ಟಿ20 ವಿಶ್ವಕಪ್ಗೆ ಬಲಿಷ್ಠ ಪಾಕಿಸ್ತಾನ್ ತಂಡ ಪ್ರಕಟ
T20 World Cup 2026 Pakistan Squad : ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್ಗಳಾಗಿ ವಿಂಗಡಿಸಲಾಗಿದೆ. ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಪಾಕಿಸ್ತಾನ್ ತಂಡವು ಇದೀಗ ಬಲಿಷ್ಠ ಪಡೆಯನ್ನು ಘೋಷಿಸಿದೆ.
Updated on: Jan 25, 2026 | 2:23 PM

T20 World Cup 2026: ಟಿ20 ವಿಶ್ವಕಪ್ಗಾಗಿ ಪಾಕಿಸ್ತಾನ್ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಸಲ್ಮಾನ್ ಅಲಿ ಅಘಾ ಮುನ್ನಡೆಸಲಿದ್ದಾರೆ. ಇನ್ನು ಈ ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಕಾಣಿಸಿಕೊಂಡಿದೆ. ಅದರಲ್ಲೂ ಮುಂಬರುವ ಟಿ20 ವಿಶ್ವಕಪ್ಗೆ ಬಾಬರ್ ಆಝಂ ಅವರನ್ನು ಆಯ್ಕೆ ಮಾಡಲಾಗಿದೆ.

ಬಾಬರ್ ಆಝಂ ಅಲ್ಲದೆ, ಪ್ರಮುಖ ವೇಗಿಯಾಗಿ ಶಾಹೀನ್ ಶಾ ಅಫ್ರಿದಿ ಕೂಡ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಆರಂಭಿಕ ದಾಂಡಿಗರಾಗಿ ಸೈಮ್ ಅಯ್ಯೂಬ್ ಹಾಗೂ ಸಾಹಿಬ್ಝಾದ ಫರ್ಹಾನ್ ಅವರನ್ನು ಆಯ್ಕೆ ಮಾಡಲಾಗಿದೆ. ಹೀಗಾಗಿ ಅನುಭವಿ ದಾಂಡಿಗ ಫಖರ್ ಝಮಾನ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ.

ಇವರೊಂದಿಗೆ ಆಲ್ರೌಂಡರ್ಗಳಾಗಿ ಮೊಹಮ್ಮದ್ ನವಾಝ್, ಶಾದಾಬ್ ಖಾನ್, ಫಹೀಮ್ ಅಶ್ರಫ್ ತಂಡದಲ್ಲಿದ್ದಾರೆ. ಹಾಗೆಯೇ ವೇಗಿಗಳಾಗಿ ನಸೀಮ್ ಶಾ ಇದ್ದರೆ ಪ್ರಮುಖ ಸ್ಪಿನ್ನರ್ ಆಗಿ ಅಬ್ರಾರ್ ಅಹ್ಮದ್ 15 ಸದಸ್ಯರುಗಳ ಬಳಗದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇದಾಗ್ಯೂ ಈ ತಂಡದಲ್ಲಿ ಅನುಭವಿ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಝ್ವಾನ್ಗೆ ಸ್ಥಾನ ಲಭಿಸಿಲ್ಲ. ಹಾಗೆಯೇ ಪ್ರಮುಖ ವೇಗಿಯಾಗಿದ್ದ ಹ್ಯಾರಿಸ್ ರೌಫ್ರನ್ನು ಕೂಡ ಈ ಬಾರಿ ತಂಡಕ್ಕೆ ಆಯ್ಕೆ ಮಾಡಿಲ್ಲ. ಅದರಂತೆ ಟಿ20 ವಿಶ್ವಕಪ್ಗೆ ಪಾಕಿಸ್ತಾನ್ ತಂಡ ಈ ಕೆಳಗಿನಂತಿದೆ...

ಟಿ20 ವಿಶ್ವಕಪ್ಗೆ ಪಾಕಿಸ್ತಾನ್ ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಬಾಬರ್ ಆಝಂ, ಫಹೀಮ್ ಅಶ್ರಫ್, ಫಖರ್ ಝಮಾನ್, ಖ್ವಾಜಾ ಮೊಹಮ್ಮದ್ ನಫಾಯ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಝ್, ಮೊಹಮ್ಮದ್ ಸಲ್ಮಾನ್ ಮಿರ್ಝ, ನಸೀಮ್ ಶಾ, ಸಾಹಿಬ್ಝಾದ ಫರ್ಹಾನ್ (ವಿಕೆಟ್ ಕೀಪರ್), ಸೈಮ್ ಅಯ್ಯೂಬ್, ಶಾಹೀನ್ ಶಾ ಅಫ್ರಿದಿ, ಉಸ್ಮಾನ್ ತಾರಿಖ್, ಶಾದಾಬ್ ಖಾನ್, ಉಸ್ಮಾನ್ ಖಾನ್ (ವಿಕೆಟ್ ಕೀಪರ್).
