AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 5.64 ರನ್​ ರೇಟ್: ಅತ್ಯಂತ ಹೀನಾಯ ದಾಖಲೆ ಬರೆದ ಪಾಕಿಸ್ತಾನ್

Bangladesh vs Pakistan, 1st T20I: ಬಾಂಗ್ಲಾದೇಶ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಹೀನಾಯ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ 19.3 ಓವರ್​ಗಳಲ್ಲಿ 109 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು 15.3 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಬಾಂಗ್ಲಾದೇಶ್ ತಂಡ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Jul 21, 2025 | 8:04 AM

Share
ಬಾಂಗ್ಲಾದೇಶ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲೇ ಪಾಕಿಸ್ತಾನ್ ತಂಡ ಮಕಾಡೆ ಮಲಗಿದೆ. ಅದು ಕೂಡ ಹೀನಾಯ ದಾಖಲೆ ಬರೆಯುವ ಮೂಲಕ ಎಂಬುದು ವಿಶೇಷ. ಢಾಕಾದ ಶೇರೆ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡದ ನಾಯಕ ಲಿಟ್ಟನ್ ದಾಸ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 5
ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ದಾಳಿ ಸಂಘಟಿಸಿದ ಬಾಂಗ್ಲಾದೇಶ್ ಬೌಲರ್​ಗಳು ಪವರ್​ಪ್ಲೇನಲ್ಲಿ ಕೇವಲ 41 ರನ್​ ನೀಡಿ 4 ವಿಕೆಟ್ ಕಬಳಿಸಿದ್ದರು. ಇದಾದ ಬಳಿಕ ಕೂಡ ರನ್​ ಗಳಿಸಲು ಪರದಾಡಿದ ಪಾಕಿಸ್ತಾನ್ ಬ್ಯಾಟರ್​ಗಳು 19.3 ಓವರ್​ಗಳಲ್ಲಿ 109 ರನ್​ಗಳಿಸಿ ಆಲೌಟ್ ಆಯಿತು. ವಿಶೇಷ ಎಂದರೆ ಇದು ಬಾಂಗ್ಲಾದೇಶ್ ವಿರುದ್ಧ ಟಿ20 ಪಂದ್ಯದಲ್ಲಿ ಪಾಕ್ ಕಲೆಹಾಕಿದ ಅತ್ಯಂತ ಕನಿಷ್ಠ ಸ್ಕೋರ್.

2 / 5
ಇದಕ್ಕೂ ಮುನ್ನ 2021 ರಲ್ಲಿ ಮಿರ್​ಪುರ್​​ನಲ್ಲಿ ನಡೆದ ಟಿ20 ಪಂದ್ಯದಲ್ಲಿ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 127 ರನ್​ ಗಳಿಸಿದ್ದು ಅತೀ ಕಡಿಮೆ ಸ್ಕೋರ್ ಆಗಿತ್ತು. ಆದರೆ ಈ ಬಾರಿ ಬಾಂಗ್ಲಾದೇಶ್ ಬೌಲರ್​ಗಳ ಮುಂದೆ ರನ್​ಗಳಿಸಲು ಪರದಾಡಿದ ಪಾಕಿಸ್ತಾನಿಯರು ಕೇವಲ 109 ರನ್​ಗಳಿಗೆ ಆಲೌಟ್ ಆಗುವ ಮೂಲಕ ಭಾರೀ ಮುಖಭಂಗ ಅನುಭವಿಸಿದ್ದಾರೆ.

3 / 5
ಅದರಲ್ಲೂ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಪಾಕಿಸ್ತಾನ್ ತಂಡವು ಬಾಂಗ್ಲಾದೇಶ್ ವಿರುದ್ಧ ಆರಕ್ಕಿಂತ ಕಡಿಮೆ ಸರಾಸರಿಯಲ್ಲಿ ರನ್​ ಗಳಿಸಿದ್ದಾರೆ. ಢಾಕಾದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ 5.64 ರನ್​ ರೇಟ್​ನಲ್ಲಿ  109 ರನ್​ಗಳಿಸಿ ಬಾಂಗ್ಲಾದೇಶ್ ವಿರುದ್ಧ ಅತ್ಯಂತ ಕಳಪೆ ಪ್ರದರ್ಶನವನ್ನು ಪಾಕಿಸ್ತಾನ್ ತಂಡ ಮುಂದಿಟ್ಟಿದೆ. ಇದಾಗ್ಯೂ ಇದು ಪಾಕ್ ತಂಡದ ಕನಿಷ್ಠ ಟಿ20 ಸ್ಕೋರ್ ಅಲ್ಲ .

4 / 5
ಪಾಕಿಸ್ತಾನ್ ತಂಡವು ಟಿ20 ಕ್ರಿಕೆಟ್​ನಲ್ಲಿ ಕಲೆಹಾಕಿದ ಅತ್ಯಂತ ಕಡಿಮೆ ಮೊತ್ತ 74 ರನ್​ಗಳು. 2012 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 169 ರನ್​ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡವು ಕೇವಲ 74 ರನ್​ಗಳಿಗೆ ಆಲೌಟ್ ಆಗಿದ್ದರು. ಇದುವೇ ಪಾಕ್ ತಂಡದ ಟಿ20 ಇನಿಂಗ್ಸ್​ನ ಅತ್ಯಂತ ಕಡಿಮೆ ಸ್ಕೋರ್. ಇದೀಗ ಬಾಂಗ್ಲಾದೇಶ್ ವಿರುದ್ಧ ಕೇವಲ 109 ರನ್​ಗಳಿಸಿ ಆಲೌಟ್ ಆಗಿ ಭಾರೀ ಮುಖಭಂಗಕ್ಕೆ ಒಳಗಾಗಿದ್ದಾರೆ.

5 / 5
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ