13 ಸೋಲುಗಳೊಂದಿಗೆ ಅತ್ಯಂತ ಹೀನಾಯ ದಾಖಲೆ ಬರೆದ ಪಾಕಿಸ್ತಾನ್

Pakistan Record: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಪಾಕಿಸ್ತಾನ್ ತಂಡ ಮುಗ್ಗರಿಸಿದೆ. ಈ ಹ್ಯಾಟ್ರಿಕ್ ಸೋಲುಗಳೊಂದಿಗೆ ಈ ವರ್ಷ ಅತ್ಯಧಿಕ ಟಿ20 ಪಂದ್ಯಗಳನ್ನು ಸೋತ ಪೂರ್ಣ ಸದಸ್ಯ ತಂಡ ಎನಿಸಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Nov 19, 2024 | 11:09 AM

ಪಾಕಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಸ್ಟ್ರೇಲಿಯಾ 3-0 ಅಂತರದಿಂದ ಗೆದ್ದುಕೊಂಡಿದೆ. ಈ ಹ್ಯಾಟ್ರಿಕ್ ಸೋಲಿನೊಂದಿಗೆ 2024 ರಲ್ಲಿ ಅತ್ಯಧಿಕ ಟಿ20 ಪಂದ್ಯಗಳನ್ನು ಸೋತ ತಂಡಗಳ ಪಟ್ಟಿಯಲ್ಲಿ ಪಾಕಿಸ್ತಾನ್ ಅಗ್ರಸ್ಥಾನಕ್ಕೇರಿದೆ.

1 / 5
ಈ ವರ್ಷ ಪಾಕಿಸ್ತಾನ್ ತಂಡವು ಒಟ್ಟು 22 ಟಿ20 ಪಂದ್ಯಗಳನ್ನಾಡಿದ್ದು, ಈ ವೇಳೆ ಗೆದ್ದಿರುವುದು ಕೇವಲ 7 ಮ್ಯಾಚ್​ಗಳಲ್ಲಿ ಮಾತ್ರ. ಇನ್ನು 2 ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿವೆ. ಇನ್ನುಳಿದ 13 ಪಂದ್ಯಗಳಲ್ಲಿ ಮುಗ್ಗರಿಸುವ ಮೂಲಕ ಪಾಕ್ ಪಡೆ ಈ ವರ್ಷ ಅತ್ಯಧಿಕ ಟಿ20 ಪಂದ್ಯಗಳನ್ನು ಸೋತ ಪೂರ್ಣ ಸದಸ್ಯ ತಂಡ ಎನಿಸಿಕೊಂಡಿದೆ.

2 / 5
ಮತ್ತೊಂದೆಡೆ ಈ ವರ್ಷ ಆಡಿದ 26 ಪಂದ್ಯಗಳಲ್ಲಿ ಟೀಮ್ ಇಂಡಿಯಾ 24 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು ಭಾರತ ತಂಡ ಸೋತಿರುವುದು ಝಿಂಬಾಬ್ವೆ ಮತ್ತು ಸೌತ್ ಆಫ್ರಿಕಾ ವಿರುದ್ಧ ಮಾತ್ರ. ಅದರಲ್ಲೂ ಟಿ20 ವಿಶ್ವಕಪ್​ನಲ್ಲಿ ಸೋಲಿಲ್ಲದ ಸರದಾರನಾಗಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡು ಇತಿಹಾಸ ನಿರ್ಮಿಸಿದೆ.

3 / 5
ಆದರೆ ಅತ್ತ ನಾಯಕತ್ವದ ಬದಲಾವಣೆಯೊಂದಿಗೆ ಹಲವು ಸರಣಿಗಳನ್ನು ಆಡಿದ ಪಾಕಿಸ್ತಾನ್ ಅತ್ಯಂತ ಹೀನಾಯ ಪ್ರದರ್ಶನ ನೀಡುತ್ತಾ ಬಂದಿದೆ. ಇದೀಗ ಮೊಹಮ್ಮದ್ ರಿಝ್ವಾನ್ ಮುಂದಾಳತ್ವದಲ್ಲಿ ಕಣಕ್ಕಿಳಿದಿರುವ ಪಾಕ್ ಪಡೆ ಆಸ್ಟ್ರೇಲಿಯಾದಲ್ಲಿ ವೈಟ್ ವಾಶ್ ಮುಖಭಂಗ ಅನುಭವಿಸಿದೆ. ಇದರೊಂದಿಗೆ ಈ ವರ್ಷ ಅತ್ಯಧಿಕ ಟಿ20 ಪಂದ್ಯಗಳಲ್ಲಿ ಪರಾಜಯಗೊಂಡ ಪೂರ್ಣ ಸದಸ್ಯ (ಟೆಸ್ಟ್ ಆಡುವ) ತಂಡ ಎನಿಸಿಕೊಂಡಿದೆ.

4 / 5
ಇನ್ನು 2024 ರಲ್ಲಿ ಅತೀ ಹೆಚ್ಚು ಟಿ20 ಪಂದ್ಯಗಳನ್ನು ಸೋತ ತಂಡಗಳ ಪೈಕಿ ಇಂಡೋನೇಷ್ಯಾ ತಂಡ ಮೊದಲ ಸ್ಥಾನದಲ್ಲಿದೆ. ಒಟ್ಟು 26 ಪಂದ್ಯಗಳನ್ನಾಡಿರುವ ಇಂಡೋನೇಷ್ಯಾ 15 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಇದೀಗ ಝಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಸಜ್ಜಾಗಿರುವ ಪಾಕಿಸ್ತಾನ್ 2 ಪಂದ್ಯಗಳಲ್ಲಿ ಸೋತರೆ, ಅತ್ಯಂತ ಹೀನಾಯ ದಾಖಲೆ ಪಾಕ್ ಪಾಲಾಗಲಿದೆ.

5 / 5
Follow us
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?

‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ

ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್

ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!

ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ

ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?

ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ

"ಇಸ್ಪೀಟ್ ಆಟ ಆಡಲೇಬೇಕಾ ಸರ್​"? ಪೊಲೀಸರಿಗೆ ಮಕ್ಕಳ ಪ್ರಶ್ನೆ
ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ

ರಜತ್ ಆಯ್ತು ಈಗ ತ್ರಿವಿಕ್ರಂಗೆ ತಲೆ ಬೋಳಿಸೋ ಚಾಲೆಂಜ್; ಒಪ್ಪಿದ್ರಾ?