ಮೊಹಮ್ಮದ್ ಅಮೀರ್ ಅವರಂತೆ, ಮೊಹಮ್ಮದ್ ಆಸಿಫ್ ಕೂಡ ಈಗ ಹೆಚ್ಚಾಗಿ ಇಂಗ್ಲೆಂಡ್‌ನಲ್ಲಿ ವಾಸಿಸುತ್ತಿದ್ದಾರೆ. ನಿಷೇಧದ ನಂತರ, ಅವರು ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಿದರಾದರೂ ಹೆಚ್ಚಿನ ಅವಕಾಶ ಸಿಗಲಿಲ್ಲ. ಹೀಗಾಗಿ ಅವರು ಸೋಶಿಯಲ್ ಮೀಡಿಯಾದಲ್ಲಿ ಕ್ರಿಕೆಟ್ ಬಗ್ಗೆ ತಮ್ಮ ಅಭಿಪ್ರಾಯವನ್ನು ನೀಡುವುದರಲ್ಲಿ ನಿರತರಾಗಿದ್ದಾರೆ. ಇವರಲ್ಲದೆ, ಸಲ್ಮಾನ್ ಬಟ್ ಕೂಡ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಿದರು. ಪ್ರಸ್ತುತ, ಅವರು ಪಾಕಿಸ್ತಾನದಲ್ಲಿ ನೆಲೆಸಿದ್ದು, ಅಲ್ಲಿ ತಾವೇ ಒಂದು ಯೂಟ್ಯೂಬ್ ಚಾನೆಲ್ ಅನ್ನು ನಡೆಸುತ್ತ ಜೀವನ ಸಾಗಿಸುತ್ತಿದ್ದಾರೆ.