AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೋಘ ಗೆಲುವಿನೊಂದಿಗೆ ಭಾರತದ ದಾಖಲೆ ಮುರಿದ ಪಾಕಿಸ್ತಾನ್

Australia vs Pakistan: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಮ್ಯಾಚ್​ನಲ್ಲಿ ಪಾಕಿಸ್ತಾನ್ ತಂಡ ಭರ್ಜರಿ ಜಯ ಸಾಧಿಸಿದೆ. ಇದಕ್ಕೂ ಮುನ್ನ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 2 ವಿಕೆಟ್​ಗಳ ರೋಚಕ ಜಯ ಸಾಧಿಸಿತ್ತು. ಇದೀಗ ಸರಣಿಯು 1-1 ಅಂತರದಿಂದ ಸಮಗೊಂಡಿದ್ದು, ಹೀಗಾಗಿ ಅಂತಿಮ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ.

ಝಾಹಿರ್ ಯೂಸುಫ್
|

Updated on:Nov 09, 2024 | 11:10 AM

Share
ಆಸ್ಟ್ರೇಲಿಯಾ ತಂಡವನ್ನು ಆಸ್ಟ್ರೇಲಿಯಾದಲ್ಲೇ ಸೋಲಿಸುವುದು ಅಂದುಕೊಂಡಷ್ಟು ಸುಲಭವಲ್ಲ. ಹೀಗಾಗಿಯೇ ಆಸೀಸ್ ಪಿಚ್​ನಲ್ಲಿನ ಗೆಲುವನ್ನು ಶ್ರೇಷ್ಠ ಜಯ ಎಂದು ಬಣ್ಣಿಸಲಾಗುತ್ತದೆ. ಇದೀಗ ಅಂತಹದೊಂದು ಅಮೋಘ ಗೆಲುವು ದಾಖಲಿಸಿ ಪಾಕಿಸ್ತಾನ್ ತಂಡ ಇಡೀ ವಿಶ್ವದ ಗಮನ ಸೆಳೆದಿದೆ.

1 / 6
ಅಡಿಲೇಡ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸೀಸ್ ಪಡೆ 35 ಓವರ್​ಗಳಲ್ಲಿ 163 ರನ್​ಗಳಿಸಿ ಆಲೌಟ್ ಆಗಿತ್ತು. ಈ ಟಾರ್ಗೆಟ್​ ಅನ್ನು ಬೆನ್ನತ್ತಿದ ಪಾಕಿಸ್ತಾನ್ 26.3 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 169 ರನ್​ಗಳಿಸಿ ಅಮೋಘ ಗೆಲುವು ದಾಖಲಿಸಿದೆ.

2 / 6
ಈ ಗೆಲುವಿನೊಂದಿಗೆ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಆಸ್ಟ್ರೇಲಿಯಾವನ್ನು ತವರಿನಲ್ಲಿ ಅತ್ಯಧಿಕ ಬಾರಿ ಸೋಲಿಸಿದ ಏಷ್ಯನ್ ತಂಡವೆಂಬ ಹೆಗ್ಗಳಿಕೆ ಪಾಕಿಸ್ತಾನ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಹೆಸರಿನಲ್ಲಿತ್ತು.

3 / 6
ಆಸ್ಟ್ರೇಲಿಯಾದಲ್ಲಿ ಭಾರತ ತಂಡವು 99 ಏಕದಿನ ಪಂದ್ಯಗಳನ್ನಾಡಿದೆ. ಈ ವೇಳೆ ಟೀಮ್ ಇಂಡಿಯಾ 40 ಬಾರಿ ಜಯ ಸಾಧಿಸಿದೆ. ಈ ಮೂಲಕ ಆಸ್ಟ್ರೇಲಿಯಾದಲ್ಲಿ ಅತ್ಯಧಿಕ ಗೆಲುವು ದಾಖಲಿಸಿದ ಏಷ್ಯನ್ ತಂಡ ಎನಿಸಿಕೊಂಡಿತ್ತು.

4 / 6
ಇದೀಗ ಈ ದಾಖಲೆಯನ್ನು ಪಾಕಿಸ್ತಾನ್ ಪಡೆ ಮುರಿದೆ. ಕಾಂಗರೂ ನಾಡಿನಲ್ಲಿ 110 ಏಕದಿನ ಪಂದ್ಯಗಳನ್ನಾಡಿರುವ ಪಾಕಿಸ್ತಾನ್ 41 ಮ್ಯಾಚ್​ಗಳಲ್ಲಿ ಜಯ ದಾಖಲಿಸುವ ಮೂಲಕ, ಆಸ್ಟ್ರೇಲಿಯಾದಲ್ಲಿ ಅತೀ ಹೆಚ್ಚು ಏಕದಿನ ಪಂದ್ಯ ಗೆದ್ದ ಏಷ್ಯಾದ ತಂಡ ಎನಿಸಿಕೊಂಡಿದೆ.

5 / 6
ಇನ್ನು ಆಸ್ಟ್ರೇಲಿಯಾ ತಂಡವನ್ನು ಅವರದ್ದೇ ನೆಲದಲ್ಲಿ ಅತ್ಯಧಿಕ ಬಾರಿ ಸೋಲಿಸಿದ ದಾಖಲೆ ವೆಸ್ಟ್ ಇಂಡೀಸ್ ತಂಡದ ಹೆಸರಿನಲ್ಲಿದೆ. ವಿಂಡೀಸ್ ಪಡೆ 149 ಏಕದಿನ ಪಂದ್ಯಗಳಲ್ಲಿ 75 ಮ್ಯಾಚ್​ಗಳ ಜಯ ಸಾಧಿಸಿ ಈ ಅಮೋಘ ದಾಖಲೆ ಬರೆದಿದೆ.

6 / 6

Published On - 11:09 am, Sat, 9 November 24

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!