13 ಸೋಲುಗಳೊಂದಿಗೆ ಅತ್ಯಂತ ಹೀನಾಯ ದಾಖಲೆ ಬರೆದ ಪಾಕಿಸ್ತಾನ್
Pakistan Record: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಪಾಕಿಸ್ತಾನ್ ತಂಡ ಮುಗ್ಗರಿಸಿದೆ. ಈ ಹ್ಯಾಟ್ರಿಕ್ ಸೋಲುಗಳೊಂದಿಗೆ ಈ ವರ್ಷ ಅತ್ಯಧಿಕ ಟಿ20 ಪಂದ್ಯಗಳನ್ನು ಸೋತ ಪೂರ್ಣ ಸದಸ್ಯ ತಂಡ ಎನಿಸಿಕೊಂಡಿದೆ.
1 / 5
ಪಾಕಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಸ್ಟ್ರೇಲಿಯಾ 3-0 ಅಂತರದಿಂದ ಗೆದ್ದುಕೊಂಡಿದೆ. ಈ ಹ್ಯಾಟ್ರಿಕ್ ಸೋಲಿನೊಂದಿಗೆ 2024 ರಲ್ಲಿ ಅತ್ಯಧಿಕ ಟಿ20 ಪಂದ್ಯಗಳನ್ನು ಸೋತ ತಂಡಗಳ ಪಟ್ಟಿಯಲ್ಲಿ ಪಾಕಿಸ್ತಾನ್ ಅಗ್ರಸ್ಥಾನಕ್ಕೇರಿದೆ.
2 / 5
ಈ ವರ್ಷ ಪಾಕಿಸ್ತಾನ್ ತಂಡವು ಒಟ್ಟು 22 ಟಿ20 ಪಂದ್ಯಗಳನ್ನಾಡಿದ್ದು, ಈ ವೇಳೆ ಗೆದ್ದಿರುವುದು ಕೇವಲ 7 ಮ್ಯಾಚ್ಗಳಲ್ಲಿ ಮಾತ್ರ. ಇನ್ನು 2 ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿವೆ. ಇನ್ನುಳಿದ 13 ಪಂದ್ಯಗಳಲ್ಲಿ ಮುಗ್ಗರಿಸುವ ಮೂಲಕ ಪಾಕ್ ಪಡೆ ಈ ವರ್ಷ ಅತ್ಯಧಿಕ ಟಿ20 ಪಂದ್ಯಗಳನ್ನು ಸೋತ ಪೂರ್ಣ ಸದಸ್ಯ ತಂಡ ಎನಿಸಿಕೊಂಡಿದೆ.
3 / 5
ಮತ್ತೊಂದೆಡೆ ಈ ವರ್ಷ ಆಡಿದ 26 ಪಂದ್ಯಗಳಲ್ಲಿ ಟೀಮ್ ಇಂಡಿಯಾ 24 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು ಭಾರತ ತಂಡ ಸೋತಿರುವುದು ಝಿಂಬಾಬ್ವೆ ಮತ್ತು ಸೌತ್ ಆಫ್ರಿಕಾ ವಿರುದ್ಧ ಮಾತ್ರ. ಅದರಲ್ಲೂ ಟಿ20 ವಿಶ್ವಕಪ್ನಲ್ಲಿ ಸೋಲಿಲ್ಲದ ಸರದಾರನಾಗಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡು ಇತಿಹಾಸ ನಿರ್ಮಿಸಿದೆ.
4 / 5
ಆದರೆ ಅತ್ತ ನಾಯಕತ್ವದ ಬದಲಾವಣೆಯೊಂದಿಗೆ ಹಲವು ಸರಣಿಗಳನ್ನು ಆಡಿದ ಪಾಕಿಸ್ತಾನ್ ಅತ್ಯಂತ ಹೀನಾಯ ಪ್ರದರ್ಶನ ನೀಡುತ್ತಾ ಬಂದಿದೆ. ಇದೀಗ ಮೊಹಮ್ಮದ್ ರಿಝ್ವಾನ್ ಮುಂದಾಳತ್ವದಲ್ಲಿ ಕಣಕ್ಕಿಳಿದಿರುವ ಪಾಕ್ ಪಡೆ ಆಸ್ಟ್ರೇಲಿಯಾದಲ್ಲಿ ವೈಟ್ ವಾಶ್ ಮುಖಭಂಗ ಅನುಭವಿಸಿದೆ. ಇದರೊಂದಿಗೆ ಈ ವರ್ಷ ಅತ್ಯಧಿಕ ಟಿ20 ಪಂದ್ಯಗಳಲ್ಲಿ ಪರಾಜಯಗೊಂಡ ಪೂರ್ಣ ಸದಸ್ಯ (ಟೆಸ್ಟ್ ಆಡುವ) ತಂಡ ಎನಿಸಿಕೊಂಡಿದೆ.
5 / 5
ಇನ್ನು 2024 ರಲ್ಲಿ ಅತೀ ಹೆಚ್ಚು ಟಿ20 ಪಂದ್ಯಗಳನ್ನು ಸೋತ ತಂಡಗಳ ಪೈಕಿ ಇಂಡೋನೇಷ್ಯಾ ತಂಡ ಮೊದಲ ಸ್ಥಾನದಲ್ಲಿದೆ. ಒಟ್ಟು 26 ಪಂದ್ಯಗಳನ್ನಾಡಿರುವ ಇಂಡೋನೇಷ್ಯಾ 15 ಮ್ಯಾಚ್ಗಳಲ್ಲಿ ಸೋಲನುಭವಿಸಿದೆ. ಇದೀಗ ಝಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಸಜ್ಜಾಗಿರುವ ಪಾಕಿಸ್ತಾನ್ 2 ಪಂದ್ಯಗಳಲ್ಲಿ ಸೋತರೆ, ಅತ್ಯಂತ ಹೀನಾಯ ದಾಖಲೆ ಪಾಕ್ ಪಾಲಾಗಲಿದೆ.