್​​ನಲ್ಲಿ ವಿಶೇಷ ಮೈಲುಗಲ್ಲು ದಾಟಿದೆ. ಈ ವರ್ಷ ಪಾಕ್ ತಂಡ ಆಡಿದ 34 ಟಿ20 ಪಂದ್ಯಗಳಲ್ಲಿ ಬರೋಬ್ಬರಿ 21 ಮ್ಯಾಚ್​​​ಗಳಲ್ಲಿ ಗೆಲುವು ದಾಖಲಿಸಿದೆ.

2 / 5
ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಪಾಕಿಸ್ತಾನ್ ತಂಡವು ಇದೇ ಮೊದಲ ಬಾರಿಗೆ 21 ಮ್ಯಾಚ್​​ಗಳನ್ನು ಗೆದ್ದ ಸಾಧನೆ ಮಾಡಿದೆ. ಇದಕ್ಕೂ ಮುನ್ನ 2021 ರಲ್ಲಿ ಆಡಿದ 29 ಪಂದ್ಯಗಳಲ್ಲಿ 20 ಮ್ಯಾಚ್​ ಗೆದ್ದಿದ್ದು ಶ್ರೇಷ್ಠ ಸಾಧನೆಯಾಗಿತ್ತು. ಈ ಬಾರಿ ಈ ದಾಖಲೆಯನ್ನು ಮುರಿದು ಪಾಕ್ ಪಡೆ ಮುನ್ನುಗ್ಗಿದೆ.

3 / 5
ಇದಾಗ್ಯೂ ಉಗಾಂಡ ತಂಡದ ಹೆಸರಿನಲ್ಲಿರುವ ವಿಶ್ವ ದಾಖಲೆ ಮುರಿಯಲು ಸಾಧ್ಯವಾಗುವುದಿಲ್ಲ. ಏಕೆಂದರೆ ಪಾಕಿಸ್ತಾನ್ ತಂಡವು ಡಿಸೆಂಬರ್​​ ತಿಂಗಳಲ್ಲಿ ಯಾವುದೇ ಟಿ20 ಸರಣಿ ಆಡುತ್ತಿಲ್ಲ. ಅಲ್ಲದೆ ಮುಂದಿನ ಸರಣಿ ಇರುವುದು ಜನವರಿ ತಿಂಗಳಲ್ಲಿ. ಹೀಗಾಗಿ ಒಂದೇ ವರ್ಷ ಅತ್ಯಧಿಕ ಟಿ20 ಪಂದ್ಯಗಳನ್ನು ಗೆದ್ದ ಉಗಾಂಡ ತಂಡದ ದಾಖಲೆಯನ್ನು ಮುರಿಯಲು ಪಾಕ್ ತಂಡಕ್ಕೆ ಸಾಧ್ಯವಾಗುವುದಿಲ್ಲ.

4 / 5
ಉಗಾಂಡ ತಂಡವು 2023 ರಲ್ಲಿ ಆಡಿದ 33 ಮ್ಯಾಚ್​​ಗಳಲ್ಲಿ ಬರೋಬ್ಬರಿ 29 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಟಿ20 ಇತಿಹಾಸದಲ್ಲೇ ಒಂದೇ ವರ್ಷ ಅತೀ ಹೆಚ್ಚು ಪಂದ್ಯಗಳನ್ನು ಗೆದ್ದ ವಿಶ್ವ ದಾಖಲೆ ನಿರ್ಮಿಸಿದೆ. ಉಗಾಂಡ ಹೆಸರಿನಲ್ಲಿರುವ ಈ ವಿಶೇಷ ವಿಶ್ವ ದಾಖಲೆಯನ್ನು 2026 ರಲ್ಲಿ ಯಾರು ಮುರಿಯಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

5 / 5
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?

ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ

ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ

ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!

ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ